ಅಕ್ರಮ-ಸಕ್ರಮಕ್ಕೆ ಸುಪ್ರೀಂ ತಡೆ

0
216

ರಾಷ್ಟ್ರೀಯ ಪ್ರತಿನಿಧಿ ವರದಿ
ಅಕ್ರಮ-ಸಕ್ರಮ ಯೋಜನೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ಹಾಕಿದೆ. ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಪೀಠದಿಂದ ತಡೆಯಾಗಿದೆ.
 
 
ಯೋಜನೆ ಅರ್ಜಿಗಳ ಪ್ರಕ್ರಿಯೆಯನ್ನು ಮುಂದುವರಿಸಬಾರದು ಎಂದು ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿತ್ತು. ‘ನಮ್ಮ ಬೆಂಗಳೂರು ಫೌಂಡೇಷನ್’ ಸುಪ್ರೀಂ ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆಗೆ ಅಂಗೀಕರಿಸಿತ್ತು.
 
 
ಅರ್ಜಿದಾರರ ಪರ ಅಭಿಷೇಕ್ ಮನುಸಿಂಘ್ವಿ ವಾದ ಮಂಡನೆ ಮಾಡಿದ್ದರು. ಸುಪ್ರೀಂಕೋರ್ಟ್ ನಲ್ಲಿ ಇನ್ಮುಂದೆ ಸುದೀರ್ಘ ವಿಚಾರಣೆ ನಡೆಯಲಿದೆ. ಸಿಜೆಐ ಜೆ ಎಸ್ ಖೇಹರ್, ನ್ಯಾ ಚಂದ್ರಚೂಡ್ ಅವರ ಪೀಠ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ.
 
 
ಡಿ.13ರಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿತ್ತು. ಇದೀಗ ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.

LEAVE A REPLY

Please enter your comment!
Please enter your name here