ಬೆಂಗಳೂರು ಪ್ರತಿನಿಧಿ ವರದಿ
ಬೆಂಗಳೂರಿನ ಕೋರಮಂಗಲದಲ್ಲಿರುವ ಹೋಟೆಲ್ ನಲ್ಲಿ ಆಕಸ್ಮಿಕ ಅಗ್ನಿ ಕಾಣಿಸಿಕೊಂಡಿದೆ. ಇಂದು ಬೆಳಗ್ಗೆ ಪಂಜಾಬಿ ಬೈ ನೇಚರ್ ಹೋಟೆಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಹೊಗೆ ಹೋಗುವ ಚಿಮಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಚಿಮಣಿಯಲ್ಲಿ ಹೊತ್ತಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಕೋರಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.