Headlines

ಆಳ್ವಾಸ್ ವಿದ್ಯಾರ್ಥಿಸಿರಿಯ ಹೈಲೈಟ್ಸ್… * ಬಾಲಪ್ರತಿಭೆ ಪ್ರದರ್ಶನ * ಬಸದಿಗಳ ನಾಡಲ್ಲಿ ಕನ್ನಡದ ಬಾವುಟ… ಹೊತ್ತಿತೋ…ಹೊತ್ತಿತು ಕನ್ನಡದ ದೀಪ… * ನುಡಿಸಿರಿಯ ಸರ್ವಾಧ್ಯಕ್ಷರ ಎಕ್ಸ್ ಕ್ಲೂಸಿವ್ ಸಂದರ್ಶನ * ಹನ್ನೆರಡು ಸಾಧಕರಿಗೆ 2018ರ ಆಳ್ವಾಸ್ ನುಡಿಸಿರಿ ಪುರಸ್ಕಾರ * ನುಡಿಸಿರಿಯ ಅಂಗಳದಲ್ಲಿ ಅಚ್ಚರಿಯ ಮೇಲೊಂದಚ್ಚರಿ! * ನುಡಿಸಿರಿಯ ಅಂಗಳದಲ್ಲೊಂದು ಸುದ್ದಿಮನೆ! * ಆಳ್ವಾಸ್ ವಿದ್ಯಾರ್ಥಿಸಿರಿ 2018 ಆರಂಭ * ಕಣ್ಣುತೆರೆಸಿದ ಜವನೆರ್ ಬೆದ್ರ ಸಂಘಟನೆ * ಯೋಧರ ಮನೆಯಲ್ಲಿ ಬೆಳಗಿದ ದೀಪ! * ಯಶಸ್ವೀ 36ನೇವಾರ ಪೂರೈಸಿದ ಕ್ಲೀನ್ ಅಪ್ ಮೂಡಬಿದಿರೆ * ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ * ಅಳಿಯೂರಿನಲ್ಲಿ ಮೇಳೈಸಲಿದೆ ಕ್ರೀಡಾಹಬ್ಬ.! * ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯ್ತು ಹಳ್ಳಿ ಹುಡುಗರ ಅನ್ವೇಷಣೆ! * ಶಿರ್ಲಾಲು: ಹೊಸ ಶಾಸನ ಪತ್ತೆ * ಸಾವಿರ ಕಂಬದ ಬಸದಿಯ ಸ್ವಚ್ಛತೆ * ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ *

ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ

#market#moodbidri

ಸಣ್ಣಮಳೆಗೆ ತತ್ತರಿಸಿದ ಮೂಡಬಿದಿರೆ

ಮೂಡಬಿದಿರೆ: ಮಂಗಳವಾರ ಸಾಯಂಕಾಲದ ಹೊತ್ತಿಗೆ ಸುರಿದ ಸಣ್ಣ ಮಳೆಗೆ ಮೂಡಬಿದಿರೆಯ ಹೃದಯಭಾಗದಲ್ಲಿ ತೀವ್ರ ಅನಾಹುತವೇ ಸೃಷ್ಠಿಯಾಗಿದೆ. ನೂತನ ಮಾರುಕಟ್ಟೆ ಸಂಕೀರ್ಣದ ಆವರಣವೂ ಸೇರಿದಂತೆ ಮುಖ್ಯರಸ್ತೆಯಲ್ಲಿ ನೀರು ಸಂಗ್ರಹಗೊಂಡು ಜಲಾಶಯದಂತಾಗಿದೆ. ಇದರಿಂದಾಗಿ ಈ ಭಾಗದಲ್ಲಿದ್ದ ಹಲವು ಅಂಗಡಿಗಳು ಮುಳುಗಡೆಯ ಭೀತಿ ಅನುಭವಿಸಿದವು. ಜೊತೆಗೆ ರಿಕ್ಷಾ ಪಾರ್ಕ್, ಮುಖ್ಯರಸ್ತೆ ಸಂಪೂರ್ಣ ಜಲಾವೃತಗೊಂಡು ಸಂಚಾರಕ್ಕೆ ತೀವ್ರ ತೊಂದರೆಯುಂಟಾಯಿತು.
ಕಾರಣವೇನು: ಹಳೆಯ ಮಾರುಕಟ್ಟೆ ಸಂಕೀರ್ಣವನ್ನು ಕೆಡವಿ ಆ ಸ್ಥಳದಲ್ಲಿ ನೂತನ ಮಾರುಕಟ್ಟೆ ಸಂಕೀರ್ಣ ನಿರ್ಮಾಣ ಮಾಡಲಾಗುತ್ತಿದೆ. ಕಾಮಗಾರಿ ನಡೆಯುವ ಸ್ಥಳದ ಸುತ್ತಲೂ ತಗಡುಶೀಟು ಅಳವಡಿಸಿದ ಬೇಲಿ ನಿರ್ಮಿಸಲಾಗಿದೆ. ಮಾರುಕಟ್ಟೆ ಕಾಮಗಾರಿ ನಡೆಯುವ ಬೃಹತ್ ಪ್ರದೇಶದೊಳಗೆ ನೀರು ಹರಿದು ಹೋಗಲು ಬೇಕಾದ ಸುವ್ಯವಸ್ಥೆಯಿಲ್ಲ. ಪರಿಸರದಲ್ಲಿ ಸೂಕ್ತ ಚರಂಡಿ ವ್ಯವಸ್ಥೆಯೂ ಇಲ್ಲ. ಮಳೆ ಬೀಳಲಾರಂಭಿಸಿದರೆ ನೀರು ಸಂಗ್ರಹವಾಗಿ ಕೃತಕ ನೆರೆಭೀತಿ ಉಂಟಾಗತೊಡಗಿದೆ. ಈ ಬಗ್ಗೆ ಸಂಬಂಧಪಟ್ಟವರು ಯಾವೊಂದು ಕ್ರಮ ಕೈಗೊಂಡಿಲ್ಲ. ಪುರಸಭೆಯೂ ಇತ್ತ ಚಿತ್ತ ಹರಿಸಿಲ್ಲ. ಸಮಸ್ಯೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಅಂದೇ ಎಚ್ಚರಿಸಿಯಾಗಿತ್ತು: ಮೂಡಬಿದಿರೆಯ ಜವನೆರ್ ಬೆದ್ರ ಸಂಘಟನೆ ಈ ಸಮಸ್ಯೆಯಬಗ್ಗೆ ಈ ಹಿಂದೆಯೇ ಪುರಸಭೆಯ ಗಮನ ಸೆಳೆಯುವ ಕಾರ್ಯವನ್ನು ಹಲವು ಬಾರಿ ಮಾಡಿತ್ತು. ಆದರೆ ಪುರಸಭೆ ಇದರತ್ತ ಚಿತ್ತ ವಹಿಸದೆ ಮೌನ ತಾಳಿದೆ. ಇಂದು ಬಿದ್ದ ಸಣ್ಣ ಮಳೆಗೆ ದೊಡ್ಡ ತೊಂದರೆ ಉಂಟಾಗಿದೆ. ಇನ್ನಾದರೂ ಸ್ಥಳೀಯಾಡಳಿತ ಎಚ್ಚೆತ್ತು ಸಮಸ್ಯೆಯ ಗಂಭೀರತೆಯನ್ನು ಅರಿತು ಸೂಕ್ತ ಕ್ರಮ ಜರುಗಿಸಬೇಕೆಂಬುದು ಸ್ಥಳೀಯರ ಒತ್ತಾಸೆಯಾಗಿದೆ.