" ಅಕ್ಷಯ ಧಾಮ" ಲೋಕಾರ್ಪಣೆ

0
530

 
ಮೂಡುಬಿದಿರೆ ಪ್ರತಿನಿಧಿ ವರದಿ
ಕಲ್ಲಬೆಟ್ಟು ಸೇವಾ ಸಹಕಾರಿ ಬ್ಯಾಂಕ್ (ನಿ.) ನ ನೂತನ ಕಟ್ಟಡ ಲೋಕಾರ್ಪಣೆ
ಮೂಡುಬಿದಿರೆ ಕಲ್ಲಬೆಟ್ಟು ಸೇವಾ ಸಹಕಾರಿ ಬ್ಯಾಂಕ್(ನಿ.)ನ ಸುವರ್ಣ ಮಹೋತ್ಸವ ಕಾರ್ಯಕ್ರಮ ಹಾಗೂ ಬ್ಯಾಂಕ್ ನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಶನಿವಾರ  ಸಂಜೆ ಬ್ಯಾಂಕಿನ ಆವರಣದಲ್ಲಿ ನಡೆಯಿತು.
 
 
kallabettu sahakari bank
 
ಬಲಿಪ ನಾರಾಯಣ ಭಾಗವತ ಅವರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ್ದಾರೆ. ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ನೂತನ ಕಟ್ಟಡ ” ಅಕ್ಷಯ ಧಾಮ”ವನ್ನು ಲೋಕಾರ್ಪಣೆಗೊಳಿಸಿದ್ದಾರೆ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಎಂ ಎನ್ ರಾಜೇಂದ್ರ ಕುಮಾರ್ ಅವರು ನೂತನ ಸಭಾಭವನವನ್ನು ಉದ್ಘಾಟಿಸಿದ್ದಾರೆ.
 
 
 
ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ ಅವರು ಭದ್ರತಾ ಕೋಶವನ್ನು ಉದ್ಘಾಟಿಸಿದರು. ಕಲ್ಲಬೆಟ್ಟು ಸೇವಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಕೆ ಕೃಷ್ಣರಾಜ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದಾರೆ.
 
 
 
ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಂಸದ ಕೆ ನಳಿನ್ ಕುಮಾರ್ ಕಟೀಲ್, ಮಾಜಿ ಸಂಸದ ಮತ್ತು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಶಿರ್ತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಲತಾ ಹೆಗ್ಡೆ, ದ.ಕ.ಜಿಲ್ಲಾ ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ದ.ಕ.ಜಿ.ಪಂ. ಸದಸ್ಯ ಸುಚರೀತ ಶೆಟ್ಟಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
 
 
ಕಲ್ಲಬೆಟ್ಟು ಸೇವಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಕೆ ಕೃಷ್ಣರಾಜ ಹೆಗ್ಡೆ ಅವರು ಅತಿಥಿಗಳನ್ನು ಸ್ವಾಗತಿಸಿದ್ದಾರೆ. ಈ ಸಂದರ್ಭದಲ್ಲಿ ಬ್ಯಾಂಕ್ ನ ಸಕ್ರಿಯ ಸದಸ್ಯರಿಗೆ, ಅತ್ಯುತ್ತಮ ರೈತರಿಗೆ, ಅತ್ಯುತ್ತಮ ಸ್ವಸಹಾಯ ಗುಂಪುಗಳಿಗೆ, ಅತ್ಯುತ್ತಮ ಹಾಲು ಉತ್ಪಾದಕರ ಸಂಘಟಗಳಿಗೆ ಮತ್ತು ಅತ್ಯುತ್ತಮ ಪಿಗ್ಮಿ ಸಂಗ್ರಹದ ಏಜಂಟರುಗಳನ್ನು ಸನ್ಮಾನಿಸಲಾಯಿತು.
 
 
ಕೊನೆಗೆ ವಿದ್ಯಾಮನೋಜ್ ಕಲಾನಿಕೇತನ, ಬೆಳ್ತಂಗಡಿ ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here