ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಏ.10ಕ್ಕೆ ತೀರ್ಮಾನ:ಸಿಎಂ

0
343

 
ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಗಳ ಮುಖಂಡರೊಂದಿಗೆ ಮುಖ್ಯಮಂತ್ರಿ ಗಳು ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಂಜೆ ಮುಖ್ಯಮಂತ್ರಿ ಗಳು ಮುಖಂಡರೊಂದಿಗೆ ಮಾತುಕತೆ ನಡೆಸಿದರು.
 
ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ, ವಿವಿಧ ಸಂಘಟನೆಗಳ ಮುಖಂಡರಾದ ನಾಯರ್, ವರಲಕ್ಷ್ಮಿ, ರಾಮಚಂದ್ರಪ್ಪ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.
 
 
ಅಂಗನವಾಡಿ ಸಿಬ್ಬಂದಿಯ ಬೇಡಿಕೆಗಳ ಬಗ್ಗೆ ಚರ್ಚಿಸಲು ಏಪ್ರಿಲ್ 19ರಂದು ಸಭೆ ಕರೆಯುವುದಾಗಿ ಈ ಮೊದಲು ತಿಳಿಸಲಾಗಿತ್ತು. ಅದಕ್ಕೂ ಮೊದಲೆ ಅಂದರೆ ಏಪ್ರಿಲ್ 10ರಂದೇ ಸಭೆ ಕರೆದು ಬೇಡಿಕೆಗಳ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಗಳು ಸಭೆಯಲ್ಲಿ ತಿಳಿಸಿದರು.
 
 
 
Anganwadiಅಂಗನವಾಡಿ ಸಿಬ್ಬಂದಿಯ ಬೇಡಿಕೆಗಳನ್ನು ಸರ್ಕಾರ ಸಹಾನುಭೂತಿಯಿಂದ ಪರಿಶೀಲಿಸುತ್ತದೆ ಎಂದರು. ಸರ್ಕಾರ ಕೊಟ್ಟ ಮಾತಿನ ಪ್ರಕಾರ ನಡೆದುಕೊಳ್ಳಲಿದೆ. ಸರ್ಕಾರದ ಮೇಲೆ ವಿಶ್ವಾಸ ಇಟ್ಟು ಪ್ರತಿಭಟನೆ ವಾಪಸ್ ಪಡೆದುಕೊಳ್ಳಿ ಎಂದು ಮನವಿ ಮಾಡಿದರು.
 
 
 
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಉಮಾಶ್ರೀ, ಸಂಘಟನೆಗಳ ಜಿಲ್ಲಾಧ್ಯಕ್ಷರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here