ಅಪ್ರಚೋದಿತ ಗುಂಡಿನ ದಾಳಿ

0
309

ರಾಷ್ಟ್ರೀಯ ಪ್ರತಿನಿಧಿ ವರದಿ
ಪಾಕ್ ಸೇನೆಯಿಂದ ಮತ್ತೆ ಕದನ ವಿರಾಮ ಉಲ್ಲಂಘನೆಯಾಗಿದೆ. ಜಮ್ಮು-ಕಾಶ್ಮೀರದ ಅಕ್ನೂರ್ ಸೆಕ್ಟರ್ ನಲ್ಲಿ ಮತ್ತೆ ಫೈರಿಂಗ್ ನಡೆದಿದೆ.  ಕಳೆದ 48 ಗಂಟೆಗಳಲ್ಲಿ 5ನೇ ಬಾರಿ ಕದನ ವಿರಾಮ ಉಲ್ಲಂಘನೆಯಾಗಿದೆ. ಪಾಕಿಸ್ತಾನ ಸೈನಿಕರಿಂದ ಅಪ್ರಚೋದಿತ ಗುಂಡಿನ ದಾಳಿ ನಡೆದಿದೆ.
 
ಹುತಾತ್ಮರಾದವರ ಸಂಖ್ಯೆ 19ಕ್ಕೆ ಏರಿಕೆ:
ಜಮ್ಮು-ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಉಗ್ರರ ದಾಳಿ ಪ್ರಕರಣದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಯೋಧ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.  ಚಿಕಿತ್ಸೆ ಫಲಿಸದೆ ನಾಯಕ್ ರಾಜಕಿಶೋರ್ ಸಿಂಗ್ ಸಾವನ್ನಪ್ಪಿದ್ದಾರೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.

LEAVE A REPLY

Please enter your comment!
Please enter your name here