ಆಡಳಿತ ಟ್ರಸ್ಟಿಗಳ ಭೇಟಿ

0
172

ವರದಿ: ಶ್ಯಾಮ್ ಪ್ರಸಾದ್, ಬದಿಯಡ್ಕ
ನೆಲ್ಲಿಕುಂಜೆ ಶ್ರಿ ವಿಷ್ಣುಮೂರ್ತಿ ಕ್ಷೇತ್ರಕ್ಕೆ ಕುಕ್ಕೆ ಸುಬ್ರಹ್ಮಣ್ಯದ ಆಡಳಿತ ಟ್ರಸ್ಟಿ ಮಹೇಶ್ ಕುಮಾರ್ ಕರಿಕ್ಕಳ ಇತ್ತೀಚೆಗೆ ಭೇಟಿ ನೀಡಿ ಜೀರ್ಣೋದ್ಧಾರ ಕಾಮಗಾರಿಯನ್ನು ವೀಕ್ಷಿಸಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
 
 
ಜೀರ್ಣೋದ್ಧಾರ ಸಮಿತಿಯ ಸದಸ್ಯರ ಜೊತೆ ಸಮಾಲೋಚನೆ ನಡೆಸಿ ಕ್ಷೇತ್ರಗಳ ಜೀರ್ಣೋದ್ಧಾರ ಕಾರ್ಯದಲ್ಲಿ ಅನುಸರಿಸಬೇಕಾದ ಯೋಗ್ಯರೀತಿ, ನೀತಿಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಿಂದ ಎಲ್ಲ ರೀತಿಯ ಸಹಕಾರಗಳನ್ನು ನೀಡುವುದಾಗಿ ಭರವಸೆಯನ್ನಿತ್ತರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಮಾನಾಥ ರೈ ಮೇಗಿನಕಡಾರು, ಸೇವಾಸಮಿತಿ ಅಧ್ಯಕ್ಷ ನೆಲ್ಲಿಕುಂಜೆ ಸತೀಶ್ ರಾವ್, ಕಾರ್ಯದರ್ಶಿ ಮಹೇಶ ಗುತ್ತು, ಖಜಾಂಜಿ ಜಿ.ಕೆ.ಶರ್ಮ ಸರವು ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here