Headlines

ಹಂತಕರನ್ನು ಕೂಡಲೇ ಬಂಧಿಸಿ: ಸಿ.ಎಂ * ಎದೆಭಾಗಕ್ಕೆ 2;ಹಣೆಗೆ1ಗುಂಡು * ಪರ್ತಕರ್ತೆ ಗೌರಿ ಲಂಕೇಶ್ ಹತ್ಯೆ * ಎಂಟು ಮಂದಿ ಶಿಕ್ಷಕರಿಗೆ ಸನ್ಮಾನ * ಸಾಧಕರಿಗೆ ಸನ್ಮಾನ * ಶಾಲೆ ಶಾಲೆಯಲ್ಲಿ ಗೆಜ್ಜೆಯ ನಿನಾದ! * ಋಣ ತೀರಿಸುವ ಕಾರ್ಯವಾಗಲಿ: ದೇವಿಪ್ರಸಾದ್ ಶೆಟ್ಟಿ * ಸಾರ್ವಜನಿಕ ಗಣೇಶೋತ್ಸವ * ಶ್ರೀ ಸೂರ್ಯನಾರಾಯಣ ಕ್ಷೇತ್ರದಲ್ಲಿ ಗಣೇಶೋತ್ಸವ * ಗ್ರಾಮ-ಪಟ್ಟಣಕ್ಕೆ ಒಂದೇ ಗಣೇಶನಿರಲಿ-ಟಿ.ಆರ್.ಸುರೇಶ್ * 54ನೇ ವರ್ಷದ ಮೂಡಬಿದಿರೆಯ ಗಣೇಶ * ಪೆರಿಂಜೆಯಲ್ಲಿ ಸಂಭ್ರಮದ ಗಣೇಶೋತ್ಸವ * ಕಲ್ಲಬೆಟ್ಟಿನಲ್ಲಿ ಪೂಜಿಸಿದ ವಿಘ್ನವಿನಾಯಕ * ಮೂಡುಬಿದಿರೆಯಲ್ಲಿ ರಕ್ಷಾಂಬಂಧನ * ಪ್ರೊ. ಕೆ.ಇ.ರಾಧಾಕೃಷ್ಣ ಮತ್ತು ಸತ್ಯಮಂಗಲ ಆರ್ ಮಹಾದೇವ ಅವರಿಗೆ ವರ್ಧಮಾನ ಪ್ರಶಸ್ತಿ ಘೋಷಣೆನ * ಇದು ಅತ್ಯಾಧುನಿಕ `ಪಾರಂಪರಿಕ’ಮಾದರಿಯ ಶ್ಯಾವಿಗೆ ಮಣೆ! * ವಿಂಶತಿ ಯಕ್ಷಕಲೋತ್ಸವಕ್ಕೆ ತೆರೆ * ಸಿ.ಐ.ಟಿ.ಯು: 9ನೇ ಬೀಡಿ ಕಾರ್ಮಿಕರ ರಾಜ್ಯ ಸಮ್ಮೇಳನ * ಪದ್ಮಪ್ರಸಾದ್ ಜೈನ್ ನೇಮಕ * ವಿಶೇಷ ಪೂಜೆ-ಅಭಿಷೇಕ *

ಪ್ರೊ. ಕೆ.ಇ.ರಾಧಾಕೃಷ್ಣ ಮತ್ತು ಸತ್ಯಮಂಗಲ ಆರ್ ಮಹಾದೇವ ಅವರಿಗೆ ವರ್ಧಮಾನ ಪ್ರಶಸ್ತಿ ಘೋಷಣೆನ

sathyamangala R. Mahadeva

ವಾರ್ತೆ ಎಕ್ಸ್ ಕ್ಲೂಸಿವ್

ಕಳೆದ ಮೂವತ್ತಾರು ವರುಷಗಳಿಂದ ಪ್ರತಿಷ್ಠಿತ ವರ್ಧಮಾನ ಸಾಹಿತ್ಯ ಪ್ರಶಸ್ತಿಗಳನ್ನು ನೀಡುತ್ತಾ ಬಂದಿರುವ ಮೂಡಬಿದ್ರೆಯ ವರ್ಧಮಾನ ಪ್ರಶಸ್ತಿ ಪೀಠವು 2016ರ ಸಾಲಿನಲ್ಲಿ ವರುಷದ ಶ್ರೇಷ್ಠ ಕನ್ನಡ ಸಾಹಿತ್ಯ ಕೃತಿಗೆ ನೀಡುವ ವರ್ಧಮಾನ ಸಾಹಿತ್ಯ ಪ್ರಶಸ್ತಿಯನ್ನು ಬೆಂಗಳೂರಿನ ಪ್ರೊ. ಕೆ.ಇ.ರಾಧಾಕೃಷ್ಣ ಅವರ ‘ಕಣ್ಣಕಾಡು’ ಎನ್ನುವ ಮಹಾಕಾವ್ಯಕ್ಕೆ ಮತ್ತು ವರುಷದ ಶ್ರೇಷ್ಠ ವರ್ಧಮಾನ ಉದಯೋನ್ಮುಖ ಸಾಹಿತ್ಯ ಕೃತಿಗೆ ನೀಡುವ ಪ್ರಶಸ್ತಿಯನ್ನು ಬೆಂಗಳೂರಿನ ಸತ್ಯಮಂಗಲ ಆರ್. ಮಹಾದೇವ ಅವರ ‘ಹೆಜ್ಜೆ ಮೂಡಿದ ಮೇಲೆ’ ಎನ್ನುವ ಕಾವ್ಯಕೃತಿಗೆ ನೀಡಲು ನಿರ್ಧರಿಸಿದೆ ಎಂದು ಪೀಠದ ಪ್ರಧಾನ ನಿರ್ದೇಶಕ ಡಾ.ನಾ.ಮೊಗಸಾಲೆ  ತಿಳಿಸಿದ್ದಾರೆ.

 

ಪ್ರಶಸ್ತಿ ಪ್ರದಾನ ಸಮಾರಂಭವು ಮೂಡಬಿದ್ರೆಯ ಸಮಾಜಮಂದಿರವು ಆಚರಿಸುತ್ತಾ ಬಂದಿರುವ ದಸರಾ ಸಾಹಿತ್ಯೋತ್ಸವ ಸಂದರ್ಭದಲ್ಲಿ ನಡೆಸಲು ನಿರ್ಧರಿಸಲಾಗಿದೆ. ವರ್ಧಮಾನ ಸಾಹಿತ್ಯ ಪ್ರಶಸ್ತಿಯು ಇಪ್ಪತ್ತೈದು ಸಾವಿರದ ಗೌರವ ಸಂಭಾವನೆ, ತಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದೆ. ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿಯು ಹದಿನೈದು ಸಾವಿರದ ಗೌರವ ಸಂಭಾವನೆ, ತಾಮ್ತಪತ್ರ ಸನ್ಮಾನವನ್ನು ಒಳಗೊಂಡಿದೆ. 2016ರ ಸಾಲಿನ ಪ್ರಶಸ್ತಿಗಳಿಗೆ 2011ರಲ್ಲಿ ಪ್ರಕಟವಾದ ಕೃತಿಗಳನ್ನು ಪರಿಶೀಲಿಸಲಾಗಿದೆ. ಪೀಠದ ಅಧ್ಯಕ್ಷರಾದ ಶ್ರೀ ಎಸ್.ಡಿ.ಸಂಪತ್ ಸಾಮ್ರಾಜ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2016ರ ಸಾಲಿನ ತೀರ್ಪುಗಾರ ಮಂಡಳಿ ಸದಸ್ಯರಾದ ಪ್ರೊ. ಮಲ್ಲೇಪುರಂ ಜಿ.ವೆಂಕಟೇಶ್, ಡಾ.ಬಿ.ಜನಾರ್ದನ ಭಟ್, ಶ್ರೀ ಬೆಳಗೋಡು ರಮೇಶ್ ಭಟ್ ಈ ಮೂವರು ನೀಡಿದ ಅಂಕಗಳ ಆಧಾರದಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದವರು ಹೇಳಿದ್ದಾರೆ.