Headlines

ಆಳ್ವಾಸ್ ವಿದ್ಯಾರ್ಥಿಸಿರಿಯ ಹೈಲೈಟ್ಸ್… * ಬಾಲಪ್ರತಿಭೆ ಪ್ರದರ್ಶನ * ಬಸದಿಗಳ ನಾಡಲ್ಲಿ ಕನ್ನಡದ ಬಾವುಟ… ಹೊತ್ತಿತೋ…ಹೊತ್ತಿತು ಕನ್ನಡದ ದೀಪ… * ನುಡಿಸಿರಿಯ ಸರ್ವಾಧ್ಯಕ್ಷರ ಎಕ್ಸ್ ಕ್ಲೂಸಿವ್ ಸಂದರ್ಶನ * ಹನ್ನೆರಡು ಸಾಧಕರಿಗೆ 2018ರ ಆಳ್ವಾಸ್ ನುಡಿಸಿರಿ ಪುರಸ್ಕಾರ * ನುಡಿಸಿರಿಯ ಅಂಗಳದಲ್ಲಿ ಅಚ್ಚರಿಯ ಮೇಲೊಂದಚ್ಚರಿ! * ನುಡಿಸಿರಿಯ ಅಂಗಳದಲ್ಲೊಂದು ಸುದ್ದಿಮನೆ! * ಆಳ್ವಾಸ್ ವಿದ್ಯಾರ್ಥಿಸಿರಿ 2018 ಆರಂಭ * ಕಣ್ಣುತೆರೆಸಿದ ಜವನೆರ್ ಬೆದ್ರ ಸಂಘಟನೆ * ಯೋಧರ ಮನೆಯಲ್ಲಿ ಬೆಳಗಿದ ದೀಪ! * ಯಶಸ್ವೀ 36ನೇವಾರ ಪೂರೈಸಿದ ಕ್ಲೀನ್ ಅಪ್ ಮೂಡಬಿದಿರೆ * ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ * ಅಳಿಯೂರಿನಲ್ಲಿ ಮೇಳೈಸಲಿದೆ ಕ್ರೀಡಾಹಬ್ಬ.! * ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯ್ತು ಹಳ್ಳಿ ಹುಡುಗರ ಅನ್ವೇಷಣೆ! * ಶಿರ್ಲಾಲು: ಹೊಸ ಶಾಸನ ಪತ್ತೆ * ಸಾವಿರ ಕಂಬದ ಬಸದಿಯ ಸ್ವಚ್ಛತೆ * ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ *

ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ

#aliyur

ಕ್ರೀಡಾ ಪ್ರತಿನಿಧಿ ವರದಿ

ಮೂಡಬಿದಿರೆ: ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟ್ ಪಂದ್ಯಾಟ ಅಳಿಯೂರು ಸರಕಾರಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಶುಕ್ರವಾರ ಆರಂಭಗೊಂಡಿತು.
ಕರ್ನಾಟಕ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಪಂದ್ಯಾಟಕ್ಕೆ ಚಾಲನೆನೀಡಿ ಮಾತನಾಡಿ, ರಾಜ್ಯದಲ್ಲಿರುವ ಸರಕಾರೀ ಶಾಲೆಗಳನ್ನು ಖಾಸಗೀ ಶಾಲೆಗಳಿಗೆ ಸಮಾನವಾದ ರೀತಿಯಲ್ಲಿ ಬೆಳೆಸುವ ಕಾರ್ಯ ಆಗಬೇಕಾಗಿದೆ. ಪರಿಪೂರ್ಣ ಸರಕಾರೀ ಶಾಲೆಗಳ ನಿರ್ಮಾಣ ಆಗಬೇಕಾಗಿದೆ ಎಂದರು.ನಿರಂತರ ಶ್ರಮದಿಂದ ಗುರಿಮುಟ್ಟಲು ಸಾಧ್ಯ ಎಂದು ವಿಶ್ಲೇಷಿಸಿದ ಕೋಟ ಅವರು ಕ್ರೀಡಾ ಕ್ಷೇತ್ರದಲ್ಲಿ ಗೆಲುವು ಪಡೆಯಬೇಕಾದರೆ ನಿರಂತರವಾದ ಶ್ರಮ, ನಿರಂತರ ಉತ್ಸಾಹ, ನಿರಂತರ ಸಾಮಥ್ರ್ಯ, ಮಾತ್ರ ಸಾಧ್ಯ ಎಂದರು.

ಪ್ರಸ್ತಾವನೆ ಸಲ್ಲಿಕೆ: ಅಳಿಯೂರು ಪ್ರೌಢಶಾಲೆಯನ್ನು ಪದವಿಪೂರ್ವ ಕಾಲೇಜಾಗಿ ಮೇಲ್ದರ್ಜೆಗೇರಿಸುವ ವಿಚಾರದಲ್ಲಿ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಭಾಗಕ್ಕೆ ಅತ್ಯವಶ್ಯಕವಾಗಿ ಪದವಿಪೂರ್ವ ಸರಕಾರೀ ಕಾಲೇಜಿನ ಅವಶ್ಯಕತೆಯಿದೆ. ಸರಕಾರಕ್ಕೆ ಒತ್ತಡ ತಂದು ಇದನ್ನು ಸಾಕಾರಗೊಳಿಸುವ ಕಾರ್ಯ ಮಾಡಲಾಗುವುದು ಎಂದು ಅಧ್ಯಕ್ಷತೆ ವಹಿಸಿದ್ದ ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು.

ಪುರುಷರ ವಿಭಾಗದಲ್ಲಿ 40 ಹಾಗೂ ಮಹಿಳೆಯರ ವಿಭಾಗದಲ್ಲಿ 40ಕ್ರೀಡಾಳುಗಳು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಸುಮಾರು 400ಮಂದಿ ಅಧಿಕಾರಿಗಳು ಕ್ರೀಡಾಕೂಟದ ಯಶಸ್ಸಿಗಾಗಿ ಶ್ರಮಿಸಿದ್ದರು.
ಜಿಲ್ಲಾಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ವಾಲ್ಪಾಡಿ ಗ್ರಾ.ಪಂ.ಅಧ್ಯಕ್ಷೆ ವಸಂತಿ, ಜಿ.ಪಂ.ಸದಸ್ಯೆ ಸುಜಾತ ಕೆ.ಪಿ, ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ, ತಾ.ಪಂ.ಸದಸ್ಯೆ ನಾಗವೇಣಿ, ವಿಶ್ವನಾಥ ಶೆಟ್ಟಿ, ರಾಮಕೃಷ್ಣ ಶಿರೂರು, ಅಂತಾರಾಷ್ಟ್ರೀಯ ಕ್ರೀಡಾಪಟು ಬಾಬುಶೆಟ್ಟಿ, ಏಕಲವ್ಯ ಪ್ರಶಸ್ತಿ ಪುರಸ್ಕೃತ ಮಹಾದೇವ, ಕ್ಷೇತ್ರ ಶಿಕ್ಷಣಾಧಿಕಾರಿ ಆಶಾ, ದೈಹಿಕ ಶಿಕ್ಷಕ ಪರಿವೀಕ್ಷಣಾಧಿಕಾರಿ ಶಿವಾನಂದ ಕಾಯ್ಕಿಣಿ, ವಸಂತ ಜೋಗಿ, ಶಾಲಾ ಮುಖ್ಯೋಪಾಧ್ಯಾಯಿನಿ ರೋಸಾ ವಿ.ಜೆ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಬಿ ಅಳಿಯೂರು, ತಾಲೂಕು ದೈ.ಶಿ.ಶಿ.ಸಂಘದ ಅಧ್ಯಕ್ಷ ಪ್ರಶಾಂತ್ ಜೈನ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್, ಸಹಶಿಕ್ಷಕರ ಸಂಘದ ಅಧ್ಯಕ್ಷ ಮಹಾದೇವ, ಸಾ.ಶಿ.ಇಲಾಖೆಯ ಉಪನಿರ್ದೇಶಕ ವೈ ಶಿವರಾಮಯ್ಯ ಉಪಸ್ಥಿತರಿದ್ದರು.