ಅರ್ಜಿ ಆಹ್ವಾನ

0
2530

 
ಉಡುಪಿ ಪ್ರತಿನಿಧಿ ವರದಿ
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಿಂದ 2016-17ನೇ ಸಾಲಿಗೆ ಸ್ವಯಂ ಉದ್ಯೋಗ, ಹೈನುಗಾರಿಕೆ, ಉದ್ಯಮಶೀಲತಾ ಅಭಿವೃದ್ಧಿ, ಮೈಕ್ರೋ ಕ್ರೆಡಿಟ್ (ಕಿರುಸಾಲ), ಭೂ ಒಡೆತನ, ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಕೊಳವೆ ಬಾವಿ/ ತೆರೆದ ಬಾವಿ/ ಏತ ನೀರಾವರಿ ಯೋಜನೆ ಯೋಜನೆಗಳ ಮೂಲಕ ಆರ್ಥಿಕ ನೆರವು ಪಡೆಯಲು, ಏಪ್ರಿಲ್ 1 ರಿಂದ ಪರಿಶಿಷ್ಟ ಪಂಗಡದವರಿಂದ ಅರ್ಜಿಗಳನ್ನು ಕರೆಯಲಾಗಿದೆ.
 
ಆಸಕ್ತಿಯುಳ್ಳವರು ಮೇಲ್ಕಂಡ ಯೋಜನೆಗಳ ಮಾಹಿತಿ ಹಾಗೂ ಅರ್ಜಿಗಳನ್ನು ನಿಗಮದ ವೆಬ್ ಸೈಟ್ www.karnataka.gov.in/kmvstdcl/pages/home.aspx ಪ್ರಕಟಣೆ ಮೆನುವಿನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ, ಬಿ ಬ್ಲಾಕ್, 2ನೇ ಮಹಡಿ, ಕೊಠಡಿ ಸಂಖ್ಯೆ 302, ಜಿಲ್ಲಾ ಕಛೇರಿಗಳ ಸಂಕೀರ್ಣ, ರಜತಾದ್ರಿ ಮಣಿಪಾಲ. 576104. ಇವರಿಂದ ಉಚಿತವಾಗಿ ಪಡೆಯಬಹುದು. ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಏಪ್ರಿಲ್ 30 ರೊಳಗಾಗಿ ಮುದ್ದಾಂ ಅಥವಾ ಅಂಚೆಯ ಮೂಲಕ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
 
ಜಾತಿ ಪ್ರಮಾಣ ಪತ್ರ ಹಾಗೂ ಪಡಿತರ ಚೀಟಿಯನ್ನು ಭರ್ತಿ ಮಾಡಿದ ಅರ್ಜಿಯೊಂದಿಗೆ ಕಡ್ಡಾಯವಾಗಿ ಸಲ್ಲಿಸಬೇಕು ಇಲ್ಲವಾದಲ್ಲಿ ಸೂಚನೆ ನೀಡದೆ ಅರ್ಜಿಯನ್ನು ತಿರಸ್ಕರಿಸಲಾಗುವುದು.
ಸಲ್ಲಿಸಿದ ಅರ್ಜಿಯನ್ನು ಆಯಾ ವಿಧಾನಸಭಾ ಕ್ಷೇತ್ರದ ಆಯ್ಕೆ ಸಮಿತಿ ಸಭೆಯಲ್ಲಿ ಮಂಡಿಸಲಾಗುವುದು. ಸಮಿತಿಯಿಂದ ಆಯ್ಕೆಯಾದ ಅರ್ಜಿದಾರರು ಆಯಾ ಯೋಜನೆಗಳಿಗೆ ಸಂಬಂಧಪಟ್ಟ ಉಳಿದ ದಾಖಲೆಗಳನ್ನು ನಂತರ ಸಲ್ಲಿಸಬೇಕಾಗುತ್ತದೆ. ಈ ಬಗ್ಗೆ ಜಿಲ್ಲಾ ಕಛೇರಿಯಿಂದ ಮಾಹಿತಿ ನೀಡಲಾಗುವುದು ಎಂದು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಇಲಾಖಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here