ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತೆ ತರಗತಿ ಅಭ್ಯಾಸಕ್ಕೆ ಅವಕಾಶ

0
636

ವರದಿ: ಲೇಖಾ
ಪ್ರಸ್ತುತ ಸಾಲಿನಿಂದ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಮತ್ತೆ ತರಗತಿಗೆ ಸೇರಲು ಅವಕಾಶ ಕಲ್ಪಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದರು.
 
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ರಾಜ್ಯದಲ್ಲಿ 47 ಸಾವಿರ ಶಾಲೆಗಳಲ್ಲಿದ್ದು, ಬೆಂಗಳೂರು, ಕಲಬುರ್ಗಿ, ಬೆಳಗಾವಿ ವಿಭಾಗದ ಎಲ್ಲಾ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಮಾಡಲಾಗಿದ್ದು ಮೈಸೂರು ಭಾಗದ ಕೆಲವು ಜಿಲ್ಲೆಗಳಲ್ಲಿ ವಿತರಣೆ ಬಾಕಿ ಇದ್ದು ಆದಷ್ಟು ಬೇಗ ಸಮವಸ್ತ್ರ ವಿತರಿಸಲಾಗುವುದು ಮುಂದಿನ ವರ್ಷದಿಂದ ರಾಜ್ಯದ ಕೈಮಗ್ಗ ನಿಗಮದಿಂದ ಸಮವಸ್ತ್ರ ಖರೀದಿಸಲು ಚಿಂತಿಸಲಾಗಿದೆ ಎಂದರು.
 
 
ಯಾವುದೇ ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರನ್ನು ನಿಯೋಜಿಸಲಾಗುವುದು. ಅಲ್ಲದೆ, ವಿಷಯವಾರು ಶಿಕ್ಷಕರ ನೇಮಕಕ್ಕಾಗಿ ಕ್ರಮಕೈಗೊಳ್ಳಲಾಗುವುದು. ಶಿಕ್ಷಕರ ವರ್ಗಾವಣೆ ನೀತಿಯಲ್ಲಿ ಸ್ವಲ್ಪ ಗೊಂದಲಗಳಿದ್ದು ಅದನ್ನು ಸರಿಪಡಿವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಈ ತಿಂಗಳ ಅಂತ್ಯದೊಳಗೆ ವಿದ್ಯಾರ್ಥಿಗಳಿಗೆ, ಸೈಕಲ್ ವಿತರಣೆ, ಪುಸ್ತಕ ವಿತರಣೆ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
 
 
ಇಲಾಖೆಯಲ್ಲಿ ಬಾಕಿ ಉಳಿದಿರುವ ಕಡತಳ ವಿಲೇವಾರಿಗೆ ಸೂಚನೆ ನೀಡಿ ಆದೇಶ ಹೊರಡಿಸಲಾಗಿದೆ ರಾಜ್ಯದಲ್ಲಿ 22 ಸಾವಿರ ಶಿಕ್ಷಕರ ಕೊರತೆ ಇದ್ದು, ಮುಂದಿನ ಎರಡು ವರ್ಷಗಳಲ್ಲಿ ನಿವೃತ್ತರಾಗುವ ಶಿಕ್ಷಕರ ಸಂಖ್ಯೆಯನ್ನು ಆಧರಿಸಿ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಈ ವರ್ಷ 13 ಸಾವಿರ ಅತಿಥಿ ಶಿಕ್ಷಕರ ನೇಮಕಮಾಡಿಕೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

LEAVE A REPLY

Please enter your comment!
Please enter your name here