Headlines

ಹಂತಕರನ್ನು ಕೂಡಲೇ ಬಂಧಿಸಿ: ಸಿ.ಎಂ * ಎದೆಭಾಗಕ್ಕೆ 2;ಹಣೆಗೆ1ಗುಂಡು * ಪರ್ತಕರ್ತೆ ಗೌರಿ ಲಂಕೇಶ್ ಹತ್ಯೆ * ಎಂಟು ಮಂದಿ ಶಿಕ್ಷಕರಿಗೆ ಸನ್ಮಾನ * ಸಾಧಕರಿಗೆ ಸನ್ಮಾನ * ಶಾಲೆ ಶಾಲೆಯಲ್ಲಿ ಗೆಜ್ಜೆಯ ನಿನಾದ! * ಋಣ ತೀರಿಸುವ ಕಾರ್ಯವಾಗಲಿ: ದೇವಿಪ್ರಸಾದ್ ಶೆಟ್ಟಿ * ಸಾರ್ವಜನಿಕ ಗಣೇಶೋತ್ಸವ * ಶ್ರೀ ಸೂರ್ಯನಾರಾಯಣ ಕ್ಷೇತ್ರದಲ್ಲಿ ಗಣೇಶೋತ್ಸವ * ಗ್ರಾಮ-ಪಟ್ಟಣಕ್ಕೆ ಒಂದೇ ಗಣೇಶನಿರಲಿ-ಟಿ.ಆರ್.ಸುರೇಶ್ * 54ನೇ ವರ್ಷದ ಮೂಡಬಿದಿರೆಯ ಗಣೇಶ * ಪೆರಿಂಜೆಯಲ್ಲಿ ಸಂಭ್ರಮದ ಗಣೇಶೋತ್ಸವ * ಕಲ್ಲಬೆಟ್ಟಿನಲ್ಲಿ ಪೂಜಿಸಿದ ವಿಘ್ನವಿನಾಯಕ * ಮೂಡುಬಿದಿರೆಯಲ್ಲಿ ರಕ್ಷಾಂಬಂಧನ * ಪ್ರೊ. ಕೆ.ಇ.ರಾಧಾಕೃಷ್ಣ ಮತ್ತು ಸತ್ಯಮಂಗಲ ಆರ್ ಮಹಾದೇವ ಅವರಿಗೆ ವರ್ಧಮಾನ ಪ್ರಶಸ್ತಿ ಘೋಷಣೆನ * ಇದು ಅತ್ಯಾಧುನಿಕ `ಪಾರಂಪರಿಕ’ಮಾದರಿಯ ಶ್ಯಾವಿಗೆ ಮಣೆ! * ವಿಂಶತಿ ಯಕ್ಷಕಲೋತ್ಸವಕ್ಕೆ ತೆರೆ * ಸಿ.ಐ.ಟಿ.ಯು: 9ನೇ ಬೀಡಿ ಕಾರ್ಮಿಕರ ರಾಜ್ಯ ಸಮ್ಮೇಳನ * ಪದ್ಮಪ್ರಸಾದ್ ಜೈನ್ ನೇಮಕ * ವಿಶೇಷ ಪೂಜೆ-ಅಭಿಷೇಕ *

