Headlines

ಒತ್ತಡ ನಿರ್ವಹಣೆಗೆ ಆದ್ಯತೆ ಅವಶ್ಯ * ಬೆಳದಿಂಗಳ ಸಮ್ಮೇಳನಾಧ್ಯಕ್ಷತೆಗೆ ಬನ್ನಂಜೆ ಆಯ್ಕೆ * ಕಥೋಲಿಕ್ ಸಮಾಜೋತ್ಸವ * ಅಶ್ವತ್ಥಪುರದಲ್ಲಿ ಡಾ.ಸುಧೀರ್ ಹೆಗ್ಡೆ ನೇತೃತ್ವದಲ್ಲಿ ನೇತ್ರ ಚಿಕಿತ್ಸೆ ಶಿಬಿರ * ರೋಟರಿಯಿಂದ ಗಣರಾಜ್ಯೋತ್ಸವ ಆಚರಣೆ * ರಾಷ್ಟ್ರೀಯ ಐಕ್ಯತೆಗೆ ಯುವಪಡೆ ಸಿದ್ಧವಾಗಲಿ: ವಿನಯ ಹೆಗ್ಡೆ * ಮಹಾಮಜ್ಜನಕ್ಕೆ ಸಿದ್ದತೆ ಪೂರ್ಣ * ಶ್ರೀಬಾಹುಬಲಿ ಅಹಿಂಸಾದಿಗ್ವಿಜಯಂ ಲೋಕಾರ್ಪಣೆ * ಲೋಕಾಯುಕ್ತ ಪ್ರವಾಸ * ರೋಟರಿಯಿಂದ ಸಾಧಕರಿಗೆ ಸನ್ಮಾನ * ಸ್ವರಾಜ್ಯ ಮೈದಾನದ ಮೇಲೆ ತೂಗುಗತ್ತಿ…! * ಡಾ.ಸುಧೀರ್ ಹೆಗ್ಡೆ ನೇತೃತ್ವದಲ್ಲಿಕಣ್ಣಿನತಪಾಸಣಾ ಶಿಬಿರ * ಯುವಶಕ್ತಿಗೆ ಪರಿಸರಪ್ರಜ್ಞೆಯ ಅರಿವು ಮೂಡಿಸಿದ ಮಹಾಕಾರ್ಯ * ಮೂಡಬಿದಿರೆ ಶಿಕ್ಷಣ ಪ್ರೇಮಿಗಳ ನಾಡು: ಅಭಯಚಂದ್ರ ಜೈನ್ * 50ನೇ ವೈದ್ಯಕೀಯ ತಪಾಸಣಾ ಶಿಬಿರ * ಜ.21-25: ಮೂಡಬಿದಿರೆಯಲ್ಲಿ ರಾಷ್ಟ್ರೀಯ ವೈಯ್ಟ್ ಲಿಫ್ಟಿಂಗ್ * ರಾಜ್ಯಮಟ್ಟದ ಟಿ-20 ಕ್ರಿಕೆಟ್ ಟೂರ್ನಿ: ಆಳ್ವಾಸ್‍ಗೆ ಪ್ರಶಸ್ತಿ * ಕವಿಕುಲಗುರು ಕುಮಾರವ್ಯಾಸ * ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಒಡ್ಡು ನಿರ್ಮಾಣ * ಕಣ್ಣಿನ ಉಚಿತ ತಪಾಸಣೆಹಾಗೂ ಚಿಕಿತ್ಸಾ ಶಿಬಿರ *

ಜ.21-25: ಮೂಡಬಿದಿರೆಯಲ್ಲಿ ರಾಷ್ಟ್ರೀಯ ವೈಯ್ಟ್ ಲಿಫ್ಟಿಂಗ್

#wait#lifting#karnataka

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ 70ನೇ ಪುರುಷರ ಮತ್ತು 33ನೇ ಮಹಿಳೆಯರ ರಾಷ್ಟ್ರೀಯ ವೈಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಜ.21ರಿಂದ 25ರ ತನಕ ಮೂಡಬಿದಿರೆಯಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ಕರ್ನಾಟಕ ರಾಜ್ಯ ವೈಯ್ಟ್ ಲಿಫ್ಟಿಂಗ್ ಸಂಸ್ಥೆ, ದ.ಕ.ಜಿಲ್ಲಾ ವೈಯ್ಟ್ ಲಿಫ್ಟಿಂಗ್ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಂಯುಕ್ತಾಶ್ರಯದಲ್ಲಿ ನಡೆಯುವ ಈ ರಾಷ್ಟ್ರೀಯ ಚಾಂಪಿಯನ್ ಶಿಪ್ನಲ್ಲಿ ದೇಶದ ಸುಮಾರು 500 ಭಾರ ಎತ್ತುವ ಕ್ರೀಡಾಪಟುಗಳು ಭಾಗವಹಿಸುವರು.

