Headlines

ಹಂತಕರನ್ನು ಕೂಡಲೇ ಬಂಧಿಸಿ: ಸಿ.ಎಂ * ಎದೆಭಾಗಕ್ಕೆ 2;ಹಣೆಗೆ1ಗುಂಡು * ಪರ್ತಕರ್ತೆ ಗೌರಿ ಲಂಕೇಶ್ ಹತ್ಯೆ * ಎಂಟು ಮಂದಿ ಶಿಕ್ಷಕರಿಗೆ ಸನ್ಮಾನ * ಸಾಧಕರಿಗೆ ಸನ್ಮಾನ * ಶಾಲೆ ಶಾಲೆಯಲ್ಲಿ ಗೆಜ್ಜೆಯ ನಿನಾದ! * ಋಣ ತೀರಿಸುವ ಕಾರ್ಯವಾಗಲಿ: ದೇವಿಪ್ರಸಾದ್ ಶೆಟ್ಟಿ * ಸಾರ್ವಜನಿಕ ಗಣೇಶೋತ್ಸವ * ಶ್ರೀ ಸೂರ್ಯನಾರಾಯಣ ಕ್ಷೇತ್ರದಲ್ಲಿ ಗಣೇಶೋತ್ಸವ * ಗ್ರಾಮ-ಪಟ್ಟಣಕ್ಕೆ ಒಂದೇ ಗಣೇಶನಿರಲಿ-ಟಿ.ಆರ್.ಸುರೇಶ್ * 54ನೇ ವರ್ಷದ ಮೂಡಬಿದಿರೆಯ ಗಣೇಶ * ಪೆರಿಂಜೆಯಲ್ಲಿ ಸಂಭ್ರಮದ ಗಣೇಶೋತ್ಸವ * ಕಲ್ಲಬೆಟ್ಟಿನಲ್ಲಿ ಪೂಜಿಸಿದ ವಿಘ್ನವಿನಾಯಕ * ಮೂಡುಬಿದಿರೆಯಲ್ಲಿ ರಕ್ಷಾಂಬಂಧನ * ಪ್ರೊ. ಕೆ.ಇ.ರಾಧಾಕೃಷ್ಣ ಮತ್ತು ಸತ್ಯಮಂಗಲ ಆರ್ ಮಹಾದೇವ ಅವರಿಗೆ ವರ್ಧಮಾನ ಪ್ರಶಸ್ತಿ ಘೋಷಣೆನ * ಇದು ಅತ್ಯಾಧುನಿಕ `ಪಾರಂಪರಿಕ’ಮಾದರಿಯ ಶ್ಯಾವಿಗೆ ಮಣೆ! * ವಿಂಶತಿ ಯಕ್ಷಕಲೋತ್ಸವಕ್ಕೆ ತೆರೆ * ಸಿ.ಐ.ಟಿ.ಯು: 9ನೇ ಬೀಡಿ ಕಾರ್ಮಿಕರ ರಾಜ್ಯ ಸಮ್ಮೇಳನ * ಪದ್ಮಪ್ರಸಾದ್ ಜೈನ್ ನೇಮಕ * ವಿಶೇಷ ಪೂಜೆ-ಅಭಿಷೇಕ *

ಸಿ.ಐ.ಟಿ.ಯು: 9ನೇ ಬೀಡಿ ಕಾರ್ಮಿಕರ ರಾಜ್ಯ ಸಮ್ಮೇಳನ

#citu#moodbidri#procession

ನಮ್ಮ ಪ್ರತಿನಿಧಿ ವರದಿ
ಕರ್ನಾಟಕ ರಾಜ್ಯ ಬೀಡಿ ಕಾರ್ಮಿಕರ ಫಡರೇಷನ್ (ಸಿ.ಐ.ಟಿ.ಯು) ಇದರ 9ನೇ ರಾಜ್ಯ ಸಮ್ಮೇಳನ ಮೂಡಬಿದಿರೆ ಸಮಾಜ ಮಂದಿರದಲ್ಲಿ ಸೋಮವಾರ ಪ್ರಾರಂಭಗೊಂಡಿತು. ಜು.25 ರಂದು ಸಮಾವೇಶ ಸಮಾರೋಪಗೊಳ್ಳಲಿದೆ. ಆಲ್ ಇಂಡಿಯಾ ಬೀಡಿ ವರ್ಕರ್ಸ್ ಫೆಡರೇಷನ್ನ ಪ್ರಧಾನ ಕಾರ್ಯದಶರ್ಿ ದೇಬಾಶೀಸ್ ರಾಯ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸಿ.ಐ.ಟಿ.ಯು ಸಂಘಟನೆಯು ಬೀಡಿ ಕಾರ್ಮಿಕರ ಎಲ್ಲಾ ರೀತಿಯ ಶೋಷಣೆಗಳ ವಿರುದ್ಧ ಹೋರಾಡುತ್ತಾ ಬಂದಿದೆ. ಸಂಘಟನೆಯು ಇರುವಲ್ಲೆಲ್ಲಾ ಬೀಡಿ ಕಾಮಿಕರ ಕಾನೂಬು ಬದ್ಧ ಸವಲತ್ತುಗಳಿಗಾಗಿ ಹೋರಾಡುತ್ತಾ ಶಕ್ತಿಮೀರಿ ಶ್ರಮಿಸುತ್ತಿದೆ ಎಂದರು.

#citu#moodbidri#procession
ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಬೀಡಿ ಕಾರ್ಮಿಕರ ಫೆಡರೇಶನ್ ಉಪಾಧ್ಯಕ್ಷೆ ಪದ್ಮಾವತೀ ಶೆಟ್ಟಿ ವಹಿಸಿದ್ದರು. ಸಿ.ಐ.ಟಿ.ಯು ರಾಜ್ಯ ಸಮಿತಿ ಅಧ್ಯಕ್ಷೆ ಎಸ್.ವರಲಕ್ಷ್ಮೀ , ಸಿ.ಐ.ಟಿ.ಯು ದ.ಕ.ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಸ್ವಾಗತ ಸಮಿತಿ ಗೌರವಾಧ್ಯಕ್ಷ ಕೆ.ಯಾದವ ಶೆಟ್ಟಿ, ಅಧ್ಯಕ್ಷ ರಮಣಿ, ಕಾರ್ಯದರ್ಶಿ ರಾಧಾ, ಕೋಶಾಧಿಕಾರಿ ಗಿರಿಜ ಉಪಸ್ಥಿತರಿದ್ದರು. ಸಮಾವೇಶಕ್ಕೂ ಮೊದಲು ಮೂಡಬಿದಿರೆ ಜಿ.ವಿ.ಪೈನಗರದಿಂದ ಬೃಹತ್ ಸಂಖ್ಯೆಯಲ್ಲಿ ಜಾಥಾ ಮೂಡಬಿದಿರೆ ಮುಖ್ಯ ರಸ್ತೆಯ ಮೂಲಕ ಸಮಾಜಮಂದಿರಕ್ಕೆ ತೆರಳಿದರು. ಸುಮಾರು 800ಮಂದಿ ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು. ಬೀಡಿ ಉದ್ದಿಮೆ ಮತ್ತು ಕಾರ್ಮಿಕರ ಸಮಸ್ಯೆಗಳು ವಿಷಯದಲ್ಲಿ ವಿಚಾರ ಸಂಕಿರಣ ನಡೆಯಿತು.

#citu#moodbidri