ವಿಂಶತಿ ಯಕ್ಷಕಲೋತ್ಸವಕ್ಕೆ ತೆರೆ

#nalin#kumar#kateel

ನಮ್ಮ ಪ್ರತಿನಿಧಿ ವರದಿ
ಶ್ರೀಯಕ್ಷದೇವ ಮಿತ್ರಕಲಾ ಮಂಡಳಿ(ರಿ.) ಬೆಳುವಾಯಿ ಇದರ ಆಶ್ರಯದಲ್ಲಿ ಮೂಡಬಿದಿರೆಯ ಪದ್ಮಾವತೀ ಕಲಾ ಮಂದಿರದ ಕಲಾವಿದ ದಿ. ಸುಬ್ರಾಯ ಭಟ್ ವೇದಿಕೆಯಲ್ಲಿ ಮೂರು ದಿನಗಳ ಕಾಲ ನಡೆದ ವಿಂಶತಿ ಯಕ್ಷಕಲೋತ್ಸವಕ್ಕೆ ರವಿವಾರ ಅಂತಿಮ ತೆರೆಬಿದ್ದಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು ವಹಿಸಿ ಮಾತನಾಡಿ ಗ್ರಾಮೀಣ ಭಾಗಕ್ಕಿಂತಲೂ ನಗರಕೇಂದ್ರಿತವಾಗುತ್ತಿರುವ ಯಕ್ಷಗಾನ ನಗರ ಪ್ರದೇಶದಲ್ಲಿ ವಿಜೃಂಭಣೆಯೊಂದಿಗೆ ಹೆಚ್ಚು ಜನಪ್ರಿಯತೆ ಪಡೆಯುತ್ತಿದೆ. ಏತನ್ಮಧ್ಯೆ ತನ್ನ ಮೂಲ ತತ್ವ ಸತ್ವವನ್ನು ಉಳಿಸಿಕೊಂಡು ಚೌಕಟ್ಟು ಉಳಿಸಿಕೊಂಡು ಬೆಳೆಯುವತ್ತ ಕಲಾವಿದರು ಚಿಂತಿಸಬೇಕಾಗಿದೆ ಎಂದರು. ಪರಂಪರೆಯನ್ನು ಉಳಿಸುವ ಮಹತ್ವದ ಜವಾಬ್ದಾರಿ ಕಲಾವಿರದ್ದು, ಕಲಾಪೋಷಕರದ್ದಾಗಿದೆ ಎಂದವರು ಅಭಿಪ್ರಾಯಿಸಿದರು. ಯಕ್ಷಗಾನವೆಂಬುದು ಸಂಸ್ಕೃತಿಯ ಉದ್ದೀಪನಕ್ಕೆ ಮಹತ್ವದ ಕೊಡುಗೆಯನ್ನು ನೀಡಿದೆ. ಗ್ರಾಮೀಣ ಭಾಗದಲ್ಲಿರುವ ಶ್ರೀಯಕ್ಷದೇವ ಮಿತ್ರಕಲಾ ಮಂಡಳಿಯ ಸಾಧನೆ ಪ್ರತಿಯೊಬ್ಬ ಕಲಾವಿದರಿಗೂ,ಕಲಾಭಿಮಾನಿಗಳೂ ಪ್ರೇರಣೆಯಾಗಿದೆ ಎಂದರು. ಜೈನಕಾಶಿ,ವಿದ್ಯಾಕಾಶಿಯಾಗಿ ಬೆಳೆದು ಬೆಳಗುತ್ತಿರುವ ಮೂಡಬಿದಿರೆ ಇಂದು ಯಕ್ಷಕಾಶಿಯಾಗಿಯೂ ಬೆಳೆಯುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಶ್ರೀಕ್ಷೇತ್ರ ಕಟೀಲಿನ ಆನುವಂಶಿಕ ಅರ್ಚಕ ಹರಿನಾರಾಯಣ ಆಸ್ರಣ್ಣ ಅಶೀರ್ವಚನ ನೀಡಿ ಯಕ್ಷಗಾನದ ತುಡಿತ ಎಲ್ಲರಲ್ಲೂ ಉಂಟಾಗಲಿ ಎಂದರು. ವಿದ್ವಾಂಸ ಯಕ್ಷಗಾನ ವಿಮರ್ಶಕ ಡಾ.ಎಂ.ಪ್ರಭಾಕರ ಜೋಶಿ `ಶ್ರೀಯಕ್ಷದೇವ’ನಾನು ಕಂಡಂತೆ ವಿಚಾರದ ಬಗ್ಗೆ ಮಾತನಾಡಿದರು. ಕಾರ್ಯಕ್ರಮಗಳ ಅವಲೋಕನವನ್ನು ಯಕ್ಷಗಾನ ವಿಮರ್ಶಕ ಶ್ರೀಧರ್ ಡಿ.ಎಸ್ ನೆರವೇರಿಸಿದರು.
ಶ್ರೀ ಯಕ್ಷದೇವ ಮಿತ್ರಕಲಾ ಮಂಡಳಿಯ ಗೌರವ ಸಲಹೆಗಾರ ಎಂ.ಆರ್.ವಾಸುದೇವ, ಬಿಜೆಪಿ ಮುಖಂಡ ಕೆ.ಪಿ.ಜಗದೀಶ್ ಅಧಿಕಾರಿ, ದ.ಕ.ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ  ಸುದರ್ಶನ ಎಂ, ಬೆಳುವಾಯಿ ಗ್ರಾಮಪಂಚಾಯತ್ ಅಧ್ಯಕ್ಷ ಭಾಸ್ಕರ ಆಚಾರ್ಯ, ಬ್ರಿಜೇಶ್ ರೈ ವೇದಿಕೆಯಲ್ಲಿದ್ದರು. ಡಾ.ಧನಂಜಯ ಕುಂಬ್ಳೆ ಕಾರ್ಯಕ್ರಮ ನಿರೂಪಿಸಿದರು.
ಶುಭಾಂಜನ ಡಿ. ಭಟ್ ಪ್ರಾರ್ಥಿಸಿದಿರು. ಸಂಘದ ಕಾರ್ಯದರ್ಶಿ ರವಿಪ್ರಸಾದ್ ಕೆ.ಶೆಟ್ಟಿ ಸ್ವಾಗತಿಸಿದರು. ಗೌರವಾಧ್ಯಕ್ಷ ಶ್ರೀಪತಿ ಭಟ್ ಗೌರವಿಸಿದರು.ಕಾರ್ಯಾಧ್ಯಕ್ಷ  ಎಂ.ದೇವಾನಂದ ಭಟ್ ಬೆಳುವಾಯಿ ವಂದಿಸಿದರು.