Headlines

ಕಂಬಳಸಮಿತಿ ಸಭೆ * 30ನೇವಾರದ ಕ್ಲೀನ್ ಅಪ್ ಮೂಡಬಿದಿರೆ * ಸ್ವಚ್ಛತಾ ದಿನಾಚರಣರೆ * ಶಾಸಕ ಉಮಾನಾಥ್ ಎ.ಕೋಟ್ಯಾನ್ ವಿಶೇಷ ಸಂದರ್ಶನ * ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಮಲ್ಲಿಕಾ ಎಸ್.ಘಂಟಿ, ಉದ್ಘಾಟಕರಾಗಿ ಡಾ.ಷ. ಶೆಟ್ಟರ್ * ಫಲವಿತರಿಸಿ ಹುಟ್ಟುಹಬ್ಬ ಆಚರಣೆ * ನುಡಿಸಿರಿಯಲ್ಲೊಂದು ಕೃಷಿಸಿರಿ:ಡಾ.ಆಳ್ವ * ಹುಲಿ-ಸ್ವಚ್ಛತೆಯೂ -ಗಣೇಶೋತ್ಸವವೂ-ಪುರಸಭೆಯೂ! * ಗಣೇಶ ದರ್ಶನ… * ಮೂಡಬಿದಿರೆಯಲ್ಲಿ ಗಣೇಶೋತ್ಸವದ ಗೌಜಿ ಶುರು… * 28ನೇ ವಾರದ ಸ್ವಚ್ಛತಾ ಅಭಿಯಾನ * ಈ ಕರ್ಮಕಾಂಡಕ್ಕೆ ಯಾರು ಬಲಿ…? * `ಗುಣಮಟ್ಟದ ಶಿಕ್ಷಣ-ಸೂಕ್ತ ಉದ್ಯೋಗಕ್ಕೆ ಒತ್ತು’ * 27ನೇ ವಾರದ ಕ್ಲೀನ್ ಅಪ್ ಮೂಡಬಿದಿರೆ ಸಂಪನ್ನ * ನಮ್ಮ ಹೆಮ್ಮಕ್ಕಳು ಅದೆಷ್ಟು ಸುರಕ್ಷಿತ…? * ಮನಮೋಹಕ ನೃತ್ಯ ಸಿಂಚನ * ಸ್ವಚ್ಛ ಸರ್ವೇಕ್ಷಣ ಗ್ರಾಮೀಣ 2018 * ಆಧುನಿಕತೆಯೇ ಮುಳುವಾಯಿತೇ…? * ನಾಟ್ಯ ಮಯೂರಿ… * ನವೆಂಬರ್ 16-18: ಆಳ್ವಾಸ್ ನುಡಿಸಿರಿ *

ನವೆಂಬರ್ 16-18: ಆಳ್ವಾಸ್ ನುಡಿಸಿರಿ

#alvas#nudisiri#2018#dr#mohan#alva

ಆಳ್ವಾಸ್ ನುಡಿಸಿರಿ – 2018

ಮೂಡಬಿದಿರೆ: ಹದಿನೈದನೇ ವರ್ಷದ ಆಳ್ವಾಸ್ ನುಡಿಸಿರಿ ನವೆಂಬರ್ 16,17 ಮತ್ತು 18ರಂದು ವಿವಿಧ ಸಾಹಿತ್ಯಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವೈಭವದಿಂದ ನಡೆಯಲಿದೆ ಎಂದು ಆಳ್ವಾಸ್ ನುಡಿಸಿರಿಯ ರೂವಾಡಿ, ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ. ನವಂಬರ16 ಶುಕ್ರವಾರಬೆಳಿಗ್ಗೆ ಸಮ್ಮೇಳನವು ಉದ್ಘಾಟನೆಗೊಳ್ಳಲಿದ್ದು, ನವಂಬರ 18ನೇ ತಾರೀಕುಆದಿತ್ಯವಾರಅಪರಾಹ್ನ ಸಮ್ಮೇಳನವು ಸಂಪನ್ನಗೊಳ್ಳಲಿದೆ.
ಸಮ್ಮೇಳನದ ರೂಪುರೇಖೆಗಳ ಕುರಿತು ಚರ್ಚೆಗಳು ನಡೆಯುತ್ತಿದ್ದು ಶೀಘ್ರವಾಗಿ ಅಂತಿಮ ಸ್ಪರ್ಷನೀಡಲಾಗುವುದು.ಅರ್ಥವತ್ತಾಗುವಂತೆ ಹಾಗೂ ಆಕರ್ಷಕವಾಗುವಂತೆ ಸಮ್ಮೇಳನವನ್ನು ಆಯೋಜಿಸಲು ಪೂರ್ವತಯಾರಿಗಳು ನಡೆಯುತ್ತಿವೆ. ಎಂದಿನಂತೆ ಈ ವರ್ಷವೂರತ್ನಾಕರವರ್ಣಿ ವೇದಿಕೆಯ ನುಡಿಸಿರಿ ಸಭಾಂಗಣದಲ್ಲಿ ಸಮ್ಮೇಳನವು ಜರಗಲಿದೆ.
ಪ್ರತಿನಿಧಿಯಾಗಬಯಸುವ ಕನ್ನಡಾಭಿಮಾನಿಗಳು 100/- ರೂ.ಪ್ರತಿನಿಧಿ ಶುಲ್ಕ ನೀಡಿ ಸದಸ್ಯರಾಗಬಹುದು.ವಿದ್ಯಾರ್ಥಿಗಳಿಗೆ ಸಮ್ಮೇಳನದಲ್ಲಿ ಉಚಿತ ಪ್ರವೇಶವಿದೆ.ಸಮ್ಮೇಳನದ ಯಶಸ್ಸಿಗಾಗಿ ಸಿದ್ಧತೆಗಳು ನಡೆಯುತ್ತಿದ್ದುಕನ್ನಡ ನಾಡು-ನುಡಿ-ಸಂಸ್ಕೃತಿ ಪ್ರಿಯಕನ್ನಡ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ‘ಆಳ್ವಾಸ್ ನುಡಿಸಿರಿ 2018’ನ್ನು ಯಶಸ್ವಿಗೊಳಿಸಬೇಕಾಗಿ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 08258-261229 ಸಂಪರ್ಕಿಸಬಹುದು.