ಅಗ್ನಿ ಅವಘಡ: 3 ಸಾವು

0
145

ರಾಷ್ಟ್ರೀಯ ಪ್ರತಿನಿಧಿ ವರದಿ
ರಾಷ್ಟ್ರರಾಜಧಾನಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇಂದು ಮುಂಜಾನೆ ಪೂರ್ವ ದೆಹಲಿಯ ಶಾಹ್ದರಾ ಪ್ರದೇಶದಲ್ಲಿರುವ ಮೋಹನ್ ಪಾರ್ಕ್ ಪ್ರದೇಶದಲ್ಲಿನ ಕಟ್ಟಡವೊಂದರಲ್ಲಿ ಬೆಂಕಿ ಅವಘಡ ನಡೆದಿದೆ.
 
 
ಘಟನೆಯಲ್ಲಿ ಮೂವರು ದುರ್ಮರಣ ಹೊಂದಿದ್ದು, 10 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಟ್ಟಡಕ್ಕೆ ಬೆಂಕಿ ಹೊತ್ತಿತ್ತಾದರೂ ನೋಡ ನೋಡುತ್ತಿದ್ದಂತೆಯೇ ಇಡೀ ಕಟ್ಟಡಕ್ಕೆ ಬೆಂಕಿ ತಗುಲಿದ್ದು, ಕೆಳಭಾಗದಲ್ಲಿದ್ದ 2 ಆಟೋಗಳಿಗೂ ಬೆಂಕಿ ತಗಲಿ ಎರಡೂ ವಾಹನಗಳು ಸಂಪೂರ್ಣ ಭಸ್ಮವಾಗಿವೆ.
 
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸೋ ಕಾರ್ಯ ನಡೆಸಿದ್ದಾರೆ. ಈವರೆಗೂ ಸುಮಾರು 10 ಮಂದಿ ಗಾಯಾಳುಗಳನ್ನು ರಕ್ಷಿಸಿದ್ದಾರೆ. ಅಂತೆಯೇ ಬೆಂಕಿಯನ್ನು ತಹಬದಿಗೆ ತರುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದು, ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here