ಅಹೋರಾತ್ರಿ ಉಪವಾಸ ಸತ್ಯಾಗ್ರಹ

0
471

ಬೆಂಗಳೂರು ಪ್ರತಿನಿಧಿ ವರದಿ
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಅಹೋರಾತ್ರಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.
 
 
 
ಸುಪ್ರೀಂಕೋರ್ಟ್ ಆದೇಶ ವಿರೋಧಿಸಿ ಹೋರಾಟ ನಡೆಸುತ್ತಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಉಪವಾಸಕ್ಕೂ ಮುನ್ನ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
 
 
ಬಸವನಗುಡಿಯಲ್ಲಿರುವ ಕಾರಂಜಿ ಆಂಜನೇಯ ದೇವಸ್ಥಾನ, ಕೆ ಆರ್ ರಸ್ತೆಯ ಕೋಟೆ ವೆಂಕಟರಮಣ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ. ರಾಜ್ಯಕ್ಕೆ ಒಳ್ಳೆಯ ಮಳೆ, ಬೆಳೆಯಾಗಲಿ ಎಂದು ಪಾರ್ಥನೆ ಸಲ್ಲಿಸಿದ್ದಾರೆ. ಬಳಿಕ ವಿಧಾನಸೌಧ ಬಳಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಾರೆ. ಬಳಿಕ ಆಹೋರಾತ್ರಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ದೇವೇಗೌಡರಿಗೆ ಎಂ ಎಲ್ ಸಿ ಟಿ.ಎ ಶರವಣ ಸಾಥ್ ನೀಡಿದ್ದಾರೆ.

LEAVE A REPLY

Please enter your comment!
Please enter your name here