Headlines

ಹಂತಕರನ್ನು ಕೂಡಲೇ ಬಂಧಿಸಿ: ಸಿ.ಎಂ * ಎದೆಭಾಗಕ್ಕೆ 2;ಹಣೆಗೆ1ಗುಂಡು * ಪರ್ತಕರ್ತೆ ಗೌರಿ ಲಂಕೇಶ್ ಹತ್ಯೆ * ಎಂಟು ಮಂದಿ ಶಿಕ್ಷಕರಿಗೆ ಸನ್ಮಾನ * ಸಾಧಕರಿಗೆ ಸನ್ಮಾನ * ಶಾಲೆ ಶಾಲೆಯಲ್ಲಿ ಗೆಜ್ಜೆಯ ನಿನಾದ! * ಋಣ ತೀರಿಸುವ ಕಾರ್ಯವಾಗಲಿ: ದೇವಿಪ್ರಸಾದ್ ಶೆಟ್ಟಿ * ಸಾರ್ವಜನಿಕ ಗಣೇಶೋತ್ಸವ * ಶ್ರೀ ಸೂರ್ಯನಾರಾಯಣ ಕ್ಷೇತ್ರದಲ್ಲಿ ಗಣೇಶೋತ್ಸವ * ಗ್ರಾಮ-ಪಟ್ಟಣಕ್ಕೆ ಒಂದೇ ಗಣೇಶನಿರಲಿ-ಟಿ.ಆರ್.ಸುರೇಶ್ * 54ನೇ ವರ್ಷದ ಮೂಡಬಿದಿರೆಯ ಗಣೇಶ * ಪೆರಿಂಜೆಯಲ್ಲಿ ಸಂಭ್ರಮದ ಗಣೇಶೋತ್ಸವ * ಕಲ್ಲಬೆಟ್ಟಿನಲ್ಲಿ ಪೂಜಿಸಿದ ವಿಘ್ನವಿನಾಯಕ * ಮೂಡುಬಿದಿರೆಯಲ್ಲಿ ರಕ್ಷಾಂಬಂಧನ * ಪ್ರೊ. ಕೆ.ಇ.ರಾಧಾಕೃಷ್ಣ ಮತ್ತು ಸತ್ಯಮಂಗಲ ಆರ್ ಮಹಾದೇವ ಅವರಿಗೆ ವರ್ಧಮಾನ ಪ್ರಶಸ್ತಿ ಘೋಷಣೆನ * ಇದು ಅತ್ಯಾಧುನಿಕ `ಪಾರಂಪರಿಕ’ಮಾದರಿಯ ಶ್ಯಾವಿಗೆ ಮಣೆ! * ವಿಂಶತಿ ಯಕ್ಷಕಲೋತ್ಸವಕ್ಕೆ ತೆರೆ * ಸಿ.ಐ.ಟಿ.ಯು: 9ನೇ ಬೀಡಿ ಕಾರ್ಮಿಕರ ರಾಜ್ಯ ಸಮ್ಮೇಳನ * ಪದ್ಮಪ್ರಸಾದ್ ಜೈನ್ ನೇಮಕ * ವಿಶೇಷ ಪೂಜೆ-ಅಭಿಷೇಕ *

ಗ್ರಾಮ-ಪಟ್ಟಣಕ್ಕೆ ಒಂದೇ ಗಣೇಶನಿರಲಿ-ಟಿ.ಆರ್.ಸುರೇಶ್

#moodbidri#spl

ನಮ್ಮ ಪ್ರತಿನಿಧಿ ವರದಿ

 

ಮೂಡಬಿದಿರೆಯಲ್ಲಿ ಸಂಭ್ರಮದ ಗಣೇಶೋತ್ಸವ

ಗ್ರಾಮಕ್ಕೊಂದು ಪಟ್ಟಣಕ್ಕೊಂದೇ ಗಣೇಶನನ್ನು ಕೂರಿಸಿ ಸಂಭ್ರಮದಿಂದ ಎಲ್ಲರೂ ಒಗ್ಗಟ್ಟಾಗಿ ಗಣೇಶೋತ್ಸವ ಆಚರಿಸುವಂತಾಗಬೇಕಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಅಭಿಪ್ರಾಯಿಸಿದರು. ಸಾರ್ವಜನಿಕ ಗಣೇಶೋತ್ಸವ ಸಮಿತಿ ಮೂಡಬಿದಿರೆ ಇದರ ಆಶ್ರಯದಲ್ಲಿ ಮೂಡಬಿದಿರೆ ಸಮಾಜಮಂದಿರದಲ್ಲಿ 54ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪರಿಸರ ಸ್ನೇಹಿ ಗಣೇಶನ ಮೂರ್ತಿ ನಿರ್ಮಾಣವಾಗಬೇಕಾಗಿದೆ. ತನ್ಮೂಲಕ ಜಲ ಸಂರಕ್ಷಣೆ, ಪರಿಸರ ಸಂರಕ್ಷಣೆ ಮಾಡಿದಂತಾಗುತ್ತದೆ ಎಂದವರು ಹೇಳಿದರು.
ಆಲಂಗಾರು ಬಡಗಮಹಾಗಣಪತಿ ಕ್ಷೇತ್ರದ ಪ್ರಧಾನ ಅರ್ಚಕ ಈಶ್ವರ್ ಭಟ್ ಆಲಂಗಾರು ಶ್ರೀಗಣೇಶನ ವಿಗ್ರಹ ಪ್ರತಿಷ್ಠಾಪನಾ ವಿಧಿ ವಿಧಾನ ನೆರವೇರಿಸಿದರು.

#moodbidri#samajmandhir#ganesha
ಗಣೇಶೋತ್ಸವ ಸಮಿತಿ ಅಧ್ಯಕ್ಷ ಕೆ.ಅಮರನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮೂಡಬಿದಿರೆ ಚೌಟರ ಅರಮನೆಯ ಕುಲದೀಪ್ ಎಂ, ಎ.ಎಸ್.ಪಿ. ರಾಜೇಂದ್ರ, ಜಯಶ್ರೀ ಅಮರನಾಥ ಶೆಟ್ಟಿ , ಶ್ರೀಪತಿ ಭಟ್ ವೇದಿಕೆಯಲ್ಲಿದ್ದರು.ಸಮಿತಿಯ ಕಾನೂನು ಸಲಹೆಗಾರ ಚೇತನ್ ಕುಮಾರ್ ಶೆಟ್ಟಿ ಭಗವಾಧ್ವಜಕ್ಕೆ ವಂದನೆ ಸಲ್ಲಿಸಿದರು. ಪ್ರಧಾನ ಕಾರ್ಯದರ್ಶಿ  ನಾರಾಯಣ ಪಿ.ಎಂ ಕಾರ್ಯಕ್ರಮ ನಿರ್ವಹಿಸಿದರು. , ಸಂಚಾಲಕ ರಾಜಾರಾಮ್ ನಾಗರಕಟ್ಟೆ ವಂದಿಸಿದರು. ಆ.29ಮಂಗಳವಾರ ರಾತ್ರಿ ವೈಭವದ ಶೋಭಾಯಾತ್ರೆಯೊಂದಿಗೆ ಕಾರ್ಯಕ್ರಮ ಸಮಾಪ್ತಿಯಾಗಲಿದೆ.