Headlines

ಕಣ್ಣುತೆರೆಸಿದ ಜವನೆರ್ ಬೆದ್ರ ಸಂಘಟನೆ * ಯೋಧರ ಮನೆಯಲ್ಲಿ ಬೆಳಗಿದ ದೀಪ! * ಯಶಸ್ವೀ 36ನೇವಾರ ಪೂರೈಸಿದ ಕ್ಲೀನ್ ಅಪ್ ಮೂಡಬಿದಿರೆ * ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ * ಅಳಿಯೂರಿನಲ್ಲಿ ಮೇಳೈಸಲಿದೆ ಕ್ರೀಡಾಹಬ್ಬ.! * ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯ್ತು ಹಳ್ಳಿ ಹುಡುಗರ ಅನ್ವೇಷಣೆ! * ಶಿರ್ಲಾಲು: ಹೊಸ ಶಾಸನ ಪತ್ತೆ * ಸಾವಿರ ಕಂಬದ ಬಸದಿಯ ಸ್ವಚ್ಛತೆ * ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ * ಮಾನವೀಯ ಸ್ಪಂದನೆ ಆಗಲೇಬೇಕಾಗಿದೆ… * 33ನೇ ವಾರ ಪೂರೈಸಿದ ಜವನೆರ್ ಬೆದ್ರದ ಸಾಧನೆ * ಆಧುನಿಕತೆಯಿಂದ ಆಶಾದಾಯಕ ಸ್ಥಿತಿ ಬಂದೊದಗಿದೆ: ಹರೀಶ್ ಶೆಣೈ * ಮೂಡಬಿದಿರೆಯಲ್ಲಿ ಸದ್ಭಾವನಾ ಗೋಷ್ಠಿ * ಭಾರತೀಯ ಜನತಾ ಪಾರ್ಟಿಯಿಂದ ಸ್ವಚ್ಛತೆಯ ಮಂತ್ರ * ಬಸದಿಗಳ ಬೀಡಲ್ಲಿ ಬಸದಿಗಳ ಸ್ವಚ್ಛತೆ * ಕಂಬಳಸಮಿತಿ ಸಭೆ * 30ನೇವಾರದ ಕ್ಲೀನ್ ಅಪ್ ಮೂಡಬಿದಿರೆ *

`ಗುಣಮಟ್ಟದ ಶಿಕ್ಷಣ-ಸೂಕ್ತ ಉದ್ಯೋಗಕ್ಕೆ ಒತ್ತು’

#manipal#acadamy#moodbidri#snmpolytecnic#mahaveercollege#moodubidiri

ಮಹಾವೀರ ಕ್ಯಾಂಪಸ್ ಗೆ ಡಾ.ರಂಜನ್ ಆರ್. ಪೈ ಅಧಿಕೃತ ಭೇಟಿ

ಮೂಡಬಿದಿರೆ: ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಷನ್ ಇದರ ಆಡಳಿತಕ್ಕೊಳಪಟ್ಟ ಮೂಡಬಿದಿರೆಯ ಶ್ರೀ ಮಹಾವೀರ ಕಾಲೇಜಿಗೆ ನೂತನ ರಿಜಿಸ್ಟ್ರಾರ್ ಡಾ.ರಂಜನ್ ಆರ್. ಪೈ ಗುರುವಾರ ಅಧಿಕೃತ ಭೇಟಿ ನೀಡಿ, ಶಿಕ್ಷಣ ಸಂಸ್ಥೆಗಳ ಪರಿಶೀಲನೆಗೈದು ಮಾರ್ಗದರ್ಶನ ನೀಡಿದರು. ಅಕಾಡೆಮಿ ವ್ಯಾಪ್ತಿಗೊಳಪಟ್ಟ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಉದ್ಯೋಗಾವಕಾಶಕ್ಕೂ ಒತ್ತು ನೀಡುವ ಕಾರ್ಯ ನಡೆಯಬೇಕಾಗಿದೆ ಎಂದರು.

#manipal#acadamy#moodbidri#snmpolytecnic#mahaveercollege
ಮೂಡಬಿದಿರೆಯ ಮಹಾವೀರ ಪದವಿ ಕಾಲೇಜು, ಪದವಿಪೂರ್ವ ಕಾಲೇಜು, ಎಸ್.ಎನ್.ಎಂ.ಪಾಲಿಟೆಕ್ನಿಕ್, ಎ.ಜಿ.ಸೋನ್ಸ್ ಐ.ಟಿ.ಐ ಮೊದಲಾದ ಶಿಕ್ಷಣ ಸಂಸ್ಥೆಗಳಿಗೆ ಭೇಟಿನೀಡಿದರು.
ಶೈಕ್ಷಣಿಕ ಹಾಗೂ ಇನ್ನಿತರ ಪ್ರಗತಿ ಪರಿಶೀಲನೆ ಕೈಗೊಂಡು ಪ್ರಾಂಶುಪಾಲರಾದಿಯಾಗಿ ಆಡಳಿತಮಂಡಳಿಯ ಮುಖ್ಯಸ್ಥರೊಂದಿಗೆ ಸಮಾಲೋಚನೆ ಕೈಗೊಂಡರು. ಶಿಕ್ಷಣ ಸಂಸ್ಥೆಗಳ ಬೆಳವಣಿಗೆ ಹಾಗೂ ಪ್ರಗತಿಯ ಬಗ್ಗೆ ಮಾಹಿತಿ ಸಂಗ್ರಹಿಸಿ, ಸೂಕ್ತ ಮಾರ್ಗದರ್ಶನ ನೀಡಿದರು.

#manipal#acadamy#moodbidri#snmpolytecnic#mahaveercollege#shantharam
ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಷನ್ ಇದರ ಆಡಳಿತಾಧಿಕಾರಿ ಎಚ್.ಶಾಂತಾರಾಮ್, ಅಧ್ಯಕ್ಷ ಎಚ್.ಎಸ್.ಬಲ್ಲಾಳ್, ಅಕಾಡೆಮಿ ಆಫ್ ಜನರಲ್ ಎಜುಕೇಷನ್ ಜೈಪುರ ಬ್ರಾಂಚ್ ಅಧ್ಯಕ್ಷ ಡಾ.ಜಿ.ಕೆ.ಪ್ರಭು ಈ ಸಂದರ್ಭ ಜೊತೆಗಿದ್ದರು.ಮಹಾವೀರ ಕಾಲೇಜು ವಿಶ್ವಸ್ಥ ಮಂಡಳಿ ಅಧ್ಯಕ್ಷ ಕೆ.ಅಭಯಚಂದ್ರ ಜೈನ್, ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ, ಸಿ.ಎಚ್.ಗಫೂರ್, ರಾಮನಾಥ್ ಭಟ್, ರಾಮಪ್ರಸಾದ್ ಭಟ್, ಮಹಾವೀರ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಚ್.ಚಂದ್ರಶೇಖರ್ ಧೀಕ್ಷಿತ್, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ರಮೇಶ್ ಭಟ್, ಎಸ್.ಎನ್.ಎಂ.ಪಾಲಿಟೆಕ್ನಿಕ್ ಪ್ರಾಂಶುಪಾಲ ಜೆ.ಜೆ.ಪಿಂಟೋ, ಎ.ಜಿ.ಸೋನ್ಸ್ ಐ.ಟಿ.ಐ ಪ್ರಾಂಶುಪಾಲ ಜಯರಾಮ್ ಶೆಟ್ಟಿಗಾರ್ ಮೊದಲಾದವರಿದ್ದರು. ನೂತನ ರಿಜಿಸ್ಟ್ರಾರ್ ಅವರನ್ನು ಇದೇ ಸಂದರ್ಭ ಗೌರವಿಸಲಾಯಿತು.