ರಾಜ್ಯದ ಇತಿಹಾಸದಲ್ಲಿಯೇ ದ್ವಿತೀಯ ಬಾರಿಗೆ ರಾಷ್ಟ್ರೀಯ ಸೀನಿಯರ್ ವೈಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಡೆಯಲಿದ್ದು ರಾಜ್ಯ ತಂಡಗಳಲ್ಲದೆ ಭಾರತೀಯ ರೈಲ್ವೇಸ್, ಸರ್ವೀಸಸ್, ಭಾರತೀಯ ಆಹಾರ ನಿಗಮ, ಪಂಜಾಬ್ ಪೊಲೀಸ್ ತಂಡಗಳು ಚಾಂಪಿಯನ್ ಶಿಪ್ನಲ್ಲಿ ಸೆಣಸಲಿವೆ. ಈ ಚಾಂಪಿಯನ್ ಶಿಪ್ನ ನಿರ್ವಹಣೆಯ ಆಧಾರದ ಮೇಲೆ ಮುಂದಿನ ಕಾಮನ್ ವೆಲ್ತ್ ಗೇಮ್ಸ್, ಏಷ್ಯನ್ ಗೇಮ್ಸ್ ಹಾಗೂ ಒಲಿಂಪಿಕ್ಸ್ ಕ್ರೀಡಾಕೂಟಗಳಿಗೆ ರಾಷ್ಟ್ರೀಯ ತಂಡವನ್ನು ಆಯ್ಕೆ ಮಾಡಲಾಗುತ್ತದೆ ಎಂದು ವಿವರ ನೀಡಿದರು.
ಭಾರತೀಯ ವೇಯ್ಟ್ ಲಿಫ್ಟಿಂಗ್ ಫೆಡರೇಶನ್ ಹಾಗೂ ರಾಜ್ಯ ಸಂಸ್ಥೆಯ ಅಧಿಕಾರಿಗಳು ಈ ಕೂಟದಲ್ಲಿ ತಾಂತ್ರಿಕ ಅಧಿಕಾರಿಗಳಾಗಿ ಶ್ರಮಿಸಲಿದ್ದಾರೆ. ಸ್ಪರ್ಧೆಗಳು ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ನ ನುಡಿಸಿರಿ ವೇದಿಕೆ ಸಭಾಂಗಣದಲ್ಲಿ ನಡೆಯಲಿದೆ. ಕ್ರೀಡಾಪಟುಗಳಿಗೆ, ಅಧಿಕಾರಿಗಳಿಗೆ ವಸತಿ ಹಾಗೂ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಡಾ.ಎಂ.ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಉದ್ಘಾಟನೆ: ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ನಲ್ಲಿ ಜ.21ರಂದು ಬೆಳಗ್ಗೆ 10.30ಕ್ಕೆ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಶಾಸಕ ಕೆ.ಅಭಯಚಂದ್ರ ಜೈನ್ ವಹಿಸುವರು. ಸಂಸದ ನಳಿನ್ ಕುಮಾರ್ ಕಟೀಲು, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸದಾನಂದ ಶೆಟ್ಟಿ, ಇಂಡಿಯನ್ ವೇಯ್ಟ್ ಲಿಫ್ಟಿಂಗ್ ಫೆಡರೇಷನ್ ಅಧ್ಯಕ್ಷ ಪಿ.ಬಿ.ಭಾಷ್ಯ, ಡಾ.ಪಿ.ದಯಾನಂದ ಪೈ,ಸಹದೇವ್ ಯಾದವ್, ಡಾ.ಸುರೇಂದ್ರ ವಿ.ಶೆಟ್ಟಿ ಉಪಸ್ಥಿತರಿರುವರು.
ಜ.25ರಂದು ಸಾಯಂಕಾಲ 4.30ಕ್ಕೆ ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಒಲಿಂಪಿಯನ್ ಸತೀಶ್ ರೈ, ಕೆ.ಗೋವಿಂದರಾಜ್, ಕಿಶೋರ್ ಆಳ್ವ, ದೇವಿಪ್ರಸಾದ್ ಶೆಟ್ಟಿ, ಮುನಿಯಾಲ್ ಉದಯಕುಮಾರ್ ಶೆಟ್ಟಿ ಅತಿಥಿಗಳಾಗಿ ಪಾಲ್ಗೊಳ್ಳುವರು.