Headlines

ಕಣ್ಣುತೆರೆಸಿದ ಜವನೆರ್ ಬೆದ್ರ ಸಂಘಟನೆ * ಯೋಧರ ಮನೆಯಲ್ಲಿ ಬೆಳಗಿದ ದೀಪ! * ಯಶಸ್ವೀ 36ನೇವಾರ ಪೂರೈಸಿದ ಕ್ಲೀನ್ ಅಪ್ ಮೂಡಬಿದಿರೆ * ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ * ಅಳಿಯೂರಿನಲ್ಲಿ ಮೇಳೈಸಲಿದೆ ಕ್ರೀಡಾಹಬ್ಬ.! * ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯ್ತು ಹಳ್ಳಿ ಹುಡುಗರ ಅನ್ವೇಷಣೆ! * ಶಿರ್ಲಾಲು: ಹೊಸ ಶಾಸನ ಪತ್ತೆ * ಸಾವಿರ ಕಂಬದ ಬಸದಿಯ ಸ್ವಚ್ಛತೆ * ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ * ಮಾನವೀಯ ಸ್ಪಂದನೆ ಆಗಲೇಬೇಕಾಗಿದೆ… * 33ನೇ ವಾರ ಪೂರೈಸಿದ ಜವನೆರ್ ಬೆದ್ರದ ಸಾಧನೆ * ಆಧುನಿಕತೆಯಿಂದ ಆಶಾದಾಯಕ ಸ್ಥಿತಿ ಬಂದೊದಗಿದೆ: ಹರೀಶ್ ಶೆಣೈ * ಮೂಡಬಿದಿರೆಯಲ್ಲಿ ಸದ್ಭಾವನಾ ಗೋಷ್ಠಿ * ಭಾರತೀಯ ಜನತಾ ಪಾರ್ಟಿಯಿಂದ ಸ್ವಚ್ಛತೆಯ ಮಂತ್ರ * ಬಸದಿಗಳ ಬೀಡಲ್ಲಿ ಬಸದಿಗಳ ಸ್ವಚ್ಛತೆ * ಕಂಬಳಸಮಿತಿ ಸಭೆ * 30ನೇವಾರದ ಕ್ಲೀನ್ ಅಪ್ ಮೂಡಬಿದಿರೆ *

ಸಾಧ್ವಿ…ಒಂದು ನೋಟ…

#saadhvi#indipendenceday#vaarte

ಸಾಧ್ವಿ ಒಂದು ಮಹತ್ವಾಕಾಂಕ್ಷೆ ಹೊಂದಿದ ಪತ್ರಿಕೆಯಾಗಿತ್ತು. ತಾತಯ್ಯ ಅವರ ಸಾಹಸದ ಒಂದು ಭಾಗ ಎಂದು ವ್ಯಾಖ್ಯಾನಿಸಿದರೂ ತಪ್ಪಲ್ಲ.  ಸಾಧ್ವಿ   ಮೊದಲು ವಾರಪತ್ರಿಕೆಯಾಗಿ ಆರಂಭಗೊಂಡು ಅನಂತರ ದಿನಪತ್ರಿಕೆಯಾಗಿ ಬೆಳೆದು ಬಂದು, ವೆಂಕಟಕೃಷ್ಣಯ್ಯನವರ ಶಿಷ್ಯ ಅಗರಂರಂಗಯ್ಯನವರ ಸಂಪಾದಕತ್ವದಲ್ಲಿ ಈ ಪತ್ರಿಕೆ ಶತಮಾನದ ಸನಿಹ ಬದುಕಿತು. ಇದು ಸಾಧ್ವಿ  ಸ್ವಾತಂತ್ರ್ಯ ವಿಶೇಷ ಸಂಚಿಕೆಯ ಒಂದು ನೋಟ. ಭವ್ಯ ಭಾರತದ ಸ್ವಾತಂತ್ರ್ಯ ದಿನಾಚರಣೆಯ ಶುಭಾವಸರಕ್ಕೆ ಸಾಧ್ವಿ ಕನ್ನಡ ಪತ್ರಿಕೆಯು ವಿಶೇಷ ಸಂಚಿಕೆಯನ್ನು ಹೊರತಂದಿತ್ತು. ಭಾರತದ ರಾಷ್ಟ್ರಧ್ವಜ, ಸ್ವತಂತ್ರ ಭಾರತಕ್ಕೆ ಜಯವಾಗಲಿ ಎಂಬ ವಿಶೇಷ ಸಂದೇಶ, ರಾಷ್ಟ್ರ ಮುದ್ರೆ, ಭಾರತ ಮಾತೆಯ ವಿಚಾರಗಳನ್ನು ಒಳಗೊಂಡ ವಿಶೇಷ ಸಂಚಿಕೆ ಸಂಗ್ರಹ ಯೋಗ್ಯವಾಗಿದ್ದಂತೂ ಸತ್ಯ.

