Headlines

ಒತ್ತಡ ನಿರ್ವಹಣೆಗೆ ಆದ್ಯತೆ ಅವಶ್ಯ * ಬೆಳದಿಂಗಳ ಸಮ್ಮೇಳನಾಧ್ಯಕ್ಷತೆಗೆ ಬನ್ನಂಜೆ ಆಯ್ಕೆ * ಕಥೋಲಿಕ್ ಸಮಾಜೋತ್ಸವ * ಅಶ್ವತ್ಥಪುರದಲ್ಲಿ ಡಾ.ಸುಧೀರ್ ಹೆಗ್ಡೆ ನೇತೃತ್ವದಲ್ಲಿ ನೇತ್ರ ಚಿಕಿತ್ಸೆ ಶಿಬಿರ * ರೋಟರಿಯಿಂದ ಗಣರಾಜ್ಯೋತ್ಸವ ಆಚರಣೆ * ರಾಷ್ಟ್ರೀಯ ಐಕ್ಯತೆಗೆ ಯುವಪಡೆ ಸಿದ್ಧವಾಗಲಿ: ವಿನಯ ಹೆಗ್ಡೆ * ಮಹಾಮಜ್ಜನಕ್ಕೆ ಸಿದ್ದತೆ ಪೂರ್ಣ * ಶ್ರೀಬಾಹುಬಲಿ ಅಹಿಂಸಾದಿಗ್ವಿಜಯಂ ಲೋಕಾರ್ಪಣೆ * ಲೋಕಾಯುಕ್ತ ಪ್ರವಾಸ * ರೋಟರಿಯಿಂದ ಸಾಧಕರಿಗೆ ಸನ್ಮಾನ * ಸ್ವರಾಜ್ಯ ಮೈದಾನದ ಮೇಲೆ ತೂಗುಗತ್ತಿ…! * ಡಾ.ಸುಧೀರ್ ಹೆಗ್ಡೆ ನೇತೃತ್ವದಲ್ಲಿಕಣ್ಣಿನತಪಾಸಣಾ ಶಿಬಿರ * ಯುವಶಕ್ತಿಗೆ ಪರಿಸರಪ್ರಜ್ಞೆಯ ಅರಿವು ಮೂಡಿಸಿದ ಮಹಾಕಾರ್ಯ * ಮೂಡಬಿದಿರೆ ಶಿಕ್ಷಣ ಪ್ರೇಮಿಗಳ ನಾಡು: ಅಭಯಚಂದ್ರ ಜೈನ್ * 50ನೇ ವೈದ್ಯಕೀಯ ತಪಾಸಣಾ ಶಿಬಿರ * ಜ.21-25: ಮೂಡಬಿದಿರೆಯಲ್ಲಿ ರಾಷ್ಟ್ರೀಯ ವೈಯ್ಟ್ ಲಿಫ್ಟಿಂಗ್ * ರಾಜ್ಯಮಟ್ಟದ ಟಿ-20 ಕ್ರಿಕೆಟ್ ಟೂರ್ನಿ: ಆಳ್ವಾಸ್‍ಗೆ ಪ್ರಶಸ್ತಿ * ಕವಿಕುಲಗುರು ಕುಮಾರವ್ಯಾಸ * ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಒಡ್ಡು ನಿರ್ಮಾಣ * ಕಣ್ಣಿನ ಉಚಿತ ತಪಾಸಣೆಹಾಗೂ ಚಿಕಿತ್ಸಾ ಶಿಬಿರ *

ರೋಟರಿಯಿಂದ ಗಣರಾಜ್ಯೋತ್ಸವ ಆಚರಣೆ

69ನೇ ಗಣರಾಜ್ಯೋತ್ಸವದಲ್ಲಿ ಶಾಸಕ ಕೆ.ಅಭಯಚಂದ್ರ ಜೈನ್ ಗೌರವ ಸ್ವೀಕಾರ ಮಾಡಿದರು. ರೋಟರಿ ಅಧ್ಯಕ್ಷ ಶ್ರೀಕಾಂತ್ ಕಾಮತ್, ಪುರಸಭಾಧ್ಯಕ್ಷ ಹರಿಣಾಕ್ಷಿಸುವರ್ಣ, ಸಹಾಯಕ ಅರಣ್ಯ ಸಂರಕ್ಷಣಾಧಿಖಾರಿ ಹೆಚ್.ಆರ್.ಸುಬ್ರಹ್ಮಣ್ಯ ಜೊತೆಗಿದ್ದರು.

69ನೇ ಗಣರಾಜ್ಯೋತ್ಸವ ಆಚರಣೆ
ಮೂಡಬಿದಿರೆ: ಶಿಕ್ಷಣದಿಂದ ಸುಸಂಸ್ಕೃತ ರಾಷ್ಟ್ರ ನಿರ್ಮಾಣ ಸಾಧ್ಯವಿದೆ. ಉತ್ತಮ ಶಿಕ್ಷಣ ಮನುಷ್ಯರನ್ನು ಉತ್ತಮ ಹಾದಿಗೆ ಕೊಂಡೊಯ್ಯಬಲ್ಲದು ಎಂದು ಶಾಸಕ ಕೆ.ಅಭಯಚಂದ್ರ ಜೈನ್ ಹೇಳಿದರು. ರೋಟರಿ ಕ್ಲಬ್ ಮೂಡಬಿದಿರೆ ಮತ್ತು ಕರ್ನಾಟಕ ಅರಣ್ಯ ಇಲಾಖೆ ಮೂಡಬಿದಿರೆ ಇವುಗಳ ಸಂಯುಕ್ತಾಶ್ರಯದಲ್ಲಿ ಮೂಡಬಿದಿರೆ ಸ್ವರಾಜ್ಯ ಮೈದಾನದಲ್ಲಿ 69ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣಗೈದು ಗೌರವ ಸ್ವೀಕಾರ ಮಾಡಿ ಗಣರಾಜ್ಯೋತ್ಸವ ಸಂದೇಶ ನೀಡಿದರು.
ರೋಟರಿ ಕ್ಲಬ್ ಕಳೆದ 33ವರ್ಷಗಳಿಂದ ಗಣರಾಜ್ಯೋತ್ಸವವನ್ನು ಆಚರಿಸುತ್ತಾ ಬರುತ್ತಿದೆ. ಮೂಡಬಿದಿರೆ ತಾಲೂಕಾಗಿ ಘೋಷಣೆಯಾದ ಬಳಿಕ ಮೊಟ್ಟಮೊದಲ ಗಣರಾಜ್ಯೋತ್ಸವ ಇದಾಗಿದೆ. ಸ್ವರಾಜ್ಯ ಮೈದಾನದಲ್ಲಿ ಈ ಆಚರಣೆ ನಡೆಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದವರು ಅಭಿಪ್ರಾಯಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಅಧ್ಯಕ್ಷ ಶ್ರೀಕಾಂತ್ ಕಾಮತ್ ವಹಿಸಿದ್ದರು. ಪುರಸಭಾಧ್ಯಕ್ಷೆ ಹರಿಣಾಕ್ಷಿ ಎಸ್ ಸುವರ್ಣ, ಮೂಡಬಿದಿರೆ ತಹಶೀಲ್ದಾರ್ ಮಹಮ್ಮದ್ ಇಸಾಕ್, ಮೂಡಬಿದಿರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹೆಚ್.ಆರ್.ಸುಬ್ರಹ್ಮಣ್ಯ, ವಲಯ ಅರಣ್ಯಾಧಿಕಾರಿ ಪ್ರಕಾಶ್ ಪೂಜಾರಿ,ರೋಟರಿ ಕಾರ್ಯದಶರ್ಿ ಮಹಮ್ಮದ್ ಆರೀಫ್ ಅತಿಥಿಗಳಾಗಿದ್ದರು. ಮೂಡಬಿದಿರೆ ವಲಯದ 17ಶಿಕ್ಷಣ ಸಂಸ್ಥೆಗಳ 650ವಿದ್ಯಾಥರ್ಿಗಳು ಪಥಸಂಚಲನದಲ್ಲಿ ಭಾಗವಹಿಸಿದ್ದರು.ರೋಟರಿ ಸದಸ್ಯ ಪುಂಡಿಕಾ ಗಣಪಯ್ಯ ಭಟ್ ಕಾರ್ಯಕ್ರಮ ನಿರ್ವಹಿಸಿದರು.