ಆಂಧ್ರದ ನೀರಿನಲ್ಲಿಯೇ ಹಂಚಿಕೊಳ್ಳಿ

0
456

ರಾಷ್ಟ್ರೀಯ ಪ್ರತಿನಿಧಿ ವರದಿ
ನಾಲ್ಕು ರಾಜ್ಯಗಳಲ್ಲಿ ವಿವಾದಕ್ಕೆ ಕಾರಣವಾಗಿದ್ದ ಕೃಷ್ಣಾ ನದಿ ನೀರಿನ ಹಂಚಿಕೆ ಸಂಬಂಧ ಕೃಷ್ಣಾ ನ್ಯಾಯಾಧಿಕರಣ ಮಹತ್ವದ ತೀರ್ಪು ನೀಡಿದೆ. ತೆಲಂಗಾಣ ರಾಜ್ಯ ಆಂಧ್ರ ಪ್ರದೇಶದೊಂದಿಗೆ ನೀರು ಹಂಚಿಕೆ ಮಾಡಿಕೊಳ್ಳಬೇಕು ಎಂದು ಆದೇಶಿಸಿದೆ.
 
 
ಆಂಧ್ರಕ್ಕೆ ಹಂಚಿಕೆಯಾದ ನೀರನ್ನೇ ತೆಲಂಗಾಣಕ್ಕೂ ಹಂಚಿಕೆ ಮಾಡಬೇಕು ಎಂದು ಕೃಷ್ಣ ನ್ಯಾಯಾಧಿಕರಣದಿಂದ ಮಹತ್ವದ ತೀರ್ಪು ಹೊರಬಿದ್ದಿದೆ. ಯೋಜನಾವಾರು ನೀರು ಹಂಚಿಕೆ ಸಾಧ್ಯವಿಲ್ಲ ಎಂದು ಟ್ರಿಬ್ಯುನಲ್ ಹೇಳಿದೆ. ತೆಲಂಗಾಣಕ್ಕೆ ಪ್ರತ್ಯೇಕವಾಗಿ ನೀರು ಹಂಚಿಕೆ ಸಾಧ್ಯವಿಲ್ಲ ಎಂದು ನ್ಯಾಯಾಧಿಕಾರಣ ಆದೇಶಿಸಿದೆ.
 
 
2013ರಲ್ಲಿ ನೀಡಿದ್ದ ಕೃಷ್ಣಾ ನದಿ ಐ ತೀರ್ಪನ್ನು ಬದಲಾವಣೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ಆಂಧ್ರ ಪ್ರದೇಶ ರಾಜ್ಯಕ್ಕೆ ಹಂಚಿಕೆ ಮಾಡಲಾಗಿರುವ ನೀರಲ್ಲೇ ತೆಲಂಗಾಣ ರಾಜ್ಯ ಕೂಡ ಹಂಚಿಕೆ ಮಾಡಿಕೊಳ್ಳಬೇಕು ಎಂದು ಆದೇಶಿಸಿದೆ. ಯೋಜನಾವಾರು ನೀರು ಹಂಚಿಕೆ ಮಾಡುವಂತೆ ತೆಲಂಗಾಣ ರಾಜ್ಯ ಸಲ್ಲಿಸಿದ್ದ ಅರ್ಜಿಯ ಇತ್ಯರ್ಥ ಪಡಿಸಿದ ಕೃಷ್ಣಾ ನ್ಯಾಯಾಧಿಕರಣದ ಅಧ್ಯಕ್ಷ ನ್ಯಾ.ಬ್ರಿಜೇಶ್ ಕುಮಾರ್ ಅವರು, ತೆಲಂಗಾಣಕ್ಕಾಗಿ ಐ ತೀರ್ಪನ್ನು ಮರು ಪರಿಶೀಲಿಸುವ ಅಗತ್ಯವಿಲ್ಲ. ಹೀಗಾಗಿ ಈ ಹಿಂದೆ ಆಂಧ್ರ ಪ್ರದೇಶಕ್ಕೆ ಹಂಚಿಕೆ ಮಾಡಲಾಗಿರುವ ನೀರಲ್ಲೇ ತೆಲಂಗಾಣಕ್ಕೂ ನೀರು ಬಿಡುಗಡೆ ಮಾಡಬೇಕು ಎಂದು ಹೇಳಿದೆ.
ನ್ಯಾಯಾಧಿಕರಣದ ತೀರ್ಪಿನಿಂದಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ದೊಡ್ಡ ರಿಲೀಫ್ ಸಿಕ್ಕಿದ್ದು, ಮಹಾರಾಷ್ಟ್ರ ಮತ್ತು ಕರ್ನಾಟಕ ಪಾಲಿನ ನೀರಿನ ಹಂಚಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ನ್ಯಾಯಾಧಿಕರಣ ಹೇಳಿದೆ.

LEAVE A REPLY

Please enter your comment!
Please enter your name here