ಅರ್ಜಿ ಆಹ್ವಾನ

0
345

 
ಮ0ಗಳೂರು ಪ್ರತಿನಿಧಿ ವರದಿ
ಉದ್ಯೋಗ ಮತ್ತು ತರಬೇತಿ ಇಲಾಖೆಯು ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಆಗಸ್ಟ್-2016ನೇ ಶೈಕ್ಷಣಿಕ ಸಾಲಿನ ಪ್ರವೇಶ ಅರ್ಜಿಗಳನ್ನು ಆನ್-ಲೈನ್ ಮುಖಾಂತರ ಸಲ್ಲಿಸಲು ಸರಕಾರಿ ಅಧಿಸೂಚನೆ ಹೊರಡಿಸಲಾಗಿದ್ದು, ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಪ್ರವೇಶ ಬಯಸುವ ಆಸಕ್ತ ಅಭ್ಯರ್ಥಿಗಳು ಮೇ. 23 ರಿಂದ ಜೂನ್ 06 ರ ವರೆಗೆ ರಾಜ್ಯದ ಯಾವುದೇ ಪ್ರದೇಶದಿಂದ ಸಂಸ್ಥೆಯಲ್ಲಿ ಲಭ್ಯವಿರುವ ವಿವಿಧ ಕೋರ್ಸು/ವೃತ್ತಿಗಳಿಗೆ ಇಲಾಖೆಯ ವೆಬ್ ಸೈಟ್ www.emptrg.kar.nic.inಅಥವಾ www.detkarnataka.org.in ಮೂಲಕ on-line ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗಾಗಿ ಸರಕಾರಿ ಐಟಿಐ, ಕದ್ರಿಹಿಲ್ಸ್, ಮಂಗಳೂರು ಈ ಸಂಸ್ಥೆಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ:0824-2211285ರ ಮೂಲಕ ಸಂಪರ್ಕಿಸಬಹುದಾಗಿದೆ. on-line ಅರ್ಜಿ ಸಲ್ಲಿಸಲು ಅಭ್ಯಥಿಗಳಿಗೆ ಅನುಕೂಲವಾಗುವಂತೆ ಸಂಸ್ಥೆಯಲ್ಲಿ ಉಚಿತ ವ್ಯವಸ್ಥೆಗೊಳಿಸಲಾಗಿದೆ.
 
 
 
ಪ್ರತಿಷ್ಟಿತ ಶಾಲೆಗಳಿಗೆ ಸೇರಿಸಲು ಅರ್ಜಿ ಆಹ್ವಾನ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಾವಂತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಾರದಾ ಗಣಪತಿ ವಿದ್ಯಾಕೇಂದ್ರ, ಪದವಿಪೂರ್ವ ಕಾಲೇಜು, ನಗರ, ಕೈರಂಗಳ ಅಂಚೆ, ಬಂಟ್ವಾಳ ತಾಲೂಕು,
ಬಾಲವಿಕಾಸ, ಆಂಗ್ಲ ಮಾಧ್ಯಮ ಶಾಲೆ, ಬಸವನ ಗುಡಿ, ವಿಟ್ಲ.
ವಿಟ್ಲ ಜೆಸಿ ಆಂಗ್ಲ ಮಾಧ್ಯಮ ಶಾಲೆ, ಬಸವನ ಗುಡಿ, ವಿಟ್ಲ, ಬಂಟ್ವಾಳ
ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆ, ವಿದ್ಯಾಗಿರಿ, ಬಂಟ್ವಾಳ
ಶಾರದಾ ವಿದ್ಯಾಲಯ, ಕೊಡಿಯಾಲ್ಬೈಲ್, ಮಂಗಳೂರು,
ಮೇ. 31 ಅರ್ಜಿ ಸಲ್ಲಿಸಲು ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು , ಸಮಾಜ ಕಲ್ಯಾಣ ಇಲಾಖೆ, ದ.ಕ ಮಂಗಳೂರು, ದೂರವಾಣಿ ಸಂಖ್ಯೆ: 0824-2451237 ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here