ಅಗ್ನಿಯ ರುದ್ರನರ್ತನ…

0
489

ರಾಷ್ಟ್ರೀಯ ಪ್ರತಿನಿಧಿ ವರದಿ
ಕೆಮಿಕಲ್ ಗೊಡೌನ್ ಗೆ ಭೀಕರ ಬೆಂಕಿಗೆ ಹೊತ್ತಿ ಉರಿದ ಘಟನೆ ಗುಜರಾತ್ ನ ಬರೂಚ್ ನಲ್ಲಿ ಜಿಲ್ಲೆಯಲ್ಲಿ ಸಂಭವಿಸಿದೆ. ಬೆಂಕಿಯ ಕೆನ್ನಾಲೆ ಅಕ್ಕಪಕ್ಕದ ಗ್ರಾಮಗಳಿಗೂ ಬೆಂಕಿ ಆವರಿಸಿದೆ.
 
 
 
ಭೀಕರ ಘಟನೆ ಹಿನ್ನೆಲೆಯಲ್ಲಿ 200ಕ್ಕೂ ಹೆಚ್ಚು ಗ್ರಾಮಸ್ಥರನ್ನು ಸ್ಥಳಾಂತರ ಮಾಡಲಾಗಿದೆ. ಬೆಂಕಿಯ ಕೆನ್ನಾಲಗೆಗೆ ಕೆಮಿಕಲ್ ಗೊಡೌನ್ ಭಸ್ಮವಾಗಿದೆ.
 
 
ಘಟನಾ ಸ್ಥಳಕ್ಕೆ 10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅಗ್ನಿ ದುರಂತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಲಾಗುತ್ತಿದೆಯಾದರೂ ಬೆಂಕಿ ದುರಂತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

LEAVE A REPLY

Please enter your comment!
Please enter your name here