Headlines

ಆಳ್ವಾಸ್ ವಿದ್ಯಾರ್ಥಿಸಿರಿಯ ಹೈಲೈಟ್ಸ್… * ಬಾಲಪ್ರತಿಭೆ ಪ್ರದರ್ಶನ * ಬಸದಿಗಳ ನಾಡಲ್ಲಿ ಕನ್ನಡದ ಬಾವುಟ… ಹೊತ್ತಿತೋ…ಹೊತ್ತಿತು ಕನ್ನಡದ ದೀಪ… * ನುಡಿಸಿರಿಯ ಸರ್ವಾಧ್ಯಕ್ಷರ ಎಕ್ಸ್ ಕ್ಲೂಸಿವ್ ಸಂದರ್ಶನ * ಹನ್ನೆರಡು ಸಾಧಕರಿಗೆ 2018ರ ಆಳ್ವಾಸ್ ನುಡಿಸಿರಿ ಪುರಸ್ಕಾರ * ನುಡಿಸಿರಿಯ ಅಂಗಳದಲ್ಲಿ ಅಚ್ಚರಿಯ ಮೇಲೊಂದಚ್ಚರಿ! * ನುಡಿಸಿರಿಯ ಅಂಗಳದಲ್ಲೊಂದು ಸುದ್ದಿಮನೆ! * ಆಳ್ವಾಸ್ ವಿದ್ಯಾರ್ಥಿಸಿರಿ 2018 ಆರಂಭ * ಕಣ್ಣುತೆರೆಸಿದ ಜವನೆರ್ ಬೆದ್ರ ಸಂಘಟನೆ * ಯೋಧರ ಮನೆಯಲ್ಲಿ ಬೆಳಗಿದ ದೀಪ! * ಯಶಸ್ವೀ 36ನೇವಾರ ಪೂರೈಸಿದ ಕ್ಲೀನ್ ಅಪ್ ಮೂಡಬಿದಿರೆ * ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ * ಅಳಿಯೂರಿನಲ್ಲಿ ಮೇಳೈಸಲಿದೆ ಕ್ರೀಡಾಹಬ್ಬ.! * ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯ್ತು ಹಳ್ಳಿ ಹುಡುಗರ ಅನ್ವೇಷಣೆ! * ಶಿರ್ಲಾಲು: ಹೊಸ ಶಾಸನ ಪತ್ತೆ * ಸಾವಿರ ಕಂಬದ ಬಸದಿಯ ಸ್ವಚ್ಛತೆ * ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ *

ಹಳ್ಳಿಮದ್ದು: ಸಿಹಿಗೆಣಸು

vaarte_health_sweetpototo

 

ಆರೋಗ್ಯ ವಾರ್ತೆ

ಸಿಹಿ ಗೆಣಸು (Sweet potato) ಒಂದು ಜಾತಿಯ ಗೆಡ್ದೆ. ಇದು ಗೆಡ್ದೆ ಜಾತಿಯ ತರಕಾರಿಗಳಲ್ಲಿ ಪ್ರಮುಖವಾದುದು.ದಕ್ಷಿಣ ಅಮೇರಿಕಾ ಮೂಲದಿಂದ ಬಂದು ಪ್ರಪಂಚದಾದ್ಯಂತ ಬಳಕೆಯಲ್ಲಿದೆ. ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಶರ್ಕರ ಪಿಷ್ಠವನ್ನು ಹೊಂದಿರುತ್ತದೆ.

 

 

 

ಇದರಲ್ಲಿ ದೇಹಕ್ಕೆ ಬೇಕಾದ ಪೋಷಕಾಣಶಗಳಿವೆ. ಬಿ1; ಬಿ2; ಗಿ3; ಬಿ5; ಬಿ6; ಬಿ9. ಅನ್ನಾಂಗ (ವಿಟಮಿನ್ ಗಳು).ಕ್ಯಾಲ್ಸಿಯಂ; ಕಬ್ಬಿಣ; ಸೋಡಿಯಂ; ಝಿಂಕ್; ಮೆಗ್ನಿಶುಯಂ ಅಂಶಗಳು ಇವೆ. ಅಲ್ಲದೇ ಇದರಲ್ಲಿ ಉತ್ತಮ ಪ್ರಮಾಣದ ಕರಗದ ನಾರು, ವಿಟಮಿನ್ ಸಿ ಮತ್ತು ವಿಟಮಿನ್ ಎ ಸಹಾ ಇದ್ದು ಹಲವು ತೊಂದರೆಗಳಿಂದ ರಕ್ಷಣೆ ನೀಡುತ್ತದೆ.   ಸಿಹಿಗೆಣಸಿನ ಸೇವನೆಯಿಂದ ಜೀರ್ಣಶಕ್ತಿ ಉತ್ತಮಗೊಳ್ಳುತ್ತದೆ ಹಾಗೂ ಇದರ ಮೂಲಕ ಒಟ್ಟಾರೆ ಆರೋಗ್ಯ ಉತ್ತಮಗೊಳ್ಳುತ್ತದೆ.

 

  • ಮಧುಮೇಹದ ನಿಯಂತ್ರಣಕ್ಕಾಗಿ ನೈಸರ್ಗಿಕ ಆಹಾರವಸ್ತುಗಳನ್ನು ಪರಿಗಣಿಸುವಾಗ ಸಿಹಿ ಗೆಣಸಿನಲ್ಲಿರುವ ಮಧುಮೇಹ ಸ೦ಬ೦ಧಿ ಪ್ರಯೋಜನಗಳ ಕುರಿತು ಹೆಚ್ಚು ಹೆಚ್ಚು ತಿಳಿದುಕೊ೦ಡಿರುವುದು ಒಳ್ಳೆಯದು. ಬಿಟಾ-ಕೆರೊಟಿನ್ ಹೆಚ್ಚಾಗಿರುವ ಈ ಸಿಹಿ ಗೆಣಸಿನಲ್ಲಿ ಆರೋಗ್ಯದ ದೃಷ್ಟಿಯಿಂದ ಮಧುಮೇಹಿ ರೋಗಿಗಳಿಗೆ ಅತ್ಯುತ್ತಮವಾಗಿದೆ.
  • ಸಿಹಿ ಗೆಣಸಿನಲ್ಲಿ ಡಯಟೆರಿ ಫೈಬರ್‌ಗಳು ಅಧಿಕವಾಗಿರುತ್ತವೆ. ಇವು ಕೋಲನ್ ಕ್ಯಾನ್ಸರ್ ಬರದಂತೆ ತಡೆಯುತ್ತವೆ ಮತ್ತು ಮಲಬದ್ಧತೆಯಿಂದ ಮುಕ್ತಿ ನೀಡುತ್ತವೆ.
  • ಸಿಹಿ ಗೆಣಸಿನಲ್ಲಿ ವಿಟಮಿನ್ ಡಿ ಅಧಿಕ ಪ್ರಮಾಣದಲ್ಲಿರುತ್ತದೆ. ಇದು ನಮ್ಮ ಥೈರಾಯ್ಡ್ ಗ್ರಂಥಿಗಳ ಕಾರ್ಯ ಮಾಡಲು ಅತ್ಯಾವಶ್ಯಕ. ಜೊತೆಗೆ ಇದು ಹಲ್ಲು, ಮೂಳೆ, ಹೃದಯ, ತ್ವಚೆ ಮತ್ತು ನಮ್ಮ ಶಕ್ತಿಯ ಮಟ್ಟದ ಕಾರ್ಯ ನಿರ್ವಹಿಸುವಿಕೆಯಲ್ಲಿ ಪ್ರಧಾನ ಪಾತ್ರ ನಿರ್ವಹಿಸುತ್ತದೆ.
  • ಸಿಹಿ ಗೆಣಸುಗಳಲ್ಲಿರುವ ಪೊಟಾಶಿಯಂ ದೇಹದ ಮೇಲೆ ಸೋಡಿಯಂ ಪ್ರಭಾವವನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯದ ಕಾರ್ಯವೈಖರಿಯನ್ನು ಸುಗಮಗೊಳಿಸುತ್ತದೆ. ಜೊತೆಗೆ ಇದು ರಕ್ತದ ಪರಿಚಲನೆಯನ್ನು ಸುಗಮಗೊಳಿಸುತ್ತದೆ ಮತ್ತು ಎಲೆಕ್ಟ್ರೋಲೈಟ್‌ಗಳನ್ನು ಸಮತೋಲನದಲ್ಲಿಡುತ್ತದೆ. ಸಿಹಿಗೆಣಸುಗಳಲ್ಲಿ, ವಿಟಮಿನ್ ಬಿ6 ಹೆಚ್ಚಾಗಿರುತ್ತದೆ. ಇದು ಪಾರ್ಶ್ವವಾಯು, ಪದೇ ಪದೇ ಕಾಣಿಸಿಕೊಳ್ಳುವ ರೋಗಗಳು ಮತ್ತು ಹೃದ್ರೋಗಗಳನ್ನು ತಡೆಯುತ್ತದೆ.
  • ಪೊಟಾಶಿಯಂ ಅಥ್ಲೆಟ್‌ಗಳಿಗೆ ಸಹಾಯ ಮಾಡುತ್ತದೆ. ಜೊತೆಗೆ ಇದು ಸ್ನಾಯು ಸೆಳೆತದ ಮೇಲೆ ಹೋರಾಡುತ್ತದೆ ಮತ್ತು ಊತವನ್ನು ಕಡಿಮೆ ಮಾಡುತ್ತದೆ.
  • ಸಿಹಿಗೆಣಸುಗಳಲ್ಲಿ ಫೊಲಿಕ್ ಆಮ್ಲವು ಅಧಿಕ ಪ್ರಮಾಣದಲ್ಲಿರುತ್ತದೆ. ಇದು ಗರ್ಭಾವಧಿಯಲ್ಲಿ ಭ್ರೂಣದ ಕೋಶ ಮತ್ತು ಕೋಶಗಳ ಬೆಳವಣಿಗೆಗೆ ಸಹಕರಿಸುತ್ತದೆ.