ವಾರ್ತೆ

ಅವಕಾಶಗಳ ಸದ್ಬಳಕೆಯಿಂದ ಬೆಳವಣಿಗೆ ಸಾಧ್ಯ

 
ಉಜಿರೆ ಪ್ರತಿನಿಧಿ ವರದಿ
ಕಾಲೇಜು ಶಿಕ್ಷಣದ ಸಮಯದಲ್ಲಿ ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಲು ವಿದ್ಯಾರ್ಥಿಗಳು ಇರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶ್ರೀ.ಧ.ಮಂ.ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಪ್ರಸ್ತುತ ಮಂಗಳೂರಿನ ಸರಕಾರಿ ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ.ಪುರುಷೋತ್ತಮ ಭಟ್ ಕರೆ ನೀಡಿದರು.
 
 
ಪ್ರೊ.ಪುರುಷೋತ್ತಮ ಭಟ್ ಅವರು ಉಜಿರೆಯ ಶ್ರೀ.ಧ.ಮಂ.ಕಾಲೇಜಿನ ಅರ್ಥಶಾಸ್ತ್ರ ಸಂಘದ ವತಿಯಿಂದ ಆಯೋಜಿತವಾದ ಹಿರಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿಮಾತನಾಡುತ್ತಿದ್ದರು. ಅಧ್ಯಯನದೊಂದಿಗೆ ಉತ್ತಮ ಹವ್ಯಾಸಗಳು ನಮ್ಮ ಸಾಮರ್ಥ್ಯವನ್ನು ಕಂಡುಕೊಳ್ಳಲು ಹಾಗೂ ಹೆಚ್ಚಿಸಲು ಸಹಕಾರಿಯಾಗಿದೆ ಎಂದು ತಿಳಿಸಿದರು.
 
 
 
ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಭಾಸ್ಕರ ಹೆಗ್ಡೆ ಅವರು ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎ.ಜಯ ಕುಮಾರ ಶೆಟ್ಟಿ ಹಾಗೂ ಪ್ರಾಧ್ಯಪಕ ಗಣರಾಜ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Vaarte Editor Administrator
Sorry! The Author has not filled his profile.
×
Vaarte Editor Administrator
Sorry! The Author has not filled his profile.
Latest Posts

Comment here