ಅಗ್ನಿ ಅವಘಡ

0
292

 
ಬೆಂಗಳೂರು ಪ್ರತಿನಿಧಿ ವರದಿ
ಬೆಂಗಳೂರಿನಲ್ಲಿ ಮತ್ತೆ ಅಗ್ನಿ ಅವಘಡ ಸಂಭವಿಸಿದೆ. ಅವಿನ್ಯೂ ರಸ್ತೆಯಲ್ಲಿರುವ ಗೋದಾಮುಗಳಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ.
 
 
ಅವೆನ್ಯೂ ರಸ್ತೆಯ ದರ್ಗಾ ಮೈದಾನದಲ್ಲಿ ಶೆಡ್ ಮಾದರಿ ನಿರ್ಮಿಸಿರುವ ಆ್ಯಪಲ್ ಪೆಟ್ಟಿ ಗೋದಾಮಿಗೆ ಇಂದು ಮುಂಜಾನೆ ಬೆಂಕಿ ತಗುಲಿದ್ದು, ಬೆಂಕಿ ಕೆನ್ನಾಲಿಗೆ ಪಕ್ಕದಲ್ಲಿರುವ ಕೆಲಮನೆಗಳಿಗೆ ಮತ್ತು ಅಕ್ಕಪಕ್ಕದ ಅಂಗಡಿಗಳಿಗೂ ಹಬ್ಬಿದೆ.
 
 
ಕೂಡಲೇ ಸ್ಥಳಕ್ಕೆ ಆಗಮಿಸಿದ್ದ 5 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
 
 
ಹಣ್ಣುಗಳನ್ನು ಪ್ಯಾಕ್ ಮಾಡುವ ಆ್ಯಪಲ್ ಪೆಟ್ಟಿಯ ಮರದ ರಟ್ಟುಗಳನ್ನು ಇಲ್ಲಿ ಶೇಖರಿಸಿಡಲಾಗಿತ್ತು. ಈ ಹಿನ್ನಲೆಯಲ್ಲಿ ಬೆಂಕಿ ವ್ಯಾಪಕವಾಗಿ ಹರಡಿದೆ ಎಂದು ಹೇಳಲಾಗುತ್ತಿದೆ. ಅಗ್ನಿ ಅನಾಹುತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕೆಯಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here