Headlines

ಕಣ್ಣುತೆರೆಸಿದ ಜವನೆರ್ ಬೆದ್ರ ಸಂಘಟನೆ * ಯೋಧರ ಮನೆಯಲ್ಲಿ ಬೆಳಗಿದ ದೀಪ! * ಯಶಸ್ವೀ 36ನೇವಾರ ಪೂರೈಸಿದ ಕ್ಲೀನ್ ಅಪ್ ಮೂಡಬಿದಿರೆ * ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ * ಅಳಿಯೂರಿನಲ್ಲಿ ಮೇಳೈಸಲಿದೆ ಕ್ರೀಡಾಹಬ್ಬ.! * ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯ್ತು ಹಳ್ಳಿ ಹುಡುಗರ ಅನ್ವೇಷಣೆ! * ಶಿರ್ಲಾಲು: ಹೊಸ ಶಾಸನ ಪತ್ತೆ * ಸಾವಿರ ಕಂಬದ ಬಸದಿಯ ಸ್ವಚ್ಛತೆ * ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ * ಮಾನವೀಯ ಸ್ಪಂದನೆ ಆಗಲೇಬೇಕಾಗಿದೆ… * 33ನೇ ವಾರ ಪೂರೈಸಿದ ಜವನೆರ್ ಬೆದ್ರದ ಸಾಧನೆ * ಆಧುನಿಕತೆಯಿಂದ ಆಶಾದಾಯಕ ಸ್ಥಿತಿ ಬಂದೊದಗಿದೆ: ಹರೀಶ್ ಶೆಣೈ * ಮೂಡಬಿದಿರೆಯಲ್ಲಿ ಸದ್ಭಾವನಾ ಗೋಷ್ಠಿ * ಭಾರತೀಯ ಜನತಾ ಪಾರ್ಟಿಯಿಂದ ಸ್ವಚ್ಛತೆಯ ಮಂತ್ರ * ಬಸದಿಗಳ ಬೀಡಲ್ಲಿ ಬಸದಿಗಳ ಸ್ವಚ್ಛತೆ * ಕಂಬಳಸಮಿತಿ ಸಭೆ * 30ನೇವಾರದ ಕ್ಲೀನ್ ಅಪ್ ಮೂಡಬಿದಿರೆ *

ಆಧುನಿಕತೆಯಿಂದ ಆಶಾದಾಯಕ ಸ್ಥಿತಿ ಬಂದೊದಗಿದೆ: ಹರೀಶ್ ಶೆಣೈ

#krishi#vicharavinimaya#bhattadakrishi

ನಮ್ಮ ಪ್ರತಿನಿಧಿ ವರದಿ
ಮೂಡಬಿದಿರೆ: ಆಧುನಿಕ ಕೃಷಿ ಪದ್ಧತಿಯಿಂದಾಗಿ ಜಿಲ್ಲೆಯಲ್ಲಿ ಭತ್ತದ ಕೃಷಿ ಆಶಾದಾಯಕ ಪರಿಸ್ಥಿತಿಯನ್ನು ನಿರ್ಮಾಣಮಾಡಿದೆ. ಕಠಿಣ ಪರಿಶ್ರಮದಿಂದ,ಶ್ರದ್ಧೆಯಿಂದ ಕಾರ್ಯನಿರ್ವಹಿಸಿದ್ದೇ ಆದಲ್ಲಿ ಭತ್ತದ ಕೃಷಿ ಲಾಭದಾಯಕವಾಗುವುದರಲ್ಲಿ ಯಾವೊಂದು ಸಂದೇಹವೂ ಇಲ್ಲ ಎಂದು ಕೃಷಿ ವಿಜ್ಞಾನಿ ಹರೀಶ್ ಶೆಣೈ ಅಭಿಪ್ರಾಯ ಪಟ್ಟರು. ಕೃಷಿ ವಿಚಾರ ವಿನಿಮಯ ಕೇಂದ್ರ ಮೂಡಬಿದಿರೆ ಇದರ ಆಶ್ರಯದಲ್ಲಿ ಆಯೋಜಿಸಲಾದ ಭತ್ತದ ಕ್ಷೇತ್ರೋತ್ಸವ ಉದ್ಘಾಟಿಸಿ ಮಾತನಾಡಿದರು. ಮಿಜಾರು ದೂಮಚಡವು ಶಂಕರ ರೈಗಳ ಗಿರಿಜಾ ನಿವಾಸದಲ್ಲಿ ಕ್ಷೇತ್ರೋತ್ಸವ ಏರ್ಪಡಿಸಲಾಗಿತ್ತು.
ಹೈಬ್ರೀಡ್ ಪದ್ಧತಿಗಳೆಂದರೆ ಅದು ರಾಸಾಯನಿಕವೆಂಬ ತಪ್ಪುಕಲ್ಪನೆ ಅನೇಕ ಮಂದಿಗಿದೆ. ಅಧಿಕ ಇಳುವರಿ ನೀಡುವ ಕೀಟ ನಿರೋಧಕ ಶಕ್ತಿ ಹೊಂದಿರುವ ಗುಣವನ್ನು ಹೈಬ್ರೀಡ್ ತಳಿಗಳು ಹೊಂದಿರುತ್ತವೆ ಎಂದು ಇಂಡೋ ಅಮೆರಿಕನ್ ಹೈಬ್ರೀಡ್ ಸೀಡ್ಸ್ ಪ್ರೈ.ಲಿ ಸಂಸ್ಥೆಯ ಪ್ರಭಾಕರ ರೆಡ್ಡಿ ಅಭಿಪ್ರಾಯಿಸಿದರು. ಭತ್ತದ ಗದ್ದೆಗಳಿಗೆ ಹಸಿರೆಲೆ ಗೊಬ್ಬರ, ಉಮಿಕರಿ, ಗೋಮೂತ್ರಗಳನ್ನು ಬಳಸುವುದರಿಂದ ಇಳುವರಿ ಅಧಿಕವಾಗುವುದರಲ್ಲಿ ಯಾವೊಂದು ಸಂದೇಹವೂ ಇಲ್ಲ ಎಂದು ಸುರತ್ಕಲ್ ಕೃಷಿ ಇಲಾಖೆಯ ಸಹಾಯಕ ಕೃಷಿ ಅಧಿಕಾರಿ ಅಬ್ದುಲ್ ಬಶೀರ್ ಅಭಿಪ್ರಾಯಿಸಿದರು.
ಕೃಷಿ ಸಂಸ್ಕೃತಿ ದೇಶದ ಸಂಸ್ಕೃತಿಯಾಗಿದೆ. ಕೃಷಿ ನಾಶವಾದರೆ ದೇಶ ನಾಶವಾದಂತೆ. ಕೃಷಿ ಉತ್ಪನ್ನಗಳ ಲಾಭ ಕೃಷಿಕರೆ ಪಡೆಯುವಂತಾಗಬೇಕಾಗಿದೆ. ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿ ಹೆಚ್ಚು ಇಳುವರಿ ಪಡೆಯುವ ಕೃಷಿ ಪದ್ಧತಿ ಅಳವಡಿಸಬೇಕಾಗಿದೆ ಎಂದು ಅಧ್ಯಕ್ಷತೆ ವಹಿಸಿದ್ದ ಕೃಷಿ ವಿಚಾರ ವಿನಿಮಯ ಕೇಂದ್ರದ ಅಧ್ಯಕ್ಷ ಸುಭಾಶ್ಚಂದ್ರ ಚೌಟ ಅಭಿಪ್ರಾಯ ವ್ಯಕ್ತಪಡಿಸಿದರು. ನಿಕಟಪೂರ್ವ ಅಧ್ಯಕ್ಷ ರಾಜವರ್ಮ ಬೈಲಂಗಡಿ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ದಯಾನಂದ ಭಟ್ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಬಿ.ಅಭಯಕುಮಾರ್ ವಂದಿಸಿದರು.