ಅರ್ಜಿ ಆಹ್ವಾನ

0
144

 
ಮ0ಗಳೂರು ಪ್ರತಿನಿಧಿ ವರದಿ
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಯೋಜನೆಯಡಿ ಬ್ಯಾಂಕಿನಿಂದ ಸಾಲ ಪಡೆದು ಸ್ವಂತ ಉದ್ಯೋಗ ಕೈಗೊಳ್ಳಲು ಆರ್ಥಿಕವಾಗಿ ಹಿಂದುಳಿದ 18 ರಿಂದ 45 ವರ್ಷ ವಯೋಮಿತಿಯ ಹಾಗೂ ಕುಟುಂಬದ ವಾರ್ಷಿಕ ಆದಾಯ ರೂ.40,000/-ಕ್ಕೆ ಮೀರದ ಮಹಿಳೆಯರಿಂದ 2016-17ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ.
 
 
ಉದ್ಯಮವನ್ನು ಪ್ರಾರಂಭಿಸಲು ಆಸಕ್ತಿ ಇರುವ ಮಹಿಳೆಯರು ಅರ್ಜಿಯನ್ನು ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆದು ಜುಲೈ 15ರೊಳಗಾಗಿ ದ್ವಿ-ಪ್ರತಿಯಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಉಪನಿರ್ದೇಶಕರ ಕಛೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ ಕೊಟ್ಟಾರ ಮಂಗಳೂರು ಇವರನ್ನು ಕಛೇರಿಯ ಸಮಯದಲ್ಲಿ ಅಥವಾ ದೂರವಾಣಿ ಸಂಖ್ಯೆ:0824-2458173ನ್ನು ಸಂಪರ್ಕಿಸಬಹದು.

LEAVE A REPLY

Please enter your comment!
Please enter your name here