 #saadhvi#indipendenceday#vaarte1

19ನೆಯ ಶತಮಾನದ ಅಂತಿಮ ಚರಣದಲ್ಲಿ ಮೈಸೂರು ಭಾಗದ ಪತ್ರಿಕೋದ್ಯಮದ ನಾಯಕತ್ವ ವಹಿಸಿದವರು ಎಂ. ವೆಂಕಟಕೃಷ್ಣಯ್ಯ  . ಇವರ ಸಾರ್ವಜನಿಕ ಸೇವೆಯ ಹಲವು ಮುಖಗಳಲ್ಲಿ ಪತ್ರಿಕೋದ್ಯಮವೂ ಒಂದಾಗಿತ್ತು. ತಾತಯ್ಯ ಎಂದೇ ಖ್ಯಾತರಾಗಿದ್ದ ಇವರು ಒಂದು ಸಂಸ್ಥೆಯ ರೀತಿ ಬೆಳೆದು ಹಲವು ಪತ್ರಿಕೆಗಳ ಸ್ಥಾಪಕರಾಗಿ, ಮೈಸೂರಿನ ಸಾರ್ವಜನಿಕ ಜೀವನಕ್ಕೆ ಹೇಗೋ ಪತ್ರಿಕೋದ್ಯ ಮಕ್ಕೂ ಆಧಾರಸ್ತಂಭ ವಾಗಿದ್ದರು.

ಹಿತಬೋಧಿನಿ ಮಾಸಪತ್ರಿಕೆಯ ಮೂಲಕ ಇವರು ಪತ್ರಿಕಾರಂಗ ಪ್ರವೇಶಿಸಿದರು. ಹಿತಬೋಧಿನಿ 1883ರಲ್ಲಿ ಆರಂಭಗೊಂಡು 1890ರ ವರೆಗೆ ನಡೆದು ಬಂತು. ಈ ಪತ್ರಿಕೆ ಆ ಕಾಲದಲ್ಲಿ ಅಪಾರ ಜನಮನ್ನೆಣೆ ಗಳಿಸಿತ್ತು ಎನ್ನಲಾಗಿದೆ. ವೃತ್ತಾಂತ ಚಿಂತಾಮಣಿ (1885) ಇವರ ಇನ್ನೊಂದು ಜನಪ್ರಿಯ ಪತ್ರಿಕೆ. ತೀಕ್ಷ್ಣ ಸಂಪಾದಕೀಯಗಳಿಂದ ಆಡಳಿತಗಾರರಿಗೆ ಈ ಪತ್ರಿಕೆ ಚುರುಕು ಮುಟ್ಟಿಸುತ್ತಿತ್ತು. ಮೈಸೂರು ಹೆರಾಲ್ಡ್‌ ಎಂಬ ಪತ್ರಿಕೆಯನ್ನು 1886ರಲ್ಲೂ ವೆಲ್ತ್‌ ಆಫ್ ಮೈಸೂರು ಎಂಬುದನ್ನು 1912ರಲ್ಲೂ ಸಂಪಾದಿಸಿ ಪ್ರಕಟಿಸಿದ ಖ್ಯಾತಿ ತಾತಯ್ಯ ನವರದು. ಇದಲ್ಲದೆ ಇವರ ಪತ್ರಿಕಾ ಸಾಹಸದ ಸಾಲಿಗೆ ಸೇರಬೇಕಾದ ಇತರ ಪತ್ರಿಕೆಗಳೆಂದರೆ ಸಂಪದಭ್ಯುದಯ (ಕನ್ನಡ ದಿನಪತ್ರಿಕೆ 1912), ನೇಚರ್ ಕ್ಯೂರ್ (ಇಂಗ್ಲಿಷ್ ದಿನಪತ್ರಿಕೆ) ಮತ್ತು ಸಾಧ್ವಿ (1899). ಸಾಧ್ವಿ   ಮೊದಲು ವಾರಪತ್ರಿಕೆಯಾಗಿ ಆರಂಭಗೊಂಡು ಅನಂತರ ದಿನಪತ್ರಿಕೆಯಾಗಿ ಬೆಳೆದು ಬಂದು, ವೆಂಕಟಕೃಷ್ಣಯ್ಯನವರ ಶಿಷ್ಯ ಅಗರಂರಂಗಯ್ಯನವರ ಸಂಪಾದಕತ್ವದಲ್ಲಿ ಈ ಪತ್ರಿಕೆ ಶತಮಾನದ ಸನಿಹ ಬದುಕಿತು. ಒಂದು ಕಾಲದಲ್ಲಿ ಮೈಸೂರಿನ ಜನಪ್ರಿಯ ಪತ್ರಿಕೆ ಗಳಲ್ಲೊಂದಾಗಿತ್ತು. ಅಗರಂ ರಂಗಯ್ಯನವರ ಕಾಲಾನಂತರ ಕೆಲಕಾಲ ನಿಂತುಹೋಗಿದ್ದ ಸಾಧ್ವಿ ಈಗ ಹೊಸ ಮಾಲೀಕತ್ವದಲ್ಲಿ ಮುಂದುವರಿದಿದೆ.