Headlines

ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ * ಮಾನವೀಯ ಸ್ಪಂದನೆ ಆಗಲೇಬೇಕಾಗಿದೆ… * 33ನೇ ವಾರ ಪೂರೈಸಿದ ಜವನೆರ್ ಬೆದ್ರದ ಸಾಧನೆ * ಆಧುನಿಕತೆಯಿಂದ ಆಶಾದಾಯಕ ಸ್ಥಿತಿ ಬಂದೊದಗಿದೆ: ಹರೀಶ್ ಶೆಣೈ * ಮೂಡಬಿದಿರೆಯಲ್ಲಿ ಸದ್ಭಾವನಾ ಗೋಷ್ಠಿ * ಭಾರತೀಯ ಜನತಾ ಪಾರ್ಟಿಯಿಂದ ಸ್ವಚ್ಛತೆಯ ಮಂತ್ರ * ಬಸದಿಗಳ ಬೀಡಲ್ಲಿ ಬಸದಿಗಳ ಸ್ವಚ್ಛತೆ * ಕಂಬಳಸಮಿತಿ ಸಭೆ * 30ನೇವಾರದ ಕ್ಲೀನ್ ಅಪ್ ಮೂಡಬಿದಿರೆ * ಸ್ವಚ್ಛತಾ ದಿನಾಚರಣರೆ * ಶಾಸಕ ಉಮಾನಾಥ್ ಎ.ಕೋಟ್ಯಾನ್ ವಿಶೇಷ ಸಂದರ್ಶನ * ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಮಲ್ಲಿಕಾ ಎಸ್.ಘಂಟಿ, ಉದ್ಘಾಟಕರಾಗಿ ಡಾ.ಷ. ಶೆಟ್ಟರ್ * ಫಲವಿತರಿಸಿ ಹುಟ್ಟುಹಬ್ಬ ಆಚರಣೆ * ನುಡಿಸಿರಿಯಲ್ಲೊಂದು ಕೃಷಿಸಿರಿ:ಡಾ.ಆಳ್ವ * ಹುಲಿ-ಸ್ವಚ್ಛತೆಯೂ -ಗಣೇಶೋತ್ಸವವೂ-ಪುರಸಭೆಯೂ! * ಗಣೇಶ ದರ್ಶನ… * ಮೂಡಬಿದಿರೆಯಲ್ಲಿ ಗಣೇಶೋತ್ಸವದ ಗೌಜಿ ಶುರು… *

ನ್ಯಾಯ ಸಿಗುತ್ತಾ?

kulabhushan yadav

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ

ಭಾರತದ ನಿವೃತ್ತ ಸೇನಾಧಿಕಾರಿ ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಕೋರ್ಟ್ ನಲ್ಲಿ ವಿಚಾರಣೆ ಶುರುವಾಗಿದೆ. ಪಾಕಿಸ್ತಾನದ ಕ್ರಮದ ವಿರುದ್ಧ ಭಾರತ ಸಲ್ಲಿಸಿರುವ ಅರ್ಜಿಯ ಕುರಿತು ವಿಚಾರಣೆಯು ನೆದರ್ಲೆಂಡ್ ನ ಹೇಗ್ ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಆರಂಭವಾಗಿದೆ.

 

 

 
18 ವರ್ಷಗಳ ಬಳಿಕ ಕೋರ್ಟ್ ನಲ್ಲಿ ಭಾರತ-ಪಾಕ್ ಮುಖಾಮುಖಿಯಾಗಿದೆ. ಪಾಕಿಸ್ತಾನ ಭಾರತದ ಸಾಮಾಜಿಕ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಕುಲಭೂಷಣ್ ವಿಚಾರದಲ್ಲಿ ಪಾಕ್ ಸುಳ್ಳು ಆರೋಪ ಮಾಡಿದೆ. ಜಾಧವ್ವ್ ವಿಚಾರದಲ್ಲಿ ಪಾಕ್ ಯಾವುದೇ ನಿಯಮವನ್ನು ಪಾಲಿಸಿಲ್ಲ. ಪಾಕಿಸ್ತಾನ ವಿಯೆನ್ನಾ ನಿಯಮವನ್ನೂ ಉಲ್ಲಂಘಿಸಿದೆ ಎಂದು ಜಾಧವ್ ಪರ ವಕೀಲರು ವಾದಿಸಿದ್ದಾರೆ.

 

 

 

ಅಲ್ಲದೆ ಜಾಧವ್ ತಮದೆ-ತಾಯಿಗೆ ಪಾಕಿಸ್ತಾನಕ್ಕೆ ತೆರಳಲು ವೀಸಾ ನೀಡಿಲ್ಲ. ಜಾಧವ್ ಗೆ ಪೋಷಕರನ್ನು ಭೇಟಿ ಮಾಡುವ ಅವಕಾಶವನ್ನು ನೀಡಿಲ್ಲ. 16 ಬಾರಿ ಭಾರತದ ಮನವಿ ಮಾಡಿದರೂ ಪಾಕಿಸ್ತಾನ ಪರಿಗಣಿಸಿಲ್ಲ ಎಂದಿದ್ದಾರೆ.

 

 

 

ಭಾರತ ಮೇ8ರಂದು ಅಂತಾರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗಿತ್ತು. ಗಲ್ಲುಶಿಕ್ಷೆಗೆ ತಡೆ ವಿಧಿಸಿ, ಮೇ 15ರಂದು ವಿಚಾರಣೆ ನಿಗದಿ ಪಡಿಸಿತ್ತು. ಜಾಧವ್ ಪ್ರಕರಣ ಐಸಿಜೆ ವ್ಯಾಪ್ತಿಗೆ ಬರುವುದಿಲ್ಲ ಎಂದು ಪಾಕ್ ವಾದಿಸಲು ಮುಂದಾಗಿತ್ತು. ಆದರೆ ಭಾರತ ಮಾನವ ಹಕ್ಕುಗಳ ಉಲ್ಲಂಘನೆ ದೃಷ್ಟಿಕೋನದಲ್ಲಿ ವಾದ ಮಂಡಿಸಲು ಮುಂದಾಗಿದೆ.