ಅರ್ಜಿ ಆಹ್ವಾನ

0
728

 
ಉಡುಪಿ ಪ್ರತಿನಿಧಿ ವರದಿ
ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2015-16ನೇ ಸಾಲಿನಲ್ಲಿ ಕುಟುಂಬದ ವಾರ್ಷಿಕ ವರಮಾನ ರೂ.2 ಲಕ್ಷಗಳಿಗಿಂತ ಕಡಿಮೆ ಇರುವ 20 ರಿಂದ 60 ವರ್ಷದ ವಯೋಮಾನದ ತೀವ್ರತರವಾದ ದೈಹಿಕ ವಿಕಲಚೇತನರಿಗೆ ಅನುಕೂಲವಾಗುವಂತೆ ದೈಹಿಕ ವಿಕಲಚೇತನರು ಉದ್ಯೋಗ ಕೈಗೊಳ್ಳಲು ಅಥವಾ ಅವರು ಉದ್ಯೋಗ ನಿರ್ವಹಿಸುವ ಸ್ಥಳಕ್ಕೆ/ ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ಕಾಲೇಜುಗಳಿಗೆ ಹೋಗಿ ಬರಲು ಜೀವಿತ ಕಾಲದಲ್ಲಿ ಒಬ್ಬ ಫಲಾನುಭವಿಗೆ ಒಂದು ಬಾರಿ ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ನೀಡಲಾಗುವುದು.
 
 
 
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಆಯಾ ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಿಗೆ ಮೇ 10 ರ ಒಳಗಾಗಿ ಸಲ್ಲಿಸುವುದು. ಆನ್ ಲೈನ್ ಮೂಲಕ ಅರ್ಜಿಗಳನ್ನು welfareofdisabled.kar.nic.in ವೆಬ್ ಸೈಟ್ ನಲ್ಲಿನ ಆನ್ ಲೈನ್ ಅಪ್ಲಿಕೇಷನ್ ಲಿಂಕ್ ನಲ್ಲಿ (Online Application Link) motorized Two Wheeler ನಲ್ಲಿ ಸಲ್ಲಿಸಬಹುದಾಗಿರುತ್ತದೆ.
 
 
 
ಹೆಚ್ಚಿನ ವಿವರಗಳಿಗೆ ನಿರ್ದೇಶಕರು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಬೆಂಗಳೂರುರವರನ್ನು ದೂರವಾಣಿ ಸಂಖ್ಯೆ 080-22866066/ 22860907 ರಲ್ಲಿ ಹಾಗೂ ಆಯಾ ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here