ಅಮರನಾಥ್ ಯಾತ್ರಾರ್ಥಿಗಳು ಸುರಕ್ಷಿತ

0
528

ವರದಿ: ಲೇಖಾ
ಕಾಶ್ಮೀರದಲ್ಲಿ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನಲೆಯಲ್ಲಿ ಅಮರನಾಥ್ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪರಿಣಾಮ ಕರ್ನಾಟಕದಿಂದ ಯಾತ್ರೆಗೆ ಹೊರಟಿದ್ದ ಇನ್ನೂರಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
 
 
ಯಾತ್ರಾರ್ಥಿಗರು ಸರ್ಕಾರದ ಸಹಾಯ ಕೇಳಿದ ಹಿನ್ನಲೆಯಲ್ಲಿ ಯಾತ್ರಾರ್ಥಿಗಳ ನೆರವಿಗೆ ಸರ್ಕಾರ ಮೂವರು ಅಧಿಕಾರಿಗಳನ್ನು ನಿಯೋಜಿಸಿದ್ದು, ಯಾತ್ರಾರ್ಥಿಗಳನ್ನು ಸುರಕ್ಷಿತ ಪ್ರದೇಶಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ತಿಳಿದುಬಂದಿದೆ.
 
 
ಇತ್ತೀಚಿನ ಮಾಹಿತಿ ಪ್ರಕಾರ ಕ್ಯಾಂಪ್ ಗಳಲ್ಲಿ ಸುಮಾರು 200ಕ್ಕೂ ಹೆಚ್ಚು ಕರ್ನಾಟಕ ರಾಜ್ಯದ ಯಾರ್ತಾರ್ಥಿಗಳಿದ್ದಾರೆ. ಪ್ರಸ್ತುತ ಎಲ್ಲರೂ ಸುರಕ್ಷಿತರಾಗಿದ್ದಾರೆ. ಸೇನಾ ಸಿಬ್ಬಂದಿಗಳು ಯಾತ್ರಾರ್ಥಿಗಳನ್ನು ರಕ್ಷಣೆ ಮಾಡುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದ್ದು, ಜಮ್ಮು-ಕಾಶ್ಮೀರದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ದೆಹಲಿ ಕರ್ನಾಟಕ ಸ್ಥಳೀಯ ಆಯುಕ್ತ ಅತುಲ್ ತಿವಾರಿಯವರು ಹೇಳಿದ್ದಾರೆ.
 
 
 
ಸಹಾಯಕ್ಕಾಗಿ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಸಹಾಯವಾಣಿಯೊಂದನ್ನು ತೆರೆದಿದ್ದು, ಕರ್ನಾಟಕ ಭವನ ಅಥವಾ ನಿಯಂತ್ರಣ ಕೊಠಡಿ ಸಂಖ್ಯೆ 01942506479 ಮೂಲಕ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.
 
 
 
ಈ ಬಗ್ಗೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದು, ಸಮಸ್ಯೆ ಪೀಡಿತ ಪ್ರದೇಶದಿಂದ ರಾಜ್ಯದ ಯಾತ್ರಾರ್ಥಿಗಳನ್ನು ಸುರಕ್ಷಿತ ಪ್ರದೇಶಕ್ಕೆ ಕಳುಹಿಸುವಂತೆ ಹಾಗೂ ರಕ್ಷಣೆ ಕುರಿತಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಈಗಾಗಲೇ ಗೃಹ ಸಚಿವ ರಾಜನಾಥ ಸಿಂಗ್ ಅವರಿಗೆ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here