ಅ.6ಕ್ಕೆ ವಿಚಾರಣೆ ಮುಂದೂಡಿಕೆ

0
241

ರಾಷ್ಟ್ರೀಯ ಪ್ರತಿನಿಧಿ ವರದಿ
ಕಾವೇರಿ ವಿವಾದದ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಾಯವಾಗುತ್ತಿದೆ. ತಮಿಳುನಾಡಿಗೆ ನೀರು ಹರಿಸಲು ಮತ್ತೆ ಸುಪ್ರೀಂಕೋರ್ಟ್ ಆದೇಶಿಸಿದೆ.
 
 
ಅ.1ರಿಂದ ಅ.6ರವರೆಗೂ ನೀರು ಹರಿಸುವಂತೆ ಸೂಚನೆ ನೀಡಲಾಗಿದೆ. ಪ್ರತಿನಿತ್ಯ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
 
 
ಸುಪ್ರೀಂಕೋರ್ಟ್ ನ ದ್ವಿಸದಸ್ಯ ನ್ಯಾ.ದೀಪಕ್ ಮಿಶ್ರಾ, ನ್ಯಾ.ಉದಯ್ ಲಲಿತ್ ಪೀಠ ಮತ್ತೆ 36 ಸಾವಿರ ಕ್ಯೂಸೆಕ್ ನೀರು ಹರಿಸಿ ಎಂದು ಆದೇಶ ನೀಡಿದೆ.
 
 
ಮಂಡಳಿ ರಚನೆಗೆ ಆದೇಶ
ಮಂಗಳವಾರದೊಳಗೆ ಮಂಡಳಿ ರಚನೆಗೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ. ಇದಕ್ಕೆ ಕೇಂದ್ರ ಸರ್ಕಾರ ಮೂರು ದಿನಗಳಲ್ಲಿ ಕಾವೇರು ನೀರು ನಿರ್ವಹಣಾ ಮಂಡಳಿ ರಚಿಸುತ್ತೇವೆ ಎಂದು ಸುಪ್ರೀಂಕೋರ್ಟ್ ಗೆ ಹೇಳಿದೆ.
 
 
ನಾಳೆ ಸಂಜೆ 4ರೊಳಗೆ ಪ್ರತಿನಿಧಿಗಳ ವಿವರ ಕೊಡಬೇಕು. ಆಯಾ ರಾಜ್ಯಗಳ ಸರ್ಕಾರಗಳು ವಿವರವನ್ನು ಉಭಯ ರಾಜ್ಯಗಳು ಕೇಂದ್ರ ಸರ್ಕಾರಕ್ಕೆ ನೀಡಬೇಕು ಎಂದು ಕೋರ್ಟ್ ಹೇಳಿದೆ.
 
 
ಸುಪ್ರೀಂಕೋರ್ಟ್ ಮುಂದಿನ ವಿಚಾರಣೆಯನ್ನು ಗುರುವಾರ ಅಂದರೆ ಅಕ್ಟೋಬರ್ 6 ಮಧ್ಯಾಹ್ನ 2ಗಂಟೆಗೆ ಮುಂದೂಡಲಾಗಿದೆ.
 
 
ಎಲ್ಲಾ ರಾಜ್ಯಗಳು ಸುಪ್ರೀಂಕೋರ್ಟ್ ನ ಆದೇಶ ಪಾಲಿಸಲೇಬೇಕು. ಅದರಲ್ಲಿ ದೇಶದ ರಾಜ್ಯಗಳ ಪೈಕಿ ಕರ್ನಾಟಕವೂ ಒಂದು ಎಂದು ಸುಪ್ರೀಂ ಹೇಳಿದೆ.

LEAVE A REPLY

Please enter your comment!
Please enter your name here