ಅರ್ಜಿ ಆಹ್ವಾನ

0
470

 
ಮ0ಗಳೂರು ಪ್ರತಿನಿಧಿ ವರದಿ
ಕೇಂದ್ರ ಸರ್ಕಾರದಿಂದ ನೀಡಲ್ಪಡುವ 2016 ನೇ ಸಾಲಿನ ನಾರಿಶಕ್ತಿ ಪುರಸ್ಕಾರಕ್ಕಾಗಿ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಪುರಸ್ಕಾರವನ್ನು ಮಹಿಳೆಯರು ಸಾಮಾಜಿಕ ಅಭಿವೃದ್ಧಿ ಕಾರ್ಯದಲ್ಲಿ ಉನ್ನತ ಮಟ್ಟದ ವೈಯಕ್ತಿಕ ಧೈರ್ಯ ಸ್ಥೈರ್ಯಗಳೊಂದಿಗಿನ ಸಾಧನೆಗಾಗಿ ಈ ಕೆಳಗಿನ ಐತಿಹಾಸಿಕ ಸಾಧನೆ ಮಾಡಿದ ಮಹಿಳೆಯರ ಹೆಸರಿನಲ್ಲಿ 6 ಪ್ರಶಸ್ತಿಗಳನ್ನು ರಾಷ್ಟ್ರಮಟ್ಟದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ದಿನದಂದು ನೀಡಲಾಗುತ್ತದೆ.
 
ಪ್ರಶಸ್ತಿ ಬಗ್ಗೆ ನೀಡಲಾದ ಮಾರ್ಗಸೂಚಿಯಂತೆ ಮಹಿಳಾ ಸಬಲೀಕರಣ, ಮಹಿಳೆಯರ ಅಭಿವೃದ್ಧಿ ವಿಷಯಗಳಿಗೆ ಸಂಬಂಧಿಸಿ ಸಂಶೋಧನೆ ಮತ್ತು ಇನ್ನಿತರ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟವಾದ ಕಾರ್ಯಸಾಧನೆ ಮಾಡಿರಬೇಕು. ಪ್ರಶಸ್ತಿಯು ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ಒಳಗೊಂಡಿರುತ್ತದೆ. ಅತ್ಯಾಚಾರ/ಹಿಂಸೆ/ದೌರ್ಜನ್ಯಗಳ ವಿರುದ್ಧ ಧೈರ್ಯ-ಸ್ಥೈರ್ಯ ಪ್ರದರ್ಶನ. ಹಾಗೂ ಮಹಿಳಾ ಹೋರಾಟ/ಸಮುದಾಯದ ಕೆಲಸ/ಮಹಿಳಾ ಅಧಿಕಾರಕ್ಕಾಗಿ ಹೋರಾಟ ನಡೆಸಿದ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.
 
ಅರ್ಜಿಯೊಂದಿಗೆ ಸಾಧನೆಗಳ ದಾಖಲೆಗಳ ಪ್ರಸ್ತಾವನೆಯನ್ನು ದ್ವಿ-ಪ್ರತಿಗಳಲ್ಲಿ ಆಂಗ್ಲ ಭಾಷೆಯಲ್ಲಿ ಜುಲೈ 30ರೊಳಗೆ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯತ್ ಸಂಕೀರ್ಣ, ಉರ್ವಾಸ್ಟೋರ್, ಮಂಗಳೂರು-575006 ಇಲ್ಲಿಗೆ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0824-2451254 ನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here