Headlines

ಒತ್ತಡ ನಿರ್ವಹಣೆಗೆ ಆದ್ಯತೆ ಅವಶ್ಯ * ಬೆಳದಿಂಗಳ ಸಮ್ಮೇಳನಾಧ್ಯಕ್ಷತೆಗೆ ಬನ್ನಂಜೆ ಆಯ್ಕೆ * ಕಥೋಲಿಕ್ ಸಮಾಜೋತ್ಸವ * ಅಶ್ವತ್ಥಪುರದಲ್ಲಿ ಡಾ.ಸುಧೀರ್ ಹೆಗ್ಡೆ ನೇತೃತ್ವದಲ್ಲಿ ನೇತ್ರ ಚಿಕಿತ್ಸೆ ಶಿಬಿರ * ರೋಟರಿಯಿಂದ ಗಣರಾಜ್ಯೋತ್ಸವ ಆಚರಣೆ * ರಾಷ್ಟ್ರೀಯ ಐಕ್ಯತೆಗೆ ಯುವಪಡೆ ಸಿದ್ಧವಾಗಲಿ: ವಿನಯ ಹೆಗ್ಡೆ * ಮಹಾಮಜ್ಜನಕ್ಕೆ ಸಿದ್ದತೆ ಪೂರ್ಣ * ಶ್ರೀಬಾಹುಬಲಿ ಅಹಿಂಸಾದಿಗ್ವಿಜಯಂ ಲೋಕಾರ್ಪಣೆ * ಲೋಕಾಯುಕ್ತ ಪ್ರವಾಸ * ರೋಟರಿಯಿಂದ ಸಾಧಕರಿಗೆ ಸನ್ಮಾನ * ಸ್ವರಾಜ್ಯ ಮೈದಾನದ ಮೇಲೆ ತೂಗುಗತ್ತಿ…! * ಡಾ.ಸುಧೀರ್ ಹೆಗ್ಡೆ ನೇತೃತ್ವದಲ್ಲಿಕಣ್ಣಿನತಪಾಸಣಾ ಶಿಬಿರ * ಯುವಶಕ್ತಿಗೆ ಪರಿಸರಪ್ರಜ್ಞೆಯ ಅರಿವು ಮೂಡಿಸಿದ ಮಹಾಕಾರ್ಯ * ಮೂಡಬಿದಿರೆ ಶಿಕ್ಷಣ ಪ್ರೇಮಿಗಳ ನಾಡು: ಅಭಯಚಂದ್ರ ಜೈನ್ * 50ನೇ ವೈದ್ಯಕೀಯ ತಪಾಸಣಾ ಶಿಬಿರ * ಜ.21-25: ಮೂಡಬಿದಿರೆಯಲ್ಲಿ ರಾಷ್ಟ್ರೀಯ ವೈಯ್ಟ್ ಲಿಫ್ಟಿಂಗ್ * ರಾಜ್ಯಮಟ್ಟದ ಟಿ-20 ಕ್ರಿಕೆಟ್ ಟೂರ್ನಿ: ಆಳ್ವಾಸ್‍ಗೆ ಪ್ರಶಸ್ತಿ * ಕವಿಕುಲಗುರು ಕುಮಾರವ್ಯಾಸ * ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಒಡ್ಡು ನಿರ್ಮಾಣ * ಕಣ್ಣಿನ ಉಚಿತ ತಪಾಸಣೆಹಾಗೂ ಚಿಕಿತ್ಸಾ ಶಿಬಿರ *

ಅಂತರ್ ಕಾಲೇಜು ಸಾಫ್ಟ್ ಬಾಲ್ ಟೂರ್ನಮೆಂಟ್ ಆರಂಭ

#abhay#chandra#jain#mla#moodbidri#vaarte

ಮೂಡಬಿದಿರೆ: ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ವಿಭಾಗದ ಸಾಫ್ಟ್ ಬಾಲ್ ಟೂರ್ನ್ ಮೆಂಟ್ ಮೂಡಬಿದಿರೆ ಮಹಾವೀರ ಕಾಲೇಜು ಮೈದಾನದಲ್ಲಿ ಮಂಗಳವಾರ ನಡೆಯಿತು.
ಉದ್ಯಮಿ ಅರುಣ್ ಮೆಂಡಿಸ್ ಕಾರ್ಯಕ್ರಮ ಉದ್ಘಾಟಿಸಿ, ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ನೆಮ್ಮದಿ ಪ್ರಾಪ್ತವಾಗುವುದರೊಂದಿಗೆ ಏಕಾಗ್ರತೆ ಹೆಚ್ಚುತ್ತದೆ ಎಂದವರು ಹೇಳಿದರು. ಶಾಸಕ ಕೆ.ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸಿ ಕ್ರೀಡೆಗೆ ಇಂದು ಸರಕಾರದ ಮಟ್ಟದಲ್ಲಿ ಉತ್ತಮ ಪ್ರೋತ್ಸಾಹ ದೊರಕುತ್ತಿದೆ ಎಂದರು.
ಮಹಾವೀರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಮೇಶ್ ಭಟ್, ವಿ.ವಿ. ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಕಿಶೋರ್ ಕುಮಾರ್ ಸಿ.ಕೆ, ದೈಹಿಕ ಶಿಕ್ಷಣ ನಿರ್ದೇಶಕ ರಾಜ್ ಪ್ರಸಾದ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಹರೀಶ್, ವೇಣುಗೋಪಾಲ್ ನೋಂಡಾ, ಧನಂಜಯ ಶೆಟ್ಟಿ, ನೇಮಿರಾಜ್ ,ಅಶ್ವಿತ್ ಜೀವನ್,ನಂದನ್ ಮೊದಲಾದವರಿದ್ದರು.