Headlines

ಒತ್ತಡ ನಿರ್ವಹಣೆಗೆ ಆದ್ಯತೆ ಅವಶ್ಯ * ಬೆಳದಿಂಗಳ ಸಮ್ಮೇಳನಾಧ್ಯಕ್ಷತೆಗೆ ಬನ್ನಂಜೆ ಆಯ್ಕೆ * ಕಥೋಲಿಕ್ ಸಮಾಜೋತ್ಸವ * ಅಶ್ವತ್ಥಪುರದಲ್ಲಿ ಡಾ.ಸುಧೀರ್ ಹೆಗ್ಡೆ ನೇತೃತ್ವದಲ್ಲಿ ನೇತ್ರ ಚಿಕಿತ್ಸೆ ಶಿಬಿರ * ರೋಟರಿಯಿಂದ ಗಣರಾಜ್ಯೋತ್ಸವ ಆಚರಣೆ * ರಾಷ್ಟ್ರೀಯ ಐಕ್ಯತೆಗೆ ಯುವಪಡೆ ಸಿದ್ಧವಾಗಲಿ: ವಿನಯ ಹೆಗ್ಡೆ * ಮಹಾಮಜ್ಜನಕ್ಕೆ ಸಿದ್ದತೆ ಪೂರ್ಣ * ಶ್ರೀಬಾಹುಬಲಿ ಅಹಿಂಸಾದಿಗ್ವಿಜಯಂ ಲೋಕಾರ್ಪಣೆ * ಲೋಕಾಯುಕ್ತ ಪ್ರವಾಸ * ರೋಟರಿಯಿಂದ ಸಾಧಕರಿಗೆ ಸನ್ಮಾನ * ಸ್ವರಾಜ್ಯ ಮೈದಾನದ ಮೇಲೆ ತೂಗುಗತ್ತಿ…! * ಡಾ.ಸುಧೀರ್ ಹೆಗ್ಡೆ ನೇತೃತ್ವದಲ್ಲಿಕಣ್ಣಿನತಪಾಸಣಾ ಶಿಬಿರ * ಯುವಶಕ್ತಿಗೆ ಪರಿಸರಪ್ರಜ್ಞೆಯ ಅರಿವು ಮೂಡಿಸಿದ ಮಹಾಕಾರ್ಯ * ಮೂಡಬಿದಿರೆ ಶಿಕ್ಷಣ ಪ್ರೇಮಿಗಳ ನಾಡು: ಅಭಯಚಂದ್ರ ಜೈನ್ * 50ನೇ ವೈದ್ಯಕೀಯ ತಪಾಸಣಾ ಶಿಬಿರ * ಜ.21-25: ಮೂಡಬಿದಿರೆಯಲ್ಲಿ ರಾಷ್ಟ್ರೀಯ ವೈಯ್ಟ್ ಲಿಫ್ಟಿಂಗ್ * ರಾಜ್ಯಮಟ್ಟದ ಟಿ-20 ಕ್ರಿಕೆಟ್ ಟೂರ್ನಿ: ಆಳ್ವಾಸ್‍ಗೆ ಪ್ರಶಸ್ತಿ * ಕವಿಕುಲಗುರು ಕುಮಾರವ್ಯಾಸ * ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಒಡ್ಡು ನಿರ್ಮಾಣ * ಕಣ್ಣಿನ ಉಚಿತ ತಪಾಸಣೆಹಾಗೂ ಚಿಕಿತ್ಸಾ ಶಿಬಿರ *

ಲೋಕಾಯುಕ್ತ ಪ್ರವಾಸ

lokayukta

ಮಂಗಳೂರು ಪ್ರತಿನಿಧಿ ವರದಿ

ಗೌರವಾನ್ವಿತ ನ್ಯಾಯಮೂರ್ತಿ ಸುಭಾಷ್. ಬಿ. ಅಡಿ .ಉಪಲೋಕಾಯುಕ್ತರು ,ಕರ್ನಾಟಕ ರಾಜ್ಯ ಇವರು ದಿನಾಂಕ 27.01.2018 ಪುತ್ತೂರು ಪುರಭವನದಲ್ಲಿ ,ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿ ತಾಲೂಕಿಗೆ, ಸಂಬಂಧಿಸಿದಂತೆ ಹಾಗೂ 28.01.2018 ಮಂಗಳೂರು ಜಿಲ್ಲಾ ಪಂಚಾಯತ್ ಕಾರ್ಯಾಲಯದ ನೇತ್ರಾವತಿ ಸಭಾಂಗಣದಲ್ಲಿ, ಮಂಗಳೂರು ಹಾಗೂ ಬಂಟ್ವಾಳ ತಾಲೂಕಿಗೆ ಸಂಬಂಧಿಸಿದಂತೆ, ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆಯನ್ನು ಹಮ್ಮಿಕೊಂಡಿದ್ದಾರೆ.

ಜಿಲ್ಲೆಯಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿಗಳಿಂದ ತಮಗೆ ಆಗಬೇಕಾದ ಕೆಲಸದಲ್ಲಿ ವಿಳಂಬ ವೇನಾದರೂ ಆಗಿದ್ದರೆ, ಅಥವಾ ಅಧಿಕಾರಿಗಳು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಸರಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ,ಸಂಬಂಧಪಟ್ಟ ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಮೇಲ್ಕಂಡ ಸ್ಥಳದಲ್ಲಿ ಮೇಲ್ಕಂಡ ದಿನಾಂಕದಂದು ಸಲ್ಲಿಸಬಹುದಾಗಿದೆ.
ಈಗಾಗಲೇ ದೂರು ಸಲ್ಲಿಸಿರುವ   ವಿಚಾರಣೆ ಹಂತದಲ್ಲಿರುವಪುತ್ತೂರು, ಸುಳ್ಯ ,ಬೆಳ್ತಂಗಡಿ ಅರ್ಜಿದಾರರು  ದಿನಾಂಕ 27ರ0ದುಪುತ್ತೂರು ಪುರಭವನದಲ್ಲಿ ,ಮಂಗಳೂರು ಮತ್ತು ಬಂಟ್ವಾಳ ತಾಲೂಕಿನವರು ದಿನಾಂಕ 28ರ0ದುಮಂಗಳೂರು ಜಿಲ್ಲಾ ಪಂಚಾಯಿತಿ ಕಾರ್ಯಾಲಯದ ನೇತ್ರಾವತಿ ಸಭಾಂಗಣದಲ್ಲಿ, ಬೆಳಗ್ಗೆ ಹತ್ತು ಗಂಟೆಗೆ ಹಾಜರಿರುವಂತೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ .ಹೆಚ್ಚಿನ ಮಾಹಿತಿಗಾಗಿ ಉರ್ವ ಸ್ಟೋರ್ ನಲ್ಲಿರುವ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಕಚೇರಿಯನ್ನು ಸಂಪರ್ಕಿಸುವಂತೆ ಈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.