Headlines

ಆಳ್ವಾಸ್ ವಿದ್ಯಾರ್ಥಿಸಿರಿಯ ಹೈಲೈಟ್ಸ್… * ಬಾಲಪ್ರತಿಭೆ ಪ್ರದರ್ಶನ * ಬಸದಿಗಳ ನಾಡಲ್ಲಿ ಕನ್ನಡದ ಬಾವುಟ… ಹೊತ್ತಿತೋ…ಹೊತ್ತಿತು ಕನ್ನಡದ ದೀಪ… * ನುಡಿಸಿರಿಯ ಸರ್ವಾಧ್ಯಕ್ಷರ ಎಕ್ಸ್ ಕ್ಲೂಸಿವ್ ಸಂದರ್ಶನ * ಹನ್ನೆರಡು ಸಾಧಕರಿಗೆ 2018ರ ಆಳ್ವಾಸ್ ನುಡಿಸಿರಿ ಪುರಸ್ಕಾರ * ನುಡಿಸಿರಿಯ ಅಂಗಳದಲ್ಲಿ ಅಚ್ಚರಿಯ ಮೇಲೊಂದಚ್ಚರಿ! * ನುಡಿಸಿರಿಯ ಅಂಗಳದಲ್ಲೊಂದು ಸುದ್ದಿಮನೆ! * ಆಳ್ವಾಸ್ ವಿದ್ಯಾರ್ಥಿಸಿರಿ 2018 ಆರಂಭ * ಕಣ್ಣುತೆರೆಸಿದ ಜವನೆರ್ ಬೆದ್ರ ಸಂಘಟನೆ * ಯೋಧರ ಮನೆಯಲ್ಲಿ ಬೆಳಗಿದ ದೀಪ! * ಯಶಸ್ವೀ 36ನೇವಾರ ಪೂರೈಸಿದ ಕ್ಲೀನ್ ಅಪ್ ಮೂಡಬಿದಿರೆ * ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ * ಅಳಿಯೂರಿನಲ್ಲಿ ಮೇಳೈಸಲಿದೆ ಕ್ರೀಡಾಹಬ್ಬ.! * ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯ್ತು ಹಳ್ಳಿ ಹುಡುಗರ ಅನ್ವೇಷಣೆ! * ಶಿರ್ಲಾಲು: ಹೊಸ ಶಾಸನ ಪತ್ತೆ * ಸಾವಿರ ಕಂಬದ ಬಸದಿಯ ಸ್ವಚ್ಛತೆ * ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ *

ಮ್ಯಾಂಗೋ ಪಲಾವ್

vaarte dish mango palav

ವಾರ್ತೆ ರೆಸಿಪಿ

ಬೇಕಾಗುವ ಸಾಮಾಗ್ರಿಗಳು
ಬಾಸುಮತಿ ಅಕ್ಕಿ 2 ಕಪ್, ಹಸಿ ಮಾವಿನಕಾಯಿ1 (ಸಿಪ್ಪೆ ಸುಲಿದು ಚಿಕ್ಕದಾಗಿ ಕತ್ತರಿಸಿ), ಸಾಸಿವೆ ಅರ್ಧ ಚಮಚ, ಹಸಿಮೆಣಸಿನಕಾಯಿ 2, ಚಕ್ಕೆ (ಚಿಕ್ಕ ಪೀಸ್), ಏಲಕ್ಕಿ 2-3, ಲವಂಗ 4, ಕರಿಮೆಣಸು 5-6, ಶುಂಠಿ (ಸ್ವಲ್ಪ), ತುಪ್ಪ 1 ಚಮಚ, ಅರಿಶಿಣ ಪುಡಿ ಅರ್ಧ ಚಮಚ, ಜೀರಿಗೆ 1 ಚಮಚ, ರುಚಿಗೆ ತಕ್ಕ ಉಪ್ಪು, ಕೊತ್ತಂಬರಿ ಸೊಪ್ಪು( ಚಿಕ್ಕದಾಗಿ ಕತ್ತರಿಸಿ).

 

 

ತಯಾರಿಸುವ ವಿಧಾನ:

ಬಾಣಲಿಯಲ್ಲಿ ತುಪ್ಪವನ್ನು ಹಾಕಿ ಬಿಸಿ ಮಾಡಿ, ನಂತರ ಸಾಸಿವೆ ಹಾಕಿ. ಸಾಸಿವೆ ಚಟಾಪಟಾ ಶಬ್ದ ಮಾಡುವಾಗ ಹಸಿ ಮೆಣಸಿನಕಾಯಿ, ಚಕ್ಕೆ, ಲವಂಗ, ಏಲಕ್ಕಿ, ಕರಿ ಮೆಣಸಿನ್ನು ಪುಡಿ ಮಾಡಿ ಹಾಕಿ. ನಂತರ ಶುಂಠಿಯನ್ನು ಜಜ್ಜಿ ಹಾಕಿ. ಉರಿಯನ್ನು ಕಮ್ಮಿ ಮಾಡಿ 1 ನಿಮಿಷ ಹುರಿಯಿರಿ. ನಂತರ ಹಸಿ ಮಾವಿನ ಕಾಯಿಯನ್ನು ಸೇರಿಸಿ. ಈಗ ಅರಿಶಿಣ ಪುಡಿ ಹಾಗೂ ಜೀರಿಗೆ ಪುಡಿ ಹಾಕಿ, ನಂತರ ಬಾಸುಮತಿ ಅಕ್ಕಿ ಹಾಕಿ, ಅಕ್ಕಿಯ ಎರಡು ಪಟ್ಟು ನೀರು ಹಾಕಿ, ರುಚಿಗೆ ತಕ್ಕ ಉಪ್ಪು ಸೇರಿಸಿ 2 ವಿಶಲ್ ಬರುವವರೆಗೆ ಬೇಯಿಸಿ. ನಂತರ ಇದನ್ನು ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ಮ್ಯಾಂಗೋ ಪಲಾವ್ ರೆಡಿ.