Headlines

ಹಂತಕರನ್ನು ಕೂಡಲೇ ಬಂಧಿಸಿ: ಸಿ.ಎಂ * ಎದೆಭಾಗಕ್ಕೆ 2;ಹಣೆಗೆ1ಗುಂಡು * ಪರ್ತಕರ್ತೆ ಗೌರಿ ಲಂಕೇಶ್ ಹತ್ಯೆ * ಎಂಟು ಮಂದಿ ಶಿಕ್ಷಕರಿಗೆ ಸನ್ಮಾನ * ಸಾಧಕರಿಗೆ ಸನ್ಮಾನ * ಶಾಲೆ ಶಾಲೆಯಲ್ಲಿ ಗೆಜ್ಜೆಯ ನಿನಾದ! * ಋಣ ತೀರಿಸುವ ಕಾರ್ಯವಾಗಲಿ: ದೇವಿಪ್ರಸಾದ್ ಶೆಟ್ಟಿ * ಸಾರ್ವಜನಿಕ ಗಣೇಶೋತ್ಸವ * ಶ್ರೀ ಸೂರ್ಯನಾರಾಯಣ ಕ್ಷೇತ್ರದಲ್ಲಿ ಗಣೇಶೋತ್ಸವ * ಗ್ರಾಮ-ಪಟ್ಟಣಕ್ಕೆ ಒಂದೇ ಗಣೇಶನಿರಲಿ-ಟಿ.ಆರ್.ಸುರೇಶ್ * 54ನೇ ವರ್ಷದ ಮೂಡಬಿದಿರೆಯ ಗಣೇಶ * ಪೆರಿಂಜೆಯಲ್ಲಿ ಸಂಭ್ರಮದ ಗಣೇಶೋತ್ಸವ * ಕಲ್ಲಬೆಟ್ಟಿನಲ್ಲಿ ಪೂಜಿಸಿದ ವಿಘ್ನವಿನಾಯಕ * ಮೂಡುಬಿದಿರೆಯಲ್ಲಿ ರಕ್ಷಾಂಬಂಧನ * ಪ್ರೊ. ಕೆ.ಇ.ರಾಧಾಕೃಷ್ಣ ಮತ್ತು ಸತ್ಯಮಂಗಲ ಆರ್ ಮಹಾದೇವ ಅವರಿಗೆ ವರ್ಧಮಾನ ಪ್ರಶಸ್ತಿ ಘೋಷಣೆನ * ಇದು ಅತ್ಯಾಧುನಿಕ `ಪಾರಂಪರಿಕ’ಮಾದರಿಯ ಶ್ಯಾವಿಗೆ ಮಣೆ! * ವಿಂಶತಿ ಯಕ್ಷಕಲೋತ್ಸವಕ್ಕೆ ತೆರೆ * ಸಿ.ಐ.ಟಿ.ಯು: 9ನೇ ಬೀಡಿ ಕಾರ್ಮಿಕರ ರಾಜ್ಯ ಸಮ್ಮೇಳನ * ಪದ್ಮಪ್ರಸಾದ್ ಜೈನ್ ನೇಮಕ * ವಿಶೇಷ ಪೂಜೆ-ಅಭಿಷೇಕ *

ನೆಲ್ಲಿಕಾಯಿ ಸಾರು

vaarte dish nelli saru

ವಾರ್ತೆ ರೆಸಿಪಿ

ಬೇಕಾಗುವ ಸಾಮಾಗ್ರಿಗಳು:

1/2 ಕಪ್‌ ತೊಗರಿಬೇಳೆ , 2-3 ಬೇಯಿಸಿ ಮ್ಯಾಷ್‌ ಮಾಡಿದ ನೆಲ್ಲಿಕಾಯಿ,1 ಟೊಮೆಟೊ, 1 ಚಮಚ ರಸಂಪುಡಿ, 1 ಒಣಮೆಣಸು, 2 ಹಸಿಮೆಣಸು, 1/2 ಚಮಚ ತುಪ್ಪ, 1/2 ಚಮಚ ಸಾಸಿವೆ, 1/2 ಚಮಚ ಜೀರಿಗೆ, 1 ಎಸಳು ಕರಿಬೇವು, ಸ್ವಲ್ಪ ಕೊತ್ತಂಬರಿಸೊಪ್ಪು, ಚಿಟಿಕೆ ಇಂಗು, ರುಚಿಗೆ ತಕ್ಕಷ್ಟು ಉಪ್ಪು, ಸಣ್ಣ ತುಂಡು ಬೆಲ್ಲ.

 

 

ಹೇಗೆ ತಯಾರಿಸುವುದು:
ಬಾಣಲೆ ಒಲೆಯ ಮೇಲಿಟ್ಟು 2 ಕಪ್‌ ನೀರು, ಜಜ್ಜಿದ ನೆಲ್ಲಿಕಾಯಿ ಹಾಕಿ ಕುದಿಸಿ. ನಂತರ ರಸಂಪುಡಿ, ಬೆಲ್ಲ, ಟೊಮೆಟೊ ಚೂರು, ಬೇಯಿಸಿದ ತೊಗರಿಬೇಳೆ, ಹಸಿಮೆಣಸು ಚೂರು, ಉಪ್ಪು ಸೇರಿಸಿ 5-10 ನಿಮಿಷ ಕುದಿಸಿ. ನಂತರ ತುಪ್ಪದಲ್ಲಿ ಸಾಸಿವೆ, ಜೀರಿಗೆ, ಇಂಗು, ಕರಿಬೇವು, ಕೆಂಪುಮೆಣಸು ಸೇರಿಸಿ ಒಗ್ಗರಣೆ ಕೊಡಿ. ಕೊನೆಗೆ ಕೊತ್ತಂಬರಿಸೊಪ್ಪು ಹಾಕಿ ಒಲೆಯಿಂದ ಇಳಿಸಿ. ಈಗ ಪೌಷ್ಟಿಕವಾದ ರುಚಿಯಾದ ನೆಲ್ಲಿಕಾಯಿ ಸಾರು ಅನ್ನದೊಂದಿಗೆ ಸವಿಯಲು ಸಿದ್ಧ