Headlines

ರೋಟರಿಯಿಂದ ಸಾಧಕರಿಗೆ ಸನ್ಮಾನ * ಸ್ವರಾಜ್ಯ ಮೈದಾನದ ಮೇಲೆ ತೂಗುಗತ್ತಿ…! * ಡಾ.ಸುಧೀರ್ ಹೆಗ್ಡೆ ನೇತೃತ್ವದಲ್ಲಿಕಣ್ಣಿನತಪಾಸಣಾ ಶಿಬಿರ * ಯುವಶಕ್ತಿಗೆ ಪರಿಸರಪ್ರಜ್ಞೆಯ ಅರಿವು ಮೂಡಿಸಿದ ಮಹಾಕಾರ್ಯ * ಮೂಡಬಿದಿರೆ ಶಿಕ್ಷಣ ಪ್ರೇಮಿಗಳ ನಾಡು: ಅಭಯಚಂದ್ರ ಜೈನ್ * 50ನೇ ವೈದ್ಯಕೀಯ ತಪಾಸಣಾ ಶಿಬಿರ * ಜ.21-25: ಮೂಡಬಿದಿರೆಯಲ್ಲಿ ರಾಷ್ಟ್ರೀಯ ವೈಯ್ಟ್ ಲಿಫ್ಟಿಂಗ್ * ರಾಜ್ಯಮಟ್ಟದ ಟಿ-20 ಕ್ರಿಕೆಟ್ ಟೂರ್ನಿ: ಆಳ್ವಾಸ್‍ಗೆ ಪ್ರಶಸ್ತಿ * ಕವಿಕುಲಗುರು ಕುಮಾರವ್ಯಾಸ * ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಒಡ್ಡು ನಿರ್ಮಾಣ * ಕಣ್ಣಿನ ಉಚಿತ ತಪಾಸಣೆಹಾಗೂ ಚಿಕಿತ್ಸಾ ಶಿಬಿರ * ಅಂತರ್ ಕಾಲೇಜು ಸಾಫ್ಟ್ ಬಾಲ್ ಟೂರ್ನಮೆಂಟ್ ಆರಂಭ * ವಿಶೇಷ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ * ವರ್ಣವೈವಿಧ್ಯ ಚಿತ್ತಾಕರ್ಷದ ಆಳ್ವಾಸ್ ವಿರಾಸತ್ * ವಿರಾಸತ್ ಗೌರವ * ಬೇಲಾಡಿ ರಾಮಚಂದ್ರ ಆಚಾರ್ಯ ನಿಧನ * ವಿವೇಕಾನಂದ ಜಯಂತಿ * 79.5ಕೋಟಿ ಅಭಿವೃದ್ಧಿ ಕಾರ್ಯಗಳ ಲೋಕಾರ್ಪಣೆ, ಶಂಕುಸ್ಥಾಪನೆ * ಆಳ್ವಾಸ್ ರೋಟರಿ ಬ್ಲಡ್ ಬ್ಯಾಂಕ್ ಉದ್ಘಾಟನೆ * ಸೇವೆಯಲ್ಲಿ ಬದಲಾವಣೆ ತಂದ ಹೆಗ್ಗಳಿಕೆ ರೋಟರಿಯದ್ದು – ಡಾ.ಹೆಗ್ಗಡೆ *

2ನೇ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್

generl-knowgde

ವಾರ್ತೆ ಸಾಮಾನ್ಯ ಜ್ಞಾನ

 

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಮೊದಲ ರಾಷ್ಟ್ರಪತಿ  ಡಾ ರಾಜೇಂದ್ರ ಪ್ರಸಾದ್ ಅವರ ನಂತರ 2ನೇ ರಾಷ್ಟ್ರಪತಿಯಾಗಿ ಅಧಿಕಾರ ಬಂದರು. 1962ರಲ್ಲಿ ಭಾರತದ ಶಿಕ್ಷಕನೊಬ್ಬ ಮೊಟ್ಟಮೊದಲ ಉಪರಾಷ್ಟ್ರಪತಿಯಾಗಿ ನೇಮಕಗೊಂಡ ‘ರಾಧಾಕೃಷ್ಣನ್’, ರಾಜ್ಯಸಭೆಯಲ್ಲಿ ಸಂಸ್ಕೃತ ಶ್ಲೋಕಗಳ ಮೂಲಕ ಎಲ್ಲ ಸಂಸತ್ ಸದಸ್ಯರ ಗಮನ ಸೆಳೆಯುತ್ತಿದ್ದರು. ‘ರಾಧಾಕೃಷ್ಣನ್’ ಅವರ ಅಪಾರ ಸೇವೆಯನ್ನು ಗುರುತಿಸಿ ಗೌರವಿಸಿದ ಭಾರತ ಸರಕಾರ ಉಪರಾಷ್ಟ್ರಪತಿ ಹುದ್ದೆಯಲ್ಲಿದಾಗಲೇ ಅವರಿಗೆ ೧೯೫೪ ರಲ್ಲಿ ಪ್ರತಿಷ್ಠಿತ ‘ಭಾರತ ರತ್ನ ಪ್ರಶಸ್ತಿ’ ನೀಡಿ ಗೌರವಿಸಿತು.

 

dr-sarvapalli-rak

 

ಆಗ ರಾಧಾಕೃಷ್ಣನ್ ಅವರು ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ವಿಭಾಗದಲ್ಲಿ ಅಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಮ್ಮ ಗುರು ಉಪರಾಷ್ಟ್ರಪತಿಯಾಗಿ ದೆಹಲಿಗೆ ಹೊರಡುವ ಸಂದರ್ಭದಲ್ಲಿ ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು, ಅವರನ್ನು ಕಳುಹಿಸಿ ಕೊಡಲು ಸಾರೋಟನ್ನು ತಂದು ಅಲಂಕರಿಸಿ, ಕುದುರೆಯ ಬದಲು ತಾವೇ ಕುದುರೆಗಳಂತೆ, ರಾಧಾಕೃಷ್ಣನ್ ಅವರು ಕುಳಿತ ಸಾರೋಟನ್ನು ಪ್ರೀತಿಪೂರ್ವಕವಾಗಿ ರೈಲ್ವೆ ನಿಲ್ದಾಣದವರೆಗೂ ಎಳೆದು ಕೊಂಡು ಹೋಗಿ, ಭಾವಪೂರ್ಣ ವಿದಾಯ ಹೇಳಿದ್ದರು. ಈ ಸನ್ನಿವೇಶವನ್ನು ಕಂಡು ರಾಧಾಕೃಷ್ಣನ್ ಅವರು ಭಾವುಕರಾಗಿದ್ದರಂತೆ. ಅವರು ಆಗಾಗ ಈ ಸಂದರ್ಭವನ್ನು ನೆನೆಸಿಕೊಳ್ಳುತ್ತಿದ್ದರು.

 

 

 

ಇದೇ ಸಂದರ್ಭದಲ್ಲಿ ರಾಧಾಕೃಷ್ಣನ್ ಕುರಿತು ಅಮೆರಿಕಾದಲ್ಲಿ ‘ಫಿಲಾಸಪಿ ಆಫ್ ಡಾ. ಸರ್ವಪಲ್ಲಿ ರಾಧಾಕೃಷ್ಣನ್’ ಪುಸ್ತಕ ಬಿಡುಗಡೆಗೊಂಡಿತು. ‘ಡಾ. ರಾಜೇಂದ್ರ ಪ್ರಸಾದ್’ ನಂತರ, 1962ರಲ್ಲಿ ಭಾರತದ ಎರಡನೇ ರಾಷ್ಟ್ರಪತಿಯಾಗಿ ಆಯ್ಕೆಯಾದ ರಾಧಾಕೃಷ್ಣನ್, ತಮ್ಮ ಅಧಿಕಾರಾವಧಿಯಲ್ಲಿ ದೇಶದ ಸರ್ವತೋಮುಖ ಏಳಿಗೆಗೆ ಅವಿರತ ಶ್ರಮಿಸಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸಂಬಂಧಗಳನ್ನು ಉನ್ನತೀಕರಣಗೊಳಿಸುತ್ತಾ, ದೇಶದೊಳಗಿನ ಆಂತರಿಕ ಕಲಹಗಳಿಗೆ ತಿಲಾಂಜಲಿ ನೀಡುತ್ತಾ, ದೇಶವನ್ನು ಸುಭಿಕ್ಷವಾಗಿಸಿದ ಕೀರ್ತಿ ‘ಡಾ.ರಾಧಾ ಕೃಷ್ಣನ್’ ಅವರಿಗೆ ಸಲ್ಲುತ್ತದೆ.

 

 

 

ಹುಟ್ಟುಹಬ್ಬವನ್ನು ಶಿಕ್ಷಕರ ದಿನವನ್ನಾಗಿ ಆಚರಣೆ

ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆಗೈದಿರುವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರಲ್ಲಿ ಪ್ರಮುಖರಾಗಿದ್ದಾರೆ. ಶಿಕ್ಷಕರಾಗಿದ್ದ ‘ಡಾ. ಸರ್ವಪಲ್ಲಿ ರಾಧಾಕೃಷ್ಣನ್’ 1962 ರಲ್ಲಿ ಭಾರತದ ರಾಷ್ಟ್ರಪತಿಯಾದಾಗ ಇವರ ಶಿಷ್ಯರು ಮತ್ತು ಸ್ನೇಹಿತರು ಸೆಪ್ಟೆಂಬರ್ 5 ರಂದು ತಮ್ಮ ಹುಟ್ಟಿದ ದಿನವನ್ನು ಆಚರಿಸಲು ಹೇಳಿದಾಗ ತಮ್ಮ ಶಿಕ್ಷಕ ಹುದ್ದೆಯನ್ನು ಅಪಾರ ಗೌರವಿಸುತಿದ್ದ ರಾಧಾಕೃಷ್ಣನ್ ನೀವು ನನ್ನ ಹುಟ್ಟಿದ ದಿನವನ್ನು ಬೇರೆಯಾಗಿಯೇ ಆಚರಿಸುವುದಾದರೆ ಇಂದಿನಿಂದ “ಸೆಪ್ಟೆಂಬರ್ ೫ “ನ್ನು ‘ಶಿಕ್ಷಕರ ದಿನ’ವನ್ನಾಗಿ ಆಚರಿಸಲು ಹೇಳಿದರು. ಅಂದಿನಿಂದ(1962) ಅವರ ಜನ್ಮದಿನವನ್ನ ಶಿಕ್ಷಕರ ದಿನವನ್ನಾಗಿ ಆಚರಿಸುತ್ತಾ ಅವರು ಗೈದಿರುವ ಶಿಕ್ಷಣ ಕ್ಷೇತ್ರಕ್ಕೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತಿದೆ.

 

ಬಾಲ್ಯ-ವಿದ್ಯಾಭ್ಯಾಸ-ವಿವಾಹ

‘ಸರ್ವಪಲ್ಲಿ ರಾಧಾಕೃಷ್ಣನ್’ ಜನಿಸಿದ್ದು ದಕ್ಷಿಣ ಭಾರತದ ತಮಿಳುನಾಡಿನ ‘ತಿರುತ್ತಣಿ’’ ಎಂಬಲ್ಲಿ ಸೆಪ್ಟೆಂಬರ್ 5, 1888 ರಲ್ಲಿ.(ಸರ್ವಪಲ್ಲಿ ರಾಧಾಕೃಷ್ಣನ್ ಅವರ ಪುತ್ರ ಸರ್ವಪಲ್ಲಿ ಗೋಪಾಲ್ ಅವರು ತಮ್ಮ ತಂದೆಯ ಬಗ್ಗೆ ಬರೆದ ಜೀವನಚರಿತ್ರೆಯಲ್ಲಿ ರಾಧಾಕೃಷ್ನನ್ ಅವರ ಜನ್ಮದಿನಾಂಕ 20-09-1887 ಎಂದಿದೆ) ಸರ್ವಪಲ್ಲಿ ಎನ್ನುವುದು ಮನೆತನದ ಹೆಸರಾದರೆ, ‘ರಾಧಾಕೃಷ್ಣನ್’  ಎನ್ನುವುದು ಅವರ ತಂದೆ-ತಾಯಿ ಇಟ್ಟ ಮುದ್ದಿನ ಹೆಸರು. ತಂದೆ ಸರ್ವಪಲ್ಲಿ ವೀರಸ್ವಾಮಿ ತಾಯಿ ಸೀತಮ್ಮ.

 

 

ಪ್ರಾಥಮಿಕ ಶಿಕ್ಷಣ ಮತ್ತು ಪ್ರೌಢಶಾಲೆಯ ಶಿಕ್ಷಣವನ್ನು ಮುಗಿಸಿದ ರಾಧಾಕೃಷ್ಣನ್, ಮದ್ರಾಸ್‌ (ಈಗಿನ ಚೆನ್ನೈ) ಕ್ರಿಶ್ಚಿಯನ್ ಕಾಲೇಜ್‌ ನಲ್ಲಿ ‘ತಂತ್ರಜ್ಞಾನ’’ ವಿಷಯದ ಮೇಲೆ ‘ಬಿ.ಎ’ ಮತ್ತು ‘ಎಂ.ಎ. ಪದವಿ’ಗಳನ್ನು ಪಡೆದು ಕೊಂಡರು. ‘ಸ್ನಾತಕೋತ್ತರ ಪದವಿ’ಯಲ್ಲಿ ರಾಧಾಕೃಷ್ಣನ್ ಮಂಡಿಸಿದ ಪ್ರಬಂಧ ‘ದಿ ಎಥಿಕ್ಸ್ ಆಫ್ ವೇದಾಂತ’ ಅವರ ಬದುಕಿನ ದಿಕ್ಕನ್ನೇ ಬದಲಾಯಿಸಿತು. ಇವರು ವೆಲ್ಲೂರಿನಲ್ಲಿರುವಾಗಲೇ ಕೇವಲ 16 ನೇ ವಯಸ್ಸಿನಲ್ಲಿ ಶಿವಕಾಮಮ್ಮ ಎಂಬುವವರನ್ನು ಬಾಳಸಂಗಾತಿಯನ್ನಾಗಿಸಿಕೊಂಡಿದ್ದರು.

 

 

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಮೇ 13, 1962ರಿಂದ ಮೇ 13 1967 ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು. ಇವರು ತಮ್ಮ ‘ರಾಷ್ಟ್ರಪತಿ ಹುದ್ದೆ’ಯ ಅಧಿಕಾರವಧಿ ಮುಗಿದ ನಂತರ 1967 ರಲ್ಲಿ ತಮ್ಮ ‘ನಿವೃತ್ತಿ ಜೀವನ’ವನ್ನು ಮದ್ರಾಸಿನ ‘ಮೈಲಾಪುರ’ದಲ್ಲಿರುವ ತಮ್ಮ ಅಧಿಕೃತ ನಿವಾಸ ‘ಗಿರಿಜಾ’’ದಲ್ಲಿ ಕಳೆದಿದ್ದಾರೆ. ಕೊನೆಗೆ ರಾಧಾಕೃಷ್ಣನ್, 1975  ಏಪ್ರಿಲ್ 17 ರಂದು ಇಹಲೋಕದ ಯಾತ್ರೆಯನ್ನು ಮುಗಿಸಿದರು.

 

 

ಬಿರುದುಗಳು:

  • ಬ್ರಿಟನ್ ಆಕ್ಸ್ ಫಾರ್ಡ್ ವಿ.ವಿ. ಗೌರವ ಡಾಕ್ಟರೇಟ್ (1952 ),
  • ಅಮೇರಿಕ ಹಾರ್ವರ್ಡ್ ವಿ.ವಿ. ಗೌರವ ಡಾಕ್ಟರೇಟ್ (1953),
  • ಲಂಡನ್ ಪ್ರವಾಸದಲ್ಲಿದ್ದಾಗ “ಆರ್ಡರ್ ಆಫ್ ಮೆರಿನ್”ಪ್ರಶಸ್ತಿ,
  • ವ್ಯಾಟಿಕನ್ ಸಿಟಿ ಪೋಪ್ ಜಾನ್ ರಿಂದ “ನೈಟ್ ಆಫ್ ದ ಆರ್ಮಿ.
  • ಕೇಂದ್ರ ಸಾಹಿತ್ಯ ಅಕಾಡೆಮಿ ಫೆಲೋಶಿಪ್ -1968 ,
  • ಭಾರತೀಯ ವಿದ್ಯಾಭವನ “ಬ್ರಹ್ಮ ವಿದ್ಯಾ ಭಾಸ್ಕರ “ಬಿರುದು,
  • “ಟೆಂಪಲ್ಟನ್”ಪ್ರಶಸ್ತಿ 1972 ರಲ್ಲಿ.
  • “1954ರಲ್ಲಿ ಪ್ರತಿಷ್ಠಿತ ‘ಭಾರತ ರತ್ನ ಪ್ರಶಸ್ತಿ’’ ಗೌರವ