Headlines

ಹಂತಕರನ್ನು ಕೂಡಲೇ ಬಂಧಿಸಿ: ಸಿ.ಎಂ * ಎದೆಭಾಗಕ್ಕೆ 2;ಹಣೆಗೆ1ಗುಂಡು * ಪರ್ತಕರ್ತೆ ಗೌರಿ ಲಂಕೇಶ್ ಹತ್ಯೆ * ಎಂಟು ಮಂದಿ ಶಿಕ್ಷಕರಿಗೆ ಸನ್ಮಾನ * ಸಾಧಕರಿಗೆ ಸನ್ಮಾನ * ಶಾಲೆ ಶಾಲೆಯಲ್ಲಿ ಗೆಜ್ಜೆಯ ನಿನಾದ! * ಋಣ ತೀರಿಸುವ ಕಾರ್ಯವಾಗಲಿ: ದೇವಿಪ್ರಸಾದ್ ಶೆಟ್ಟಿ * ಸಾರ್ವಜನಿಕ ಗಣೇಶೋತ್ಸವ * ಶ್ರೀ ಸೂರ್ಯನಾರಾಯಣ ಕ್ಷೇತ್ರದಲ್ಲಿ ಗಣೇಶೋತ್ಸವ * ಗ್ರಾಮ-ಪಟ್ಟಣಕ್ಕೆ ಒಂದೇ ಗಣೇಶನಿರಲಿ-ಟಿ.ಆರ್.ಸುರೇಶ್ * 54ನೇ ವರ್ಷದ ಮೂಡಬಿದಿರೆಯ ಗಣೇಶ * ಪೆರಿಂಜೆಯಲ್ಲಿ ಸಂಭ್ರಮದ ಗಣೇಶೋತ್ಸವ * ಕಲ್ಲಬೆಟ್ಟಿನಲ್ಲಿ ಪೂಜಿಸಿದ ವಿಘ್ನವಿನಾಯಕ * ಮೂಡುಬಿದಿರೆಯಲ್ಲಿ ರಕ್ಷಾಂಬಂಧನ * ಪ್ರೊ. ಕೆ.ಇ.ರಾಧಾಕೃಷ್ಣ ಮತ್ತು ಸತ್ಯಮಂಗಲ ಆರ್ ಮಹಾದೇವ ಅವರಿಗೆ ವರ್ಧಮಾನ ಪ್ರಶಸ್ತಿ ಘೋಷಣೆನ * ಇದು ಅತ್ಯಾಧುನಿಕ `ಪಾರಂಪರಿಕ’ಮಾದರಿಯ ಶ್ಯಾವಿಗೆ ಮಣೆ! * ವಿಂಶತಿ ಯಕ್ಷಕಲೋತ್ಸವಕ್ಕೆ ತೆರೆ * ಸಿ.ಐ.ಟಿ.ಯು: 9ನೇ ಬೀಡಿ ಕಾರ್ಮಿಕರ ರಾಜ್ಯ ಸಮ್ಮೇಳನ * ಪದ್ಮಪ್ರಸಾದ್ ಜೈನ್ ನೇಮಕ * ವಿಶೇಷ ಪೂಜೆ-ಅಭಿಷೇಕ *

ಇಂದಿನಿಂದ ಭಾರತ-ಪಾಕ್ ಮುಖಾಮುಖಿ ಹೋರಾಟ

india pak

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ

18 ವರ್ಷಗಳ ನಂತರ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಕಾದಾಡಲಿವೆ. ಭಾರತೀಯ ನೌಕಾಪಡೆಯ ಅಧಿಕಾರಿಯಾಗಿದ್ದ ಕುಲಭೂಷಣ್ ಜಾದವ್ ಪ್ರಕರಣದಲ್ಲಿ ಇವೆರಡೂ ರಾಷ್ಟ್ರಗಳು ಮುಖಾಮುಖಿಯಾಗಲಿವೆ.

 

 

 

ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವಿನ ತಿಕ್ಕಾಟಕ್ಕೆ ಕಾರಣವಾಗಿರುವ ಭಾರತದ ಕುಲಭೂಷಣ್ ಜಾದವ್ ಅವರ ಗಲ್ಲು ಶಿಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದಿನಿಂದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಿಚಾರಣೆ ಆರಂಭವಾಗಲಿದೆ.

 

 

 

18 ವರ್ಷಗಳ ಹಿಂದೆ ಪಾಕಿಸ್ತಾನ ತನ್ನ ನೌಕಾ ಪಡೆಯ ವಿಮಾನವನ್ನು ಹೊಡೆದುರುಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಸಂಸ್ಥೆಯ ಅಂಗವಾದ ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ಭಾರತದ ವಿರುದ್ಧ ದೂರು ಸಲ್ಲಿಸಿತ್ತು.

 

 

ಅದರ ನಂತರ ಇದೇ ಮೊದಲ ಬಾರಿಗೆ ನೆದರ್ಲ್ಯಾಂಡ್ಸ್ ನಲ್ಲಿರುವ ನ್ಯಾಯಾಲಯದಲ್ಲಿ ಉಭಯ ದೇಶಗಳು ಇಂದಿನಿಂದ ತಮ್ಮ ವಾದ ಮಂಡಿಸಲಿವೆ.

 

 

ಕುಲಭೂಷಣ್ ಜಾದವ್ ಗೆ ವಿನಾಕಾರಣ ಗುಪ್ತಚರನೆಂಬ ಹಣೆ ಪಟ್ಟಿ ಕಟ್ಟಿ ಪಾಕ್ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಭಾರತ ಆರೋಪಿಸಿದೆ. ಪಾಕಿಸ್ತಾನ ಈ ವಿಚಾರದಲ್ಲಿ ವಿಯೆನ್ನಾ ಒಪ್ಪಂದ ಮುರಿದಿದೆ ಎಂದು ಭಾರತ ದೂರಿದೆ.