ಆಡಿಟೋರಿಯಂ ಧಗಧಗ

0
224

 
ನವದೆಹಲಿ ಪ್ರತಿನಿಧಿ ವರದಿ
ದೆಹಲಿಯ ಆಡಿಟೋರಿಯಂನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸೋಮವಾರ ರಾತ್ರಿ 1.45 ಗಂಟೆಗೆ ಮಂಡಿ ಹೌಸ್ ಪ್ರದೇಶದಲ್ಲಿರುವ ಎಫ್​ಐಸಿಸಿಐ ಕಟ್ಟಡದ ಆಡಿಟೋರಿಯಂನಲ್ಲಿ ಭಾರೀ ಅಗ್ನಿ ಸಂಭವಿಸಿದ್ದು, ಆಡಿಟೋರಿಯಂನ ಮೊದಲ ಮಹಡಿಯಿಂದ ಇಡೀ ಕಟ್ಟಡಕ್ಕೆ ಬೆಂಕಿ ವ್ಯಾಪಿಸಿದೆ.
 
 
 
ಘಟನಾ ಸ್ಥಳಕ್ಕೆ ದೌಡಾಯಿಸಿದ್ದ 10 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಸುಮಾರು ನಾಲ್ಕು ಗಂಟೆ ಕಾರ್ಯಾಚರಣೆ ನಂತರ ಬೆಂಕಿ ತಹಬದಿಗೆ ಬಂದಿದೆ.
 
 
ಸದ್ಯ ಬೆಂಕಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಘಟನೆಯಲ್ಲಿ ಇಬ್ಬರು ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಗಂಭೀರ ಗಾಯಗಳಾಗಿದ್ದು, ಗಾಯಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
 
 
 
ಇದೇ ಕಟ್ಟಡದ ಮೊದಲ ಮಹಡಿಯಲ್ಲಿದ್ದ ನ್ಯಾಷನಲ್ ಮ್ಯೂಸಿಯಂಗೂ ಬೆಂಕಿ ತಗುಲಿದೆ. ಬೆಂಕಿಯ ಕೆನ್ನಾಲಿಗೆಗೆ ಅಪರೂಪದ ವಸ್ತುಗಳು ಸುಟ್ಟು ಹೋಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 
 
ಬೆಂಕಿ ಅವಘಡ ಸಂಭವಿಸಿದಾಗ ಕಟ್ಟಡದಲ್ಲಿ ಅಷ್ಟೊಂದು ಜನ ಇರಲಿಲ್ಲ. ಮಾತ್ರವಲ್ಲ ಬೆಂಕಿ ಹಬ್ಬತ್ತಿದ್ದಂತೆ ಅಲ್ಲಿದ್ದ ಜನರನ್ನು ಸುರಕ್ಷಿತ ಸ್ಥಾನಗಳಿಗೆ ಕರೆದೊಯ್ಯಲಾಗಿತ್ತು. ಅಗ್ನಿ ಅವಘಡ ಸಂಭವಿಸಲು ಕಾರಣ ಏನೆಂದು ತಿಳಿದು ಬಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

LEAVE A REPLY

Please enter your comment!
Please enter your name here