Headlines

ಇಳೆಯು ಕಾದಿದೆ ಮಳೆಗಾಗಿ… * ಒತ್ತಡ ನಿರ್ವಹಣೆಗೆ ಆದ್ಯತೆ ಅವಶ್ಯ * ಬೆಳದಿಂಗಳ ಸಮ್ಮೇಳನಾಧ್ಯಕ್ಷತೆಗೆ ಬನ್ನಂಜೆ ಆಯ್ಕೆ * ಕಥೋಲಿಕ್ ಸಮಾಜೋತ್ಸವ * ಅಶ್ವತ್ಥಪುರದಲ್ಲಿ ಡಾ.ಸುಧೀರ್ ಹೆಗ್ಡೆ ನೇತೃತ್ವದಲ್ಲಿ ನೇತ್ರ ಚಿಕಿತ್ಸೆ ಶಿಬಿರ * ರೋಟರಿಯಿಂದ ಗಣರಾಜ್ಯೋತ್ಸವ ಆಚರಣೆ * ರಾಷ್ಟ್ರೀಯ ಐಕ್ಯತೆಗೆ ಯುವಪಡೆ ಸಿದ್ಧವಾಗಲಿ: ವಿನಯ ಹೆಗ್ಡೆ * ಮಹಾಮಜ್ಜನಕ್ಕೆ ಸಿದ್ದತೆ ಪೂರ್ಣ * ಶ್ರೀಬಾಹುಬಲಿ ಅಹಿಂಸಾದಿಗ್ವಿಜಯಂ ಲೋಕಾರ್ಪಣೆ * ಲೋಕಾಯುಕ್ತ ಪ್ರವಾಸ * ರೋಟರಿಯಿಂದ ಸಾಧಕರಿಗೆ ಸನ್ಮಾನ * ಸ್ವರಾಜ್ಯ ಮೈದಾನದ ಮೇಲೆ ತೂಗುಗತ್ತಿ…! * ಡಾ.ಸುಧೀರ್ ಹೆಗ್ಡೆ ನೇತೃತ್ವದಲ್ಲಿಕಣ್ಣಿನತಪಾಸಣಾ ಶಿಬಿರ * ಯುವಶಕ್ತಿಗೆ ಪರಿಸರಪ್ರಜ್ಞೆಯ ಅರಿವು ಮೂಡಿಸಿದ ಮಹಾಕಾರ್ಯ * ಮೂಡಬಿದಿರೆ ಶಿಕ್ಷಣ ಪ್ರೇಮಿಗಳ ನಾಡು: ಅಭಯಚಂದ್ರ ಜೈನ್ * 50ನೇ ವೈದ್ಯಕೀಯ ತಪಾಸಣಾ ಶಿಬಿರ * ಜ.21-25: ಮೂಡಬಿದಿರೆಯಲ್ಲಿ ರಾಷ್ಟ್ರೀಯ ವೈಯ್ಟ್ ಲಿಫ್ಟಿಂಗ್ * ರಾಜ್ಯಮಟ್ಟದ ಟಿ-20 ಕ್ರಿಕೆಟ್ ಟೂರ್ನಿ: ಆಳ್ವಾಸ್‍ಗೆ ಪ್ರಶಸ್ತಿ * ಕವಿಕುಲಗುರು ಕುಮಾರವ್ಯಾಸ * ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಒಡ್ಡು ನಿರ್ಮಾಣ *

ತಂತ್ರಜ್ಞಾನಕ್ಕೆ ಹೊಂದಿಕೊಳ್ಳಿ: ಕೃಷ್ಣಮೋಹನ್ ಪ್ರಭು

#skpa

ನಮ್ಮ ಪ್ರತಿನಿಧಿ ವರದಿ

ಅತ್ಯಾಧುನಿಕ ಜಗತ್ತಿನಲ್ಲಿ ತಂತ್ರಜ್ಞಾನದ ವೇಗದೊಂದಿಗೆ ಬದಲಾವಣೆಗೆ ಸ್ಪಂದಿಸುವ ಮನೋಭಾವನೆಯನ್ನು ರೂಢಿಸಿಕೊಳ್ಳುವುದು ಅತೀ ಅಗತ್ಯ. ಹೊಸ ಹೊಸ ಆವಿಷ್ಕಾರಗಳ ಮೂಲಕ ಛಾಯಾಚಿತ್ರಗ್ರಾಹಕ ತನ್ನ ಸ್ವಂತಿಕೆಯನ್ನು ಉಳಿಸಿಕೊಂಡು ತನ್ನತನವನ್ನು ಮೈಗೂಢಿಸಿಕೊಳ್ಳಬೇಕೆಂದು ಹಿರಿಯ ಛಾಯಾಗ್ರಾಹಕ ಡಾ.ಕೃಷ್ಣಮೋಹನ್ ಪ್ರಭು ಅಭಿಪ್ರಾಯಿಸಿದರು.
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಇದರ ಮೂಡಬಿದಿರೆ ವಲಯದ ಪದಗ್ರಹಣ ಸಮಾರಂಭವನ್ನು ಮೂಡಬಿದಿರೆ ಸಮಾಜಮಂದಿರ ಸಭಾದಲ್ಲಿ ಉದ್ಘಾಟಿಸಿ ಮಾತನಾಡಿದರು.

#dhanjaymoodbidri
ಆತ್ಮಗೌರವದೊಂದಿಗೆ ವೃತ್ತಿಗೌರವವನ್ನು ಎತ್ತಿಹಿಡಿಯುತ್ತಾ ವೃತ್ತಿಧರ್ಮಕ್ಕೆ ಕುಂದಾಗದಂತೆ ಕಾರ್ಯೋನ್ಮುಖರಾಗುವಂತೆ ಹಿರಿಯ ಪತ್ರಕರ್ತ ಧನಂಜಯ ಮೂಡಬಿದಿರೆ ಕರೆನೀಡಿದರು. ಸಂಘದ ವತಿಯಿಂದ ನೀಡಿದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಎಸ್.ಕೆ.ಪಿ.ಎ ಅಧ್ಯಕ್ಷ ವಿಲ್ಸನ್ ಗೋನ್ಸಾಲ್ವೀಸ್ ಅಧ್ಯಕ್ಷತೆ ವಹಿಸಿದ್ದರು. ಸೌತ್ ಕೆನರಾ ಫೋಟೋಗ್ರಾಫರ್ಸ್ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಕೆ.ವಾಸುದೇವ ರಾವ್, ಎಸ್.ಕೆ.ಪಿ.ಎ ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ, ಮೂಡಬಿದಿರೆ ವಲಯದ ಗೌರವಾಧ್ಯಕ್ಷ ಭಾನುಪ್ರಕಾಶ್ ರಾವ್, ಸಹಕಾರ ಸಂಘದ ನಿರ್ದೇಶಕ ರಾಮ ಕೋಟ್ಯಾನ್, ಕೋಶಾಧಿಕಾರಿ ಜಗದೀಶ್ ವೇದಿಕೆಯಲ್ಲಿದ್ದರು. ಸಂಘದ ಅಧ್ಯಕ್ಷ ಮಣಿ ಕೋಟೆಬಾಗಿಲು ನೂತನ ಅಧ್ಯಕ್ಷ ರವಿಕೋಟ್ಯಾನ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಪ್ರಧಾನ ಕಾರ್ಯದರ್ಶಿ ನಿತಿನ್ ಬೆಳುವಾಯಿ ವರದಿ ವಾಚಿಸಿದರು. ವಿಲ್ಫ್ರೆಡ್ ಮೆಂಡೋನ್ಸಾ ಕಾರ್ಯಕ್ರಮ ನಿರ್ವಹಿಸಿದರು.