Headlines

ಕಂಬಳಸಮಿತಿ ಸಭೆ * 30ನೇವಾರದ ಕ್ಲೀನ್ ಅಪ್ ಮೂಡಬಿದಿರೆ * ಸ್ವಚ್ಛತಾ ದಿನಾಚರಣರೆ * ಶಾಸಕ ಉಮಾನಾಥ್ ಎ.ಕೋಟ್ಯಾನ್ ವಿಶೇಷ ಸಂದರ್ಶನ * ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಮಲ್ಲಿಕಾ ಎಸ್.ಘಂಟಿ, ಉದ್ಘಾಟಕರಾಗಿ ಡಾ.ಷ. ಶೆಟ್ಟರ್ * ಫಲವಿತರಿಸಿ ಹುಟ್ಟುಹಬ್ಬ ಆಚರಣೆ * ನುಡಿಸಿರಿಯಲ್ಲೊಂದು ಕೃಷಿಸಿರಿ:ಡಾ.ಆಳ್ವ * ಹುಲಿ-ಸ್ವಚ್ಛತೆಯೂ -ಗಣೇಶೋತ್ಸವವೂ-ಪುರಸಭೆಯೂ! * ಗಣೇಶ ದರ್ಶನ… * ಮೂಡಬಿದಿರೆಯಲ್ಲಿ ಗಣೇಶೋತ್ಸವದ ಗೌಜಿ ಶುರು… * 28ನೇ ವಾರದ ಸ್ವಚ್ಛತಾ ಅಭಿಯಾನ * ಈ ಕರ್ಮಕಾಂಡಕ್ಕೆ ಯಾರು ಬಲಿ…? * `ಗುಣಮಟ್ಟದ ಶಿಕ್ಷಣ-ಸೂಕ್ತ ಉದ್ಯೋಗಕ್ಕೆ ಒತ್ತು’ * 27ನೇ ವಾರದ ಕ್ಲೀನ್ ಅಪ್ ಮೂಡಬಿದಿರೆ ಸಂಪನ್ನ * ನಮ್ಮ ಹೆಮ್ಮಕ್ಕಳು ಅದೆಷ್ಟು ಸುರಕ್ಷಿತ…? * ಮನಮೋಹಕ ನೃತ್ಯ ಸಿಂಚನ * ಸ್ವಚ್ಛ ಸರ್ವೇಕ್ಷಣ ಗ್ರಾಮೀಣ 2018 * ಆಧುನಿಕತೆಯೇ ಮುಳುವಾಯಿತೇ…? * ನಾಟ್ಯ ಮಯೂರಿ… * ನವೆಂಬರ್ 16-18: ಆಳ್ವಾಸ್ ನುಡಿಸಿರಿ *

ಮೂಡಬಿದಿರೆ ಶಿಕ್ಷಣ ಪ್ರೇಮಿಗಳ ನಾಡು: ಅಭಯಚಂದ್ರ ಜೈನ್

#mahaveer#college#moodbidri

ಮೂಡಬಿದಿರೆ: ಮೂಡಬಿದಿರೆ ಶಿಕ್ಷಣ ಪ್ರೇಮಿಗಳ ನಾಡು. ಮೂಡಬಿದಿರೆಯ ಇತಿಹಾಸವನ್ನು ಬದಲಿಸಿದ ಕೀತರ್ಿ ಮಹಾವೀರ ಕಾಲೇಜಿನದ್ದಾಗಿದೆ ಎಂದು ಶಾಸಕ ಕೆ.ಅಭಯಚಂದ್ರ ಜೈನ್ ಹೇಳಿದರು. ಶುಕ್ರವಾರ ಕಾಲೇಜು ಆವಣರದಲ್ಲಿ ನಡೆದ ಸಂಸ್ಥಾಪಕರ ದಿನ ಹಾಗೂ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಿಕ್ಷಣ ಇಂದು ವ್ಯಾಪಾರೀಕರಣವಾಗುತ್ತಿದೆ ಎಂದವರು ವಿಶಾಧಿಸಿದರು. ಮೂಡಬಿದಿರೆಯಲ್ಲಿ ಪದವಿ ಶಿಕ್ಷಣ ಮರೀಚಿಕೆ ಎಂಬ ಸಂದರ್ಭದಲ್ಲಿ ಮಹಾವೀರ ಕಾಲೇಜು ಜನ್ಮತಾಳಿತು ಎಂದವರು ನೆನಪಿಸಿದರು.
ಪ್ರೊ.ಪಿ.ದಾಯನಂದ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು. ಕಾಲೇಜು ಪ್ರಾಂಶುಪಾಲ ಪ್ರೊ.ಎಚ್.ಚಂದ್ರಶೇಖರ್ ಧೀಕ್ಷಿತ್, ಮಹಾವೀರ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ರಮೇಶ್ ಭಟ್, ಅಬ್ದುಲ್ ರಹಿಮಾನ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಹರೀಶ್, ವಿದ್ಯಾರ್ಥಿ ನಾಯಕ ಅಶ್ವಥ್ ಉಪಸ್ಥಿತರಿದ್ದರು.
ಡಾ.ಅಝಾದ್ ಅಹ್ಮದ್ ಸ್ಥಾಪಕ ದಿನದ ಸಂದೇಶ ನೀಡಿದರು. ಪಿ.ಎಚ್.ಡಿ. ಪದವಿ ಪಡೆದ ಡಾ.ರಾಧಾಕೃಷ್ಣ ಶೆಟ್ಟಿ ಹಾಗೂ ಬಿ.ಡಿ.ಸುರೇಶ್ ಅವರನ್ನು ಸನ್ಮಾನಿಸಲಾಯಿತು.
ಅಕ್ಷತಾ ಮತ್ತು ಅಮೃತಾ ಪ್ರಾರ್ಥನೆ ಹಾಡಿದರು. ಡಾ.ಬಿ.ವಾಮನ ಬಾಳಿಗ ಸ್ವಾಗತಿಸಿದರು. ಶೃತಿ ಪೈ ಕಾರ್ಯಕ್ರಮ ನಿರೂಪಿಸಿದರು. ಅರ್ಚನಾ ಭಟ್ ವಂದಿಸಿದರು.