Headlines

ಇಳೆಯು ಕಾದಿದೆ ಮಳೆಗಾಗಿ… * ಒತ್ತಡ ನಿರ್ವಹಣೆಗೆ ಆದ್ಯತೆ ಅವಶ್ಯ * ಬೆಳದಿಂಗಳ ಸಮ್ಮೇಳನಾಧ್ಯಕ್ಷತೆಗೆ ಬನ್ನಂಜೆ ಆಯ್ಕೆ * ಕಥೋಲಿಕ್ ಸಮಾಜೋತ್ಸವ * ಅಶ್ವತ್ಥಪುರದಲ್ಲಿ ಡಾ.ಸುಧೀರ್ ಹೆಗ್ಡೆ ನೇತೃತ್ವದಲ್ಲಿ ನೇತ್ರ ಚಿಕಿತ್ಸೆ ಶಿಬಿರ * ರೋಟರಿಯಿಂದ ಗಣರಾಜ್ಯೋತ್ಸವ ಆಚರಣೆ * ರಾಷ್ಟ್ರೀಯ ಐಕ್ಯತೆಗೆ ಯುವಪಡೆ ಸಿದ್ಧವಾಗಲಿ: ವಿನಯ ಹೆಗ್ಡೆ * ಮಹಾಮಜ್ಜನಕ್ಕೆ ಸಿದ್ದತೆ ಪೂರ್ಣ * ಶ್ರೀಬಾಹುಬಲಿ ಅಹಿಂಸಾದಿಗ್ವಿಜಯಂ ಲೋಕಾರ್ಪಣೆ * ಲೋಕಾಯುಕ್ತ ಪ್ರವಾಸ * ರೋಟರಿಯಿಂದ ಸಾಧಕರಿಗೆ ಸನ್ಮಾನ * ಸ್ವರಾಜ್ಯ ಮೈದಾನದ ಮೇಲೆ ತೂಗುಗತ್ತಿ…! * ಡಾ.ಸುಧೀರ್ ಹೆಗ್ಡೆ ನೇತೃತ್ವದಲ್ಲಿಕಣ್ಣಿನತಪಾಸಣಾ ಶಿಬಿರ * ಯುವಶಕ್ತಿಗೆ ಪರಿಸರಪ್ರಜ್ಞೆಯ ಅರಿವು ಮೂಡಿಸಿದ ಮಹಾಕಾರ್ಯ * ಮೂಡಬಿದಿರೆ ಶಿಕ್ಷಣ ಪ್ರೇಮಿಗಳ ನಾಡು: ಅಭಯಚಂದ್ರ ಜೈನ್ * 50ನೇ ವೈದ್ಯಕೀಯ ತಪಾಸಣಾ ಶಿಬಿರ * ಜ.21-25: ಮೂಡಬಿದಿರೆಯಲ್ಲಿ ರಾಷ್ಟ್ರೀಯ ವೈಯ್ಟ್ ಲಿಫ್ಟಿಂಗ್ * ರಾಜ್ಯಮಟ್ಟದ ಟಿ-20 ಕ್ರಿಕೆಟ್ ಟೂರ್ನಿ: ಆಳ್ವಾಸ್‍ಗೆ ಪ್ರಶಸ್ತಿ * ಕವಿಕುಲಗುರು ಕುಮಾರವ್ಯಾಸ * ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಒಡ್ಡು ನಿರ್ಮಾಣ *

ಮೂಡಬಿದಿರೆಯಲ್ಲಿ ಸ್ವಚ್ಛತಾ ಮಾಹಿತಿ – ಶಿಕ್ಷಣ-ಜಾಗೃತಿ ಅಭಿಯಾನ

#rotary#muncipality#press#vaarte

ನಮ್ಮ ಪ್ರತಿನಿಧಿ ವರದಿ
ವಿದ್ಯಾರ್ಥಿ ದೆಸೆಯಲ್ಲಿಯೇ ನಮ್ಮ ಮನೆ ಪರಿಸರದ ಸ್ವಚ್ಛತೆಯ ಬಗ್ಗೆ ವಿದ್ಯಾರ್ಥಿಗಳು ಸಂಪೂರ್ಣ ಅರಿವು ಪಡೆಯಬೇಕು ಮತ್ತು ಜೀವನದಲ್ಲಿ ಅಳವಡಿಸಿ ಸ್ವಚ್ಛ ಪರಿಸರ ನಿರ್ಮಾಣ ಕಾರ್ಯಕ್ಕೆ ಕೈಜೋಡಿಸಬೇಕೆಂದು ಪುರಸಭಾ ಹಿರಿಯ ಸದಸ್ಯ ಪಿ.ಕೆ.ಥೋಮಸ್ ಕರೆನೀಡಿದರು. ಮೂಡಬಿದಿರೆಯ ಡಿ.ಜೆ.ಶಾಲೆಯ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ ಸ್ವಚ್ಛತಾ ಮಾಹಿತಿ-ಶಿಕ್ಷಣ-ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾಹಿತಿ ನೀಡಿದರು.
ತ್ಯಾಜ್ಯ ವಿಲೇವಾರಿಯ ಕುರಿತಾಗಿ ಪ್ರತಿಯೊಬ್ಬರೂ ಜಾಗೃತರಾಗಬೇಕಾಗಿದೆ. ತಮ್ಮ ತಮ್ಮ ಮನೆ ಮನೆಗಳಲ್ಲಿ ತ್ಯಾಜ್ಯ ವಿಂಗಡಣೆ ಮಾಡಿ ವಿಲೇವಾರಿ ಮಾಡುವ ಕುರಿತು ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದರು. ಮೂಡಬಿದಿರೆ ಪುರಸಭೆಯು ಸ್ವಚ್ಛತೆಯ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿದೆ ಎಂದವರು ಹೇಳಿದರು.
ಪುರಸಭಾ ಸದಸ್ಯ ರತ್ನಾಕರ ದೇವಾಡಿಗ, ಪತ್ರಕರ್ತ ಹರೀಶ್ ಕೆ.ಆದೂರು, ಕೃಷ್ಣ ಕುಮಾರ್ ವೇದಿಕೆಯಲ್ಲಿದ್ದರು. ಶಾಲಾ ಮುಖ್ಯೋಪಾಧ್ಯಾಯ ವೈ ಶಶಿಕಾಂತ್ ಅಧ್ಯಕ್ಷತೆ ವಹಿಸಿದ್ದರು. ದಿವ್ಯ ಕಾರ್ಯಕ್ರಮ ನಿರ್ವಹಿಸಿದರು. ಹರ್ಷಿತ ವಂದಿಸಿದರು. ಮೂಡಬಿದಿರೆ ಪುರಸಭೆ, ರೋಟರಿಕ್ಲಬ್ ಮೂಡಬಿದಿರೆ, ರೋಟರಿಕ್ಲಬ್ ಮೂಡಬಿದಿರೆ ಟೆಂಪಲ್ ಟೌನ್, ಪ್ರೆಸ್ ಕ್ಲಬ್, ಕಾರ್ಯನಿರತ ಪತ್ರಕರ್ತರು , ಸಮಾಜಕಾರ್ಯ ಸ್ನಾತಕೋತ್ತರ ಪದವಿ ವಿಭಾಗ ಆಳ್ವಾಸ್ ಕಾಲೇಜು ಜಂಟಿಯಾಗಿ ಈ ಕಾರ್ಯಕ್ರಮ ಆಯೋಜಿಸಿತ್ತು.