Headlines

ಹಂತಕರನ್ನು ಕೂಡಲೇ ಬಂಧಿಸಿ: ಸಿ.ಎಂ * ಎದೆಭಾಗಕ್ಕೆ 2;ಹಣೆಗೆ1ಗುಂಡು * ಪರ್ತಕರ್ತೆ ಗೌರಿ ಲಂಕೇಶ್ ಹತ್ಯೆ * ಎಂಟು ಮಂದಿ ಶಿಕ್ಷಕರಿಗೆ ಸನ್ಮಾನ * ಸಾಧಕರಿಗೆ ಸನ್ಮಾನ * ಶಾಲೆ ಶಾಲೆಯಲ್ಲಿ ಗೆಜ್ಜೆಯ ನಿನಾದ! * ಋಣ ತೀರಿಸುವ ಕಾರ್ಯವಾಗಲಿ: ದೇವಿಪ್ರಸಾದ್ ಶೆಟ್ಟಿ * ಸಾರ್ವಜನಿಕ ಗಣೇಶೋತ್ಸವ * ಶ್ರೀ ಸೂರ್ಯನಾರಾಯಣ ಕ್ಷೇತ್ರದಲ್ಲಿ ಗಣೇಶೋತ್ಸವ * ಗ್ರಾಮ-ಪಟ್ಟಣಕ್ಕೆ ಒಂದೇ ಗಣೇಶನಿರಲಿ-ಟಿ.ಆರ್.ಸುರೇಶ್ * 54ನೇ ವರ್ಷದ ಮೂಡಬಿದಿರೆಯ ಗಣೇಶ * ಪೆರಿಂಜೆಯಲ್ಲಿ ಸಂಭ್ರಮದ ಗಣೇಶೋತ್ಸವ * ಕಲ್ಲಬೆಟ್ಟಿನಲ್ಲಿ ಪೂಜಿಸಿದ ವಿಘ್ನವಿನಾಯಕ * ಮೂಡುಬಿದಿರೆಯಲ್ಲಿ ರಕ್ಷಾಂಬಂಧನ * ಪ್ರೊ. ಕೆ.ಇ.ರಾಧಾಕೃಷ್ಣ ಮತ್ತು ಸತ್ಯಮಂಗಲ ಆರ್ ಮಹಾದೇವ ಅವರಿಗೆ ವರ್ಧಮಾನ ಪ್ರಶಸ್ತಿ ಘೋಷಣೆನ * ಇದು ಅತ್ಯಾಧುನಿಕ `ಪಾರಂಪರಿಕ’ಮಾದರಿಯ ಶ್ಯಾವಿಗೆ ಮಣೆ! * ವಿಂಶತಿ ಯಕ್ಷಕಲೋತ್ಸವಕ್ಕೆ ತೆರೆ * ಸಿ.ಐ.ಟಿ.ಯು: 9ನೇ ಬೀಡಿ ಕಾರ್ಮಿಕರ ರಾಜ್ಯ ಸಮ್ಮೇಳನ * ಪದ್ಮಪ್ರಸಾದ್ ಜೈನ್ ನೇಮಕ * ವಿಶೇಷ ಪೂಜೆ-ಅಭಿಷೇಕ *

ಋಣ ತೀರಿಸುವ ಕಾರ್ಯವಾಗಲಿ: ದೇವಿಪ್ರಸಾದ್ ಶೆಟ್ಟಿ

#ಕಲ್ಲಬೆಟ್ಟು

ನಮ್ಮ ಪ್ರತಿನಿಧಿ ವರದಿ
ದೇಶದ ದಾರ್ಶನಿಕರು ತಮ್ಮ ಜೀವವನ್ನೇ ಸಮರ್ಪಿಸಿದ ಉದಾರತೆಯನ್ನು ಮರೆಯದೆ ನೆನಪಿನಲ್ಲಿಡುವ ಜವಾಬ್ದಾರಿ ಪ್ರತಿಯೊಬ್ಬನದ್ದಾಗಿದೆ. ಉತ್ತಮ ರೀತಿಯ ಬದುಕು ರೂಪಿಸಿ ದೇಶದ ಋಣ ತೀರಿಸುವ ಕಾರ್ಯ ಮಾಡಬೇಕಾಗಿದ ಎಂದು ಉದ್ಯಮಿ ದೇವಿಪ್ರಸಾದ್ ಶೆಟ್ಟಿ ಹೇಳಿದ್ದಾರೆ.
ಸ್ವರ್ಣಗೌರಿ ಮಾತೃಮಂಡಳಿ ,ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮತಿ ಕಲ್ಲಬೆಟ್ಟು ಕರಿಂಜೆ, ಶ್ರೀಗಣೇಶ ಸೇವಾ ಟ್ರಸ್ಟ್ ಕಲ್ಲಬೆಟ್ಟು ಇವುಗಳ ಸಂಯುಕ್ತಾಶ್ರಯದಲ್ಲಿ ಹದಿನಾರನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವದಂಗವಾಗಿ ಕಲ್ಲಬೆಟ್ಟು ಶಾಲೆಯ ಕರಿಂಜೆ ರಾಮಚಂದ್ರ ಭಟ್ ಸ್ಮಾರಕ ಕಲಾಮಂದಿರದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು. ಗಣೇಶ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೆ.ಶ್ರೀಪತಿ ಭಟ್ ಅಧ್ಯಕ್ಷತೆ ವಹಿಸಿದ್ದರು.ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಪದ್ಮಣ್ಣ ಬಿ, ಸರೋಜಿನಿ ಸುವರ್ಣ, ಸೂರ್ಯಣ್ಣ ಹೆಗಡೆ ವೇದಿಕೆಯಲ್ಲಿದ್ದರು. ಸಭಾ ಕಾರ್ಯಕ್ರಮ ನಂತರ ಗಣೇಶ ವಿಗ್ರಹದ ವಿಸರ್ಜನಾ ಪೂಜೆ ನಡೆಯಿತು. ಮಾರೂರು ಹೊಸಂಗಡಿಯ ಫಲ್ಗುಣಿ ನದಿಯಲ್ಲಿ ಶ್ರೀಗಣೇಶ ವಿಗ್ರಹ ವಿಸರ್ಜನೆ ನಡೆಯಿತು.