Headlines

ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ * ಮಾನವೀಯ ಸ್ಪಂದನೆ ಆಗಲೇಬೇಕಾಗಿದೆ… * 33ನೇ ವಾರ ಪೂರೈಸಿದ ಜವನೆರ್ ಬೆದ್ರದ ಸಾಧನೆ * ಆಧುನಿಕತೆಯಿಂದ ಆಶಾದಾಯಕ ಸ್ಥಿತಿ ಬಂದೊದಗಿದೆ: ಹರೀಶ್ ಶೆಣೈ * ಮೂಡಬಿದಿರೆಯಲ್ಲಿ ಸದ್ಭಾವನಾ ಗೋಷ್ಠಿ * ಭಾರತೀಯ ಜನತಾ ಪಾರ್ಟಿಯಿಂದ ಸ್ವಚ್ಛತೆಯ ಮಂತ್ರ * ಬಸದಿಗಳ ಬೀಡಲ್ಲಿ ಬಸದಿಗಳ ಸ್ವಚ್ಛತೆ * ಕಂಬಳಸಮಿತಿ ಸಭೆ * 30ನೇವಾರದ ಕ್ಲೀನ್ ಅಪ್ ಮೂಡಬಿದಿರೆ * ಸ್ವಚ್ಛತಾ ದಿನಾಚರಣರೆ * ಶಾಸಕ ಉಮಾನಾಥ್ ಎ.ಕೋಟ್ಯಾನ್ ವಿಶೇಷ ಸಂದರ್ಶನ * ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಮಲ್ಲಿಕಾ ಎಸ್.ಘಂಟಿ, ಉದ್ಘಾಟಕರಾಗಿ ಡಾ.ಷ. ಶೆಟ್ಟರ್ * ಫಲವಿತರಿಸಿ ಹುಟ್ಟುಹಬ್ಬ ಆಚರಣೆ * ನುಡಿಸಿರಿಯಲ್ಲೊಂದು ಕೃಷಿಸಿರಿ:ಡಾ.ಆಳ್ವ * ಹುಲಿ-ಸ್ವಚ್ಛತೆಯೂ -ಗಣೇಶೋತ್ಸವವೂ-ಪುರಸಭೆಯೂ! * ಗಣೇಶ ದರ್ಶನ… * ಮೂಡಬಿದಿರೆಯಲ್ಲಿ ಗಣೇಶೋತ್ಸವದ ಗೌಜಿ ಶುರು… *

ಅಮೆರಿಕಾದಲ್ಲಿ ವಿದ್ಯಾರ್ಥಿ ಶವ ಪತ್ತೆ

america vaarte

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ

ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿ ಶವ ಪತ್ತೆಯಾಗಿದೆ. ನ್ಯೂಯಾರ್ಕ್ ನ ಕಾರ್ನೆಲ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿದ್ದ ಭಾರತೀಯ ಮೂಲದ 20 ವರ್ಷದ ವಿದ್ಯಾರ್ಥಿಯ ಶವ ಶನಿವಾರ ಪತ್ತೆಯಾಗಿದೆ.

 

 

 

 

ಆಲಾಪ್ ನರಸೀಪುರ ಎಂಬ ಹೆಸರಿನ ವಿದ್ಯಾರ್ಥಿ ಕಾರ್ನೆಲ್ ಕಾಲೇಜ್ ಆಫ್ ಎಂಜಿನಿಯರಿಂಗ್‌ನಲ್ಲಿ ಎಲೆಕ್ಟ್ರಿಕಲ್ ವಿಭಾಗದಲ್ಲಿ ಅಧ್ಯಯನ ಮಾಡುತ್ತಿದ್ದು, ಕಳೆದ ಬುಧವಾರದಿಂದ ನಾಪತ್ತೆಯಾಗಿದ್ದನೆಂದು ವರದಿಯಾಗಿತ್ತು. ಕಾರ್ನೆಲ್ ವಿವಿ ಹಾಗೂ ಇಥಾಕಾ ಪೊಲೀಸ್ ವಿಭಾಗದ ನ್ಯೂಯಾರ್ಕ್ ಪೊಲೀಸರು ಜಂಟಿಯಾಗಿ ತನಿಖೆ ಕೈಗೊಂಡಿದ್ದರು.

ಇಥಾಕಾ ಫಾಲ್‌ಸ್‌‌ನಿಂದ ಅಲ್ಪ ದೂರದ ಫಾಲ್ ಕ್ರೀಕ್ ಎಂಬಲ್ಲಿ ಶವ ಪತ್ತೆಯಾಗಿದೆ. ಘಟನೆ ಕುರಿತು ಇನ್ನೂ ಮಾಹಿತಿ ಲಭ್ಯವಾಗಿಲ್ಲ.