Headlines

ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ * ಮಾನವೀಯ ಸ್ಪಂದನೆ ಆಗಲೇಬೇಕಾಗಿದೆ… * 33ನೇ ವಾರ ಪೂರೈಸಿದ ಜವನೆರ್ ಬೆದ್ರದ ಸಾಧನೆ * ಆಧುನಿಕತೆಯಿಂದ ಆಶಾದಾಯಕ ಸ್ಥಿತಿ ಬಂದೊದಗಿದೆ: ಹರೀಶ್ ಶೆಣೈ * ಮೂಡಬಿದಿರೆಯಲ್ಲಿ ಸದ್ಭಾವನಾ ಗೋಷ್ಠಿ * ಭಾರತೀಯ ಜನತಾ ಪಾರ್ಟಿಯಿಂದ ಸ್ವಚ್ಛತೆಯ ಮಂತ್ರ * ಬಸದಿಗಳ ಬೀಡಲ್ಲಿ ಬಸದಿಗಳ ಸ್ವಚ್ಛತೆ * ಕಂಬಳಸಮಿತಿ ಸಭೆ * 30ನೇವಾರದ ಕ್ಲೀನ್ ಅಪ್ ಮೂಡಬಿದಿರೆ * ಸ್ವಚ್ಛತಾ ದಿನಾಚರಣರೆ * ಶಾಸಕ ಉಮಾನಾಥ್ ಎ.ಕೋಟ್ಯಾನ್ ವಿಶೇಷ ಸಂದರ್ಶನ * ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಮಲ್ಲಿಕಾ ಎಸ್.ಘಂಟಿ, ಉದ್ಘಾಟಕರಾಗಿ ಡಾ.ಷ. ಶೆಟ್ಟರ್ * ಫಲವಿತರಿಸಿ ಹುಟ್ಟುಹಬ್ಬ ಆಚರಣೆ * ನುಡಿಸಿರಿಯಲ್ಲೊಂದು ಕೃಷಿಸಿರಿ:ಡಾ.ಆಳ್ವ * ಹುಲಿ-ಸ್ವಚ್ಛತೆಯೂ -ಗಣೇಶೋತ್ಸವವೂ-ಪುರಸಭೆಯೂ! * ಗಣೇಶ ದರ್ಶನ… * ಮೂಡಬಿದಿರೆಯಲ್ಲಿ ಗಣೇಶೋತ್ಸವದ ಗೌಜಿ ಶುರು… *

ಮೂಡಬಿದಿರೆಯಲ್ಲಿ ಸದ್ಭಾವನಾ ಗೋಷ್ಠಿ

#rss#moodbidri

ನಮ್ಮ ಪ್ರತಿನಿಧಿ ವರದಿ
ಮೂಡಬಿದಿರೆ: ಜೀವನ ಶಿಕ್ಷಣ ಕುಟುಂಬ ವ್ಯವಸ್ಥೆಯಿಂದ ಪ್ರಾಪ್ತವಾಗುತ್ತದೆ. ಕುಟುಂಬದಿಂದ ಪ್ರಾಥಮಿಕ ಶಿಕ್ಷಣ ಲಭ್ಯವಾಗುತ್ತದೆ. ಸಂಸ್ಕಾರ,ಸಂಸ್ಕೃತಿಗಳ ಅರಿವು ಈ ವ್ಯವಸ್ಥೆಯಿಂದ ಪ್ರಾಪ್ತವಾಗುವುದು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಗಳೂರು ವಿಭಾಗ ಕುಟುಂಬ ಪ್ರಬೋಧನಾ ಸಂಯೋಜಕ ಗಜಾನನ ಪೈ ಅಭಿಪ್ರಾಯಿಸಿದರು. ಮೂಡಬಿದಿರೆಯ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆಶ್ರಯದಲ್ಲಿ ನಾರಾಯಣ ಗುರು ಸಭಾಭವನದಲ್ಲಿ ಭಾನುವಾರ ನಡೆದ ಸದ್ಭಾವನಾ ಗೋಷ್ಠಿಯಲ್ಲಿ `ಕುಟುಂಬ ಮಿಲನ್’ ಅವರು ಮಾತನಾಡಿದರು. ಕುಟುಂಬ ವ್ಯವಸ್ಥೆಯಿಂದ ವಿಶ್ವ ಕುಟುಂಬದ ಕಡೆಗೆ ಸಾಗುವುದೇ ನಿಜವಾದ ಸಾಮಾಜಿಕ ಸದ್ಭಾವನೆಯಾಗಿದೆ ಎಂದವರು ಅಭಿಪ್ರಾಯಿಸಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ತಾಲೂಕು ಸಂಘಚಾಲಕ ಪ್ರೊ.ಎಂ.ವಾಸುದೇವ ಭಟ್ ಉಪಸ್ಥಿತರಿದ್ದರು. ರೋಹನ್ ಕಾರ್ಯಕ್ರಮ ನಿರ್ವಹಿಸಿದರು.