ಆನೆ ತುಳಿತಕ್ಕೆ ಕಾವಲುಗಾರ ಸಾವು

0
262

ರಾಮನಗರ ಪ್ರತಿನಿಧಿ ವರದಿ
ಆನೆ ತುಳಿತಕ್ಕೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ರಾಮನಗರ ಜಿಲ್ಲೆಯ ಮಾಗಡಿ ಭಂಟರಕುಪ್ಪೆ ಹೊರವಲಯದಲ್ಲಿ ಸಂಭವಿಸಿದೆ.
 
 
ಆನೆ ತುಳಿತಕ್ಕೆ ಅರಣ್ಯ ಇಲಾಖೆ ಕಾವಲುಗಾರ ಪಂಚಲಿಂಗಯ್ಯ ಸಾವನ್ನಪ್ಪಿದ್ದಾರೆ. ಆನೆಯನ್ನು ಕಾಡಿಗಟ್ಟುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
 
ಅರಣ್ಯ ಇಲಾಖೆ ನಿರ್ಲಕ್ಷ್ಯ ಖಂಡಿಸಿ ಅತ್ತಿಂಗೆರೆ ಬಳಿ ಧರಣಿ ನಡೆಸುತ್ತಿದ್ದಾರೆ. ರಾಮನಗರ-ಮಾಗಡಿ ರಸ್ತೆಯಲ್ಲಿ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳೀಯರು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here