Headlines

ಒತ್ತಡ ನಿರ್ವಹಣೆಗೆ ಆದ್ಯತೆ ಅವಶ್ಯ * ಬೆಳದಿಂಗಳ ಸಮ್ಮೇಳನಾಧ್ಯಕ್ಷತೆಗೆ ಬನ್ನಂಜೆ ಆಯ್ಕೆ * ಕಥೋಲಿಕ್ ಸಮಾಜೋತ್ಸವ * ಅಶ್ವತ್ಥಪುರದಲ್ಲಿ ಡಾ.ಸುಧೀರ್ ಹೆಗ್ಡೆ ನೇತೃತ್ವದಲ್ಲಿ ನೇತ್ರ ಚಿಕಿತ್ಸೆ ಶಿಬಿರ * ರೋಟರಿಯಿಂದ ಗಣರಾಜ್ಯೋತ್ಸವ ಆಚರಣೆ * ರಾಷ್ಟ್ರೀಯ ಐಕ್ಯತೆಗೆ ಯುವಪಡೆ ಸಿದ್ಧವಾಗಲಿ: ವಿನಯ ಹೆಗ್ಡೆ * ಮಹಾಮಜ್ಜನಕ್ಕೆ ಸಿದ್ದತೆ ಪೂರ್ಣ * ಶ್ರೀಬಾಹುಬಲಿ ಅಹಿಂಸಾದಿಗ್ವಿಜಯಂ ಲೋಕಾರ್ಪಣೆ * ಲೋಕಾಯುಕ್ತ ಪ್ರವಾಸ * ರೋಟರಿಯಿಂದ ಸಾಧಕರಿಗೆ ಸನ್ಮಾನ * ಸ್ವರಾಜ್ಯ ಮೈದಾನದ ಮೇಲೆ ತೂಗುಗತ್ತಿ…! * ಡಾ.ಸುಧೀರ್ ಹೆಗ್ಡೆ ನೇತೃತ್ವದಲ್ಲಿಕಣ್ಣಿನತಪಾಸಣಾ ಶಿಬಿರ * ಯುವಶಕ್ತಿಗೆ ಪರಿಸರಪ್ರಜ್ಞೆಯ ಅರಿವು ಮೂಡಿಸಿದ ಮಹಾಕಾರ್ಯ * ಮೂಡಬಿದಿರೆ ಶಿಕ್ಷಣ ಪ್ರೇಮಿಗಳ ನಾಡು: ಅಭಯಚಂದ್ರ ಜೈನ್ * 50ನೇ ವೈದ್ಯಕೀಯ ತಪಾಸಣಾ ಶಿಬಿರ * ಜ.21-25: ಮೂಡಬಿದಿರೆಯಲ್ಲಿ ರಾಷ್ಟ್ರೀಯ ವೈಯ್ಟ್ ಲಿಫ್ಟಿಂಗ್ * ರಾಜ್ಯಮಟ್ಟದ ಟಿ-20 ಕ್ರಿಕೆಟ್ ಟೂರ್ನಿ: ಆಳ್ವಾಸ್‍ಗೆ ಪ್ರಶಸ್ತಿ * ಕವಿಕುಲಗುರು ಕುಮಾರವ್ಯಾಸ * ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಒಡ್ಡು ನಿರ್ಮಾಣ * ಕಣ್ಣಿನ ಉಚಿತ ತಪಾಸಣೆಹಾಗೂ ಚಿಕಿತ್ಸಾ ಶಿಬಿರ *

ರಾಷ್ಟ್ರೀಯ ಐಕ್ಯತೆಗೆ ಯುವಪಡೆ ಸಿದ್ಧವಾಗಲಿ: ವಿನಯ ಹೆಗ್ಡೆ

#republic#day#spl#photos

ಮೂಡಬಿದಿರೆ ಆಳ್ವಾಸ್ನಲ್ಲಿ ಸಂಭ್ರಮದ ಗಣರಾಜ್ಯೋತ್ಸವ
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಪುತ್ತಿಗೆಪದವು ಶ್ರೀಮತಿ ವನಜಾಕ್ಷಿ ಕೆ.ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ 69ನೇ ಸಂಭ್ರಮದ ಗಣರಾಜ್ಯೋತ್ಸವ ಆಚರಿಸಲಾಯಿತು.  ನಿಟ್ಟೆ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎನ್ ವಿನಯ್ ಹೆಗ್ಡೆ ದ್ವಜಾರೋಹಣ ಗೈದು ಗೌರವ ವಂದನೆ ಸ್ವೀಕರಿಸಿ 30ಸಹಸ್ರಕ್ಕೂ ಮಿಕ್ಕಿದ ಯುವ ಸಮೂಹವನ್ನುದ್ದೇಶಿಸಿ ಮಾತನಾಡಿ, ನಮ್ಮ ದೇಶವು ಆರ್ಥಿಕ ಮುನ್ನಡೆ ಸಾಧಿಸಿದೆ. ಆದರೆ ಮೌಲ್ಯಯುತವಾಗಿ ಹಿನ್ನಡೆ ಅನುಭವಿಸುತ್ತಿರುವುದು ದುರಾದೃಷ್ಟಕರ ಎಂದರು. ಶಿಸ್ತು, ರಾಷ್ಟ್ರಭಕ್ತಿ, ರಾಷ್ಟ್ರೀಯ ಐಕ್ಯತೆಗೆ ಯುವಜನರು ಶ್ರಮಿಸಿದರೆ ದೇಶ ಪ್ರಗತಿಯತ್ತ ಸಾಗುವುದರಲ್ಲಿ ಸಂಶಯವಿಲ್ಲ. ರಾಷ್ಟ್ರಕೋಸ್ಕರ ಯುವಜನರ ಸಮರ್ಪಣಾ ಭಾವ ದೇಶವನ್ನು ಮೌಲ್ಯಯುತವಾಗಿ ಮುನ್ನಡೆಸಬಲ್ಲುದು. ಇದಕ್ಕಾಗಿ ಯುವ ಜನತೆ ಸಿದ್ಧರಾಗುವಂತೆ ಕರೆನೀಡಿದರು.

#republic#day#spl#photos1
ಆಳ್ವಾಸ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸಮಾರಂಭದ ಅಧ್ಯಕ್ಷತೆವಹಿಸಿದ್ದರು. ಉಪನ್ಯಾಸಕಿ ದೀಪಾ ಕೊಠಾರಿ ಕಾರ್ಯಕ್ರಮ ನಿರೂಪಿಸಿದರು. ಸೀನಿಯರ್ ಕೆಡೆಟ್ ಚಾರಿತ್ರ್ಯ ಭಂಡಾರಿ ನೇತೃತ್ವದಲ್ಲಿ ಕೊಡಗು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ 1200ಕ್ಕೂ ಅಧಿಕ ಎನ್ಸಿಸಿ ಕೆಡೆಟ್ಗಳು ಆಕರ್ಷಕ ಪಥಸಂಚಲನದಲ್ಲಿ ಭಾಗವಹಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 26 ಸಾವಿರ ವಿದ್ಯಾರ್ಥಿಗಳು, 450 ಮಂದಿ ಮಾಜಿ ಸೈನಿಕರು, ಮೂಡುಬಿದಿರೆ ನಾಗರಿಕರು, ಆಳ್ವಾಸ್ ಸಿಬ್ಬಂದಿಗಳು ಸೇರಿ ಸುಮಾರು 34 ಸಾವಿರ ಮಂದಿ ಭಾಗವಹಿಸಿದರು. ಮೊದಲು ವಂದೇ ಮಾತರಂ, ದ್ವಜಾರೋಹಣ, ರಾಷ್ಟ್ರಗೀತೆ ಹಾಡಲಾಯಿತು. ಕೋಟಿ ಕಂಠೋ ಸೇ…ದೇಶಭಕ್ತಿ ಹಾಡುವಾಗ ವಿದ್ಯಾರ್ಥಿಗಳು ಕೈಯಲ್ಲಿದ್ದ ತ್ರಿವರ್ಣ ದ್ವಜಗಳನ್ನು ಬೀಸುತ್ತಾ ವಿಶೇಷ ಮೆರುಗು ಸೃಷ್ಟಿಸಿದರು.
ಚಿತ್ರ: ಮಾನಸ ಡಿಜಿಟಲ್ಸ್ ಮೂಡಬಿದಿರೆ