Headlines

ಕಣ್ಣುತೆರೆಸಿದ ಜವನೆರ್ ಬೆದ್ರ ಸಂಘಟನೆ * ಯೋಧರ ಮನೆಯಲ್ಲಿ ಬೆಳಗಿದ ದೀಪ! * ಯಶಸ್ವೀ 36ನೇವಾರ ಪೂರೈಸಿದ ಕ್ಲೀನ್ ಅಪ್ ಮೂಡಬಿದಿರೆ * ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ * ಅಳಿಯೂರಿನಲ್ಲಿ ಮೇಳೈಸಲಿದೆ ಕ್ರೀಡಾಹಬ್ಬ.! * ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯ್ತು ಹಳ್ಳಿ ಹುಡುಗರ ಅನ್ವೇಷಣೆ! * ಶಿರ್ಲಾಲು: ಹೊಸ ಶಾಸನ ಪತ್ತೆ * ಸಾವಿರ ಕಂಬದ ಬಸದಿಯ ಸ್ವಚ್ಛತೆ * ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ * ಮಾನವೀಯ ಸ್ಪಂದನೆ ಆಗಲೇಬೇಕಾಗಿದೆ… * 33ನೇ ವಾರ ಪೂರೈಸಿದ ಜವನೆರ್ ಬೆದ್ರದ ಸಾಧನೆ * ಆಧುನಿಕತೆಯಿಂದ ಆಶಾದಾಯಕ ಸ್ಥಿತಿ ಬಂದೊದಗಿದೆ: ಹರೀಶ್ ಶೆಣೈ * ಮೂಡಬಿದಿರೆಯಲ್ಲಿ ಸದ್ಭಾವನಾ ಗೋಷ್ಠಿ * ಭಾರತೀಯ ಜನತಾ ಪಾರ್ಟಿಯಿಂದ ಸ್ವಚ್ಛತೆಯ ಮಂತ್ರ * ಬಸದಿಗಳ ಬೀಡಲ್ಲಿ ಬಸದಿಗಳ ಸ್ವಚ್ಛತೆ * ಕಂಬಳಸಮಿತಿ ಸಭೆ * 30ನೇವಾರದ ಕ್ಲೀನ್ ಅಪ್ ಮೂಡಬಿದಿರೆ *

ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಒಡ್ಡು ನಿರ್ಮಾಣ

#rural#development#in#alvas#students
ಮೂಡುಬಿದಿರೆ
ವಿದ್ಯಾರ್ಥಿಗಳಲ್ಲಿ ಪರಿಸರ ಬಗ್ಗೆ ಜಾಗೃತಿ, ಕೃಷಿ ಬಗ್ಗೆ ಆಸಕ್ತಿ ಹಾಗೂ ಜಲಸಂರಕ್ಷಣೆಗೆ ಪ್ರೇರಣೆ ನೀಡುವ ನಿಟ್ಟಿನಲ್ಲಿ ಆಳ್ವಾಸ್ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಮಾನವಿಕ ಸಂಘದ ಆಶ್ರಯದಲ್ಲಿ ತೆಂಕಮಿಜಾರು ಗ್ರಾಮದ ಮಾಳಿಗೆ ಮನೆ ಗಣಪತಿ ಎಂಬವರ ಮನೆಯಲ್ಲಿ ಒಡ್ಡು ನಿರ್ಮಾಣದ ಶ್ರಮದಾನವನ್ನು ಹಮ್ಮಿಕೊಳ್ಳಲಾಯಿತು.
ಆಳ್ವಾಸ್ 70 ವಿದ್ಯಾರ್ಥಿಗಳು ಒಡ್ಡುಗಳನ್ನು ನಿರ್ಮಿಸಿದರು. ಕಲಾ ವಿಭಾಗದ ಡೀನ್ ಸಂದ್ಯಾ ಕೆ.ಎಸ್., ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಚಂದ್ರಶೇಖರ ಮಯ್ಯ, ಉಪನ್ಯಾಸಕ ವಸಂತ ಗೌಡ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಹರಿಣಾಕ್ಷಿ, ಇತಿಹಾಸ ವಿಭಾಗದ ಮುಖ್ಯಸ್ಥ ಅಶೋಕ್ ರಾಕೇಶ್ ಡಿ’ಸೋಜ, ಅರ್ಥ ಶಾಸ್ತ್ರ ವಿಭಾಗದ ಉಪನ್ಯಾಸಕ ಎನ್.ಎಸ್.ಎಸ್. ಅದಿಕಾರಿ ಗುರುದೇವ.ಎನ್. ಉಪಸ್ಥಿತರಿದ್ದರು. ತೆಂಕಮಿಜಾರು ಪಿಡಿಒ ಸಾಯೀಶ್ ಚೌಟ